ಹಿರಿಯ ನಾಗರಿಕರ ಆಶಯ ಗೌರವಿಸೋಣ: ಜಿಲ್ಲಾಧಿಕಾರಿ ಕವಿತಾ

KannadaprabhaNewsNetwork |  
Published : Sep 19, 2025, 01:01 AM IST
16ಎಚ್‌ ಪಿಟಿ3-ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪೂರ್ವಸಿದ್ಧತಾ ಸಭೆಯಲ್ಲಿ ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಪೋಸ್ಟರ್‌ ಬಿಡುಗಡೆಗೊಳಿಸಿದರು. | Kannada Prabha

ಸಾರಾಂಶ

ಹಿರಿಯ ನಾಗರಿಕರಲ್ಲಿ ನವಚೈತನ್ಯ ಮೂಡಿಸಲು ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆ ಆಯೋಜಿಸಿ ಅವರ ಭಾಗವಹಿಸುವಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕು.

ಸೆ.20ರಂದು ಹಿರಿಯ ನಾಗರಿಕರಿಗೆ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ ಆಯೋಜನೆಕನ್ನಡಪ್ರಭ ವಾರ್ತೆ ಹೊಸಪೇಟೆ

ಹಿರಿಯ ನಾಗರಿಕರಲ್ಲಿ ನವಚೈತನ್ಯ ಮೂಡಿಸಲು ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆ ಆಯೋಜಿಸಿ ಅವರ ಭಾಗವಹಿಸುವಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಅ. 9 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಸೂಕ್ತ ಕ್ರಮ ವಹಿಸಬೇಕು. ಜಿಲ್ಲಾ ಮಟ್ಟದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಸೆ.20 ರಂದು ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಅಚ್ಚುಕಟ್ಟಾಗಿ ಆಯೋಜಿಸಿ. ಕ್ರೀಡೆಗಳಲ್ಲಿ ಮ್ಯೂಸಿಕಲ್ ಚೇರ್, ಬಿರುಸಿನ ನಡಿಗೆ, ಬಕೆಟ್ ನಲ್ಲಿ ಬಾಲ್ ಎಸೆಯುವುದು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗಾಯನ, ಏಕಪಾತ್ರಾಭಿನಯ ಕಾರ್ಯಕ್ರಮಗಳಲ್ಲಿ ಹಿರಿಯ ನಾಗರಿಕರು ಕ್ರೀಡಾ ಮನೋಭಾವದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ ನಿಮ್ಮ ಆಶಯದಂತೆ ದಿನಾಚರಣೆಯನ್ನು ಆಚರಿಸೋಣ ಎಂದರು.

ಸಭೆಯಲ್ಲಿ ಹಿರಿಯ ನಾಗರಿಕರೊಬ್ಬರು ಮಾತನಾಡಿ, ಚೆಸ್ ಮತ್ತು ಕೇರಂ ಬೋರ್ಡ್ ಹಾಗೂ ವೃದ್ಧಾಪ್ಯದ ಅನುಭವ ಮತ್ತು ಸಂಕಷ್ಟಗಳ ಕುರಿತು ಪ್ರಬಂಧ ಸ್ಪರ್ಧೆ ಆಯೋಜಿಸುವಂತೆ ಆಗ್ರಹಿಸಿದರು. ಕೂಡಲೇ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಹಿರಿಯ ನಾಗರಿಕರ ಆಶಯಗಳು ಗೌರವಿಸಿ ಚೆಸ್, ಕೇರಂ ಮತ್ತು ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲು ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ವೇತಾ, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ರಾಮಾಂಜನೇಯ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

PREV

Recommended Stories

ಸಹಕಾರಿ ತತ್ವದಿಂದ ಕಟ್ಟಕಡೆ ವ್ಯಕ್ತಿಗೂ ಸಹಾಯ
ವೀರಶೈವ ಲಿಂಗಾಯತರಲ್ಲಿ ಸಮಾಜ ಒಗ್ಗಟ್ಟು ಮುಖ್ಯ