ಪ್ರಜಾಪ್ರಭುತ್ವ ಬಲಪಡಿಸುವ ಕಾರ್ಯವಾಗಲಿ

KannadaprabhaNewsNetwork |  
Published : Sep 16, 2025, 12:03 AM IST
15ಕೆಆರ್ ಟಿ 01 ಪಟ್ಟಣದ ಪುರಸಭೆ ಕಚೇರಿಯಲ್ಲಿ ಸೋಮವಾರ ನನ್ನ ಮತ ನನ್ನ ಹಕ್ಕು ಎಂಬ ಧ್ಯೇಯವಾಕ್ಯದೊಂದಿಗೆ ನಡೆದ ಅಂತರಾಷ್ಠ್ರೀಯ  ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ | Kannada Prabha

ಸಾರಾಂಶ

ಪ್ರಜಾಪ್ರಭುತ್ವ ಇಡೀ ವಿಶ್ವದಲ್ಲಿ ಬಹುದೊಡ್ಡ ಅಸ್ತ್ರ. ಪ್ರಪಂಚದ ಹಲವಾರು ರಾಷ್ಟ್ರಗಳಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಸೆ. ೧೫ರಂದು ಆಚರಿಸಲಾಗುತ್ತದೆ. ದೇಶ ಹಾಗೂ ರಾಜ್ಯದಲ್ಲಿ ಕಳೆದ ಕೆಲ ವರ್ಷಗಳಿಂದ ಅದ್ಧೂರಿಯಾಗಿ ಈ ಕಾರ್ಯಕ್ರಮ ಆಚರಿಸಲಾಗುತ್ತಿದೆ.

ಕಾರಟಗಿ:

ಪ್ರಜಾಪ್ರಭುತ್ವವನ್ನು ಬಲಪಡಿಸುವ ಕಾರ್ಯವಾಗಬೇಕಿದೆ ಎಂದು ಪುರಸಭೆ ವ್ಯವಸ್ಥಾಪಕ ಎಚ್. ಪರಮೇಶ್ವರ ಹೇಳಿದರು.

ಪಟ್ಟಣದ ಪುರಸಭೆ ಕಚೇರಿಯಲ್ಲಿ ಸೋಮವಾರ ನನ್ನ ಮತ ನನ್ನ ಹಕ್ಕು ಎಂಬ ಧ್ಯೇಯವಾಕ್ಯದೊಂದಿಗೆ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋಧಿಸಿದ ಬಳಿಕ ಮಾತನಾಡಿದ ಅವರು, ಸಂವಿಧಾನ ಭಾರತದ ಪ್ರಜೆಗಳಿಗೆ ಹಕ್ಕುಗಳ ಜತೆಗೆ ಕರ್ತವ್ಯಗಳನ್ನು ನೀಡಿದ್ದು ದೇಶದ ಆತ್ಮವಾಗಿದೆ. ಸಮಾಜದ ಸದಸ್ಯರು ಸಮಾನರಾಗಿರಬೇಕು ಎಂಬುದು ಪ್ರಜಾಪ್ರಭುತ್ವದ ತತ್ವಗಳಲ್ಲಿ ಒಂದಾಗಿದೆ ಎಂದರು.

ಪುರಸಭೆ ಅಧಿಕಾರಿ ರಾಘವೇಂದ್ರ ಮಾತನಾಡಿ. ಪ್ರಜಾಪ್ರಭುತ್ವ ಇಡೀ ವಿಶ್ವದಲ್ಲಿ ಬಹುದೊಡ್ಡ ಅಸ್ತ್ರ. ಪ್ರಪಂಚದ ಹಲವಾರು ರಾಷ್ಟ್ರಗಳಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಸೆ. ೧೫ರಂದು ಆಚರಿಸಲಾಗುತ್ತದೆ. ದೇಶ ಹಾಗೂ ರಾಜ್ಯದಲ್ಲಿ ಕಳೆದ ಕೆಲ ವರ್ಷಗಳಿಂದ ಅದ್ಧೂರಿಯಾಗಿ ಈ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದು ಹೇಳಿದರು.

ಮುಖಂಡ ರಾಜಶೇಖರ ಆನೆಹೋಸುರ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯ ಮತವೂ ಸಮಾನ ತೂಕ ಹೊಂದಿರುವ ವ್ಯವಸ್ಥೆಯಾಗಿದೆ. ಭಾರತವು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವವಾಗಿದೆ. ದೇಶದಲ್ಲಿ ತನ್ನ ನಾಗರಿಕರಿಗೆ ಜಾತಿ, ಬಣ್ಣ, ಮತ, ಧರ್ಮ ಮತ್ತು ಲಿಂಗವನ್ನು ಲೆಕ್ಕಿಸದೆ ಮತದಾನದ ಹಕ್ಕು ನೀಡುತ್ತದೆ. ಪ್ರಜಾಪ್ರಭುತ್ವ ಸರ್ವಾಂಗೀಣವಾಗಬೇಕಾದರೆ ಎಲ್ಲ ಕ್ಷೇತ್ರಗಳಲ್ಲೂ ಸಮಾನತೆ ಸಾಧಿಸುವತ್ತ ಶ್ರಮಿಸಬೇಕಾಗುತ್ತದೆ ಎಂದರು.

ಇದಕ್ಕೂ ಮುಂಚೆ ಪುರಸಭೆ ಅಧಿಕಾರಿ ಚನ್ನಬಸವಸ್ವಾಮಿ ಹಿರೇಮಠ ಸಂವಿಧಾನ ಪೀಠಿಕೆ ವಾಚಿಸಿ ಪ್ರತಿಜ್ಞಾವಿಧಿ ಬೋಧಿಸಿದರು. ಈ ವೇಳೆ ಪುರಸಭೆ ಅಧಿಕಾರಿಗಳಾದ ಸೀಮಾರಾಣಿ, ಮಲ್ಲಮ್ಮ, ಭಾರ್ಗವಿ, ನಾಗರಾಜ ತಳವಾರ, ಶಾಮೀದ್ ಸಾಬ್, ಚನ್ನಬಸವಸ್ವಾಮಿ, ಹನಮೇಶ, ಅನಂತ ಕುಮಾರ, ನಾಗರಾಜ ಸ್ವಾಮಿ, ಪುರಸಭೆ ಸದಸ್ಯ ಸುರೇಶ ಭಜಂತ್ರಿ ಸೇರಿದಂತೆ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

3 ವರ್ಷ ಮೊಮ್ಮಗನಿಗೆ ಬಾರಲ್ಲಿ ಹೆಂಡ ಕುಡಿಸಿದ ಅಜ್ಜ: ಆಕ್ರೋಶ
ಪುಸ್ತಕ ಸಂಸ್ಕೃತಿ ಸಂವೇದನೆಗೆ ಸಂಬಂಧಿಸಿದ್ದು: ಬರಗೂರು