ತೆಂಕನಿಡಿಯೂರು ಕಾಲೇಜಿನಲ್ಲಿ ಗ್ರಂಥಪಾಲಕರ ದಿನಾಚರಣೆ

KannadaprabhaNewsNetwork |  
Published : Aug 22, 2026, 02:15 AM IST
21ಗ್ರಂಥ | Kannada Prabha

ಸಾರಾಂಶ

ಇಲ್ಲಿನ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಗ್ರಂಥಾಲಯ ಮಾಹಿತಿ ಮತ್ತು ವಿಜ್ಞಾನ ವಿಭಾಗದ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ನಡೆಯಿತು.

ಉಡುಪಿ: ಇಲ್ಲಿನ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಗ್ರಂಥಾಲಯ ಮಾಹಿತಿ ಮತ್ತು ವಿಜ್ಞಾನ ವಿಭಾಗದ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿ ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯನಿರ್ವಹಿಸಿ ಇತ್ತೀಚೆಗಷ್ಟೆ ನಿವೃತ್ತರಾದ ಗ್ರಂಥಪಾಲಕ ರವಿಚಂದ್ರ, ಭಾರತದ ಗ್ರಂಥಾಲಯಗಳ ಬೆಳವಣಿಗೆಗೆ ಗ್ರಂಥಾಲಯಗಳ ಪಿತಾಮಹ ಡಾ. ಎಸ್.ಆರ್. ರಂಗನಾಥನ್‌ ಅವರ ಕೊಡುಗೆಗಳನ್ನು ವಿವರಿಸಿದರು. ಇನ್‌ಫಾರ್ಮೇಶನ್ ಮತ್ತು ಲೈಬ್ರರಿ ನೆಟ್‌ವರ್ಕ್ ನಿಂದ ಯಾವ ರೀತಿಯಲ್ಲಿ ವಿದ್ಯಾರ್ಥಿಗಳು ಉಚಿತ ಮತ್ತು ಸುಲಭವಾಗಿ ಮಾಹಿತಿ ಪಡೆಯಬಹುದೆಂಬುದನ್ನು ವಿವರವಾಗಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವಕರ ಪುಸ್ತಕಗಳ ಓದು ಕ್ಷೀಣಿಸುತ್ತಿರುವ ಇಂದಿನ ಸಂದರ್ಭದಲ್ಲಿ ವಿದ್ಯಾರ್ಥಿಗಳು ಡಿಜಿಟಲ್ ರೂಪದಲ್ಲಿ ದೊರೆಯುವ ಮಾಹಿತಿಗಳನ್ನು ಬಳಸಿಕೊಂಡಾದರೂ ಜ್ಞಾನ ಸಂಪಾದಿಸಬೇಕೆಂದರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ರಘು ನಾಯ್ಕ್ ಪ್ರಾಸ್ತವಿಕ ಮಾತುಗಳೊಂದಿಗೆ ಸ್ವಾಗತಿಸಿ, ಸಂಖ್ಯಾಶಾಸ್ತ್ರ ಸಹಪ್ರಾಧ್ಯಾಪಕ ಉಮೇಶ್ ಪೈ ವಂದಿಸಿದರು. ರಾಜ್ಯಶಾಸ್ತ್ರ ಸಹಪ್ರಾಧ್ಯಾಪಕ ಪ್ರಶಾಂತ್ ನೀಲಾವರ ನಿರೂಪಿಸಿದರು. ಕಾಲೇಜಿನ ಗ್ರಂಥಪಾಲಕ ಕೃಷ್ಣ ಸಾಸ್ತಾನ ಕಾರ್ಯಕ್ರಮ ಆಯೋಜಿಸಿದರು. ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಬಿಂದು ಟಿ. ಆಂಗ್ಲ ಭಾಷಾ ಸಹಪ್ರಧ್ಯಾಪಕ ಡಾ. ಗೀತಾ, ಅರ್ಥಶಾಸ್ತ್ರ ಸಹ ಪ್ರಾಧ್ಯಾಪಕ ಡಾ. ಜಯಮಂಗಳ, ಕನ್ನಡ ಸಹಾಯಕ ಪ್ರಾಧ್ಯಾಪಕ ಮಾರುತಿ, ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಬಾಲ್ ರಾಜ್, ಆರತಿ ಜಿ ಇನ್ನಿತರ ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿಜಿಟಲ್ ಸೇವಾ ಕೇಂದ್ರದಲ್ಲಿ ಘರ್ಷಣೆ: ಇತ್ತಂಡ ದೂರು
ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಗುಣ ಬೇಕು: ಹರಿಶಂಕರ್