ಗ್ರಂಥಾಲಯಗಳು ಉತ್ತಮ ಜ್ಞಾನ ಭಂಡಾರವಿದ್ದಂತೆ : ಭೋಜೇಗೌಡ

KannadaprabhaNewsNetwork |  
Published : Oct 06, 2024, 01:23 AM IST
ಚಿಕ್ಕಮಗಳೂರು ನಗರ ಕೇಂದ್ರ ಗ್ರಂಥಾಲಯದ ನೂತನ ಕಟ್ಟಡವನ್ನು ವಿಧಾನಪರಿಷತ್‌ ಶಾಸಕ ಎಸ್‌.ಎಲ್‌. ಭೋಜೇಗೌಡ ಅವರು ಶನಿವಾರ ಉದ್ಘಾಟಿಸಿದರು. ಶಾಸಕ ಎಚ್‌.ಡಿ. ತಮ್ಮಯ್ಯ, ಎಂಎಲ್‌ಸಿ ಸಿ.ಟಿ. ರವಿ, ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್‌, ಉಪಾಧ್ಯಕ್ಷೆ ಅನು ಮಧುಕರ್‌ ಇದ್ದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉನ್ನತ ಸ್ಥಾನಗಳಿಗೆ ತಲುಪ ಬೇಕಾದರೆ ಅಧ್ಯಯನ ಮಾಡಬೇಕು. ಗ್ರಂಥಾಲಯದಲ್ಲಿ ಜ್ಞಾನಾರ್ಜನೆಯ ಜೊತೆಗೆ ಮನರಂಜನೆ ಪಡೆಯಲು ಅಗತ್ಯವಾದ ಕಥೆ, ಕಾದಂಬರಿ, ನಾಟಕ, ಕಾವ್ಯ, ಇತ್ಯಾದಿಗೆ ಸಂಬಂಧಿಸಿದ ಪುಸ್ತಕಗಳನ್ನು ಓದಿ ಅವುಗಳ ಸದುಪ ಯೋಗ ಪಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದರು.

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉನ್ನತ ಸ್ಥಾನಗಳಿಗೆ ತಲುಪ ಬೇಕಾದರೆ ಅಧ್ಯಯನ ಮಾಡಬೇಕು. ಗ್ರಂಥಾಲಯದಲ್ಲಿ ಜ್ಞಾನಾರ್ಜನೆಯ ಜೊತೆಗೆ ಮನರಂಜನೆ ಪಡೆಯಲು ಅಗತ್ಯವಾದ ಕಥೆ, ಕಾದಂಬರಿ, ನಾಟಕ, ಕಾವ್ಯ, ಇತ್ಯಾದಿಗೆ ಸಂಬಂಧಿಸಿದ ಪುಸ್ತಕಗಳನ್ನು ಓದಿ ಅವುಗಳ ಸದುಪ ಯೋಗ ಪಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದರು.

ನಗರದ ಸಾರ್ವಜನಿಕ ಗ್ರಂಥಾಲಯದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಜ್ಞಾನ ಸಂಪಾದಿಸಲು ಗ್ರಂಥಾಲಯ ಬಹಳ ಉಪಯುಕ್ತ ಮಾಧ್ಯಮವಾಗಿದೆ. ಬಡ ವರ್ಗದ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲಾ ಪುಸ್ತಕಗಳನ್ನು ಖರೀದಿಸಿ ಓದಲು ಸಾಧ್ಯವಾಗುವುದಿಲ್ಲ. ಆ ಕಾರಣದಿಂದ ಅವರು ಶಿಕ್ಷಣದಿಂದ ವಂಚಿತರಾಗುವ ಸಾಧ್ಯತೆ ಹೆಚ್ಚಿರುತ್ತದೆ. ಈ ದೃಷ್ಟಿಯಿಂದ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಗ್ರಂಥಾಲಯದಿಂದ ದೊರಕುವ ಪುಸ್ತಕಗಳು ಅವರ ಅಭ್ಯಾಸಕ್ಕೆ ಅನುಕೂಲವಾಗುತ್ತದೆ ಎಂದರು.

ಪ್ರತಿ ಗ್ರಾಪಂ ವ್ಯಾಪ್ತಿಯಲ್ಲೂ ಸರ್ಕಾರ ವಿದ್ಯಾರ್ಥಿ ಹಾಗೂ ಹಿರಿಯ ನಾಗರಿಕರ ಅನುಕೂಲಕ್ಕೆ ಗ್ರಂಥಾಲಯಗಳನ್ನು ತೆರೆದಿದೆ. ಇದರ ಸದು ಪಯೋಗವನ್ನು ಗ್ರಾಮೀಣ ಪ್ರದೇಶದ ಮಕ್ಕಳು ಪಡೆಯಬೇಕು. ತಮ್ಮ ಬಿಡುವಿನ ವೇಳೆಯಲ್ಲಿ ಗ್ರಂಥಾಲಯಗಳಿಗೆ ತೆರಳಿ ಪುಸ್ತಕ ಓದುವುದರಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಅನುಕೂಲ ಹಾಗೂ ಜ್ಞಾನ ಹೆಚ್ಚಿಸಿಕೊಳ್ಳಬಹುದು ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್‌.ಡಿ. ತಮ್ಮಯ್ಯ ಮಾತನಾಡಿ, ನಗರಸಭೆ ಸೆಸ್ ಅನುದಾನದಲ್ಲಿ ಈ ನಗರ ಕೇಂದ್ರ ಗ್ರಂಥಾಲ ಯದ ನೂತನ ಕಟ್ಟಡ ನಿರ್ಮಿಸಲಾಗಿದೆ. ಪುಸ್ತಕಗಳು ಯಾವಾಗಲೂ ನಮ್ಮ ಅತ್ಯುತ್ತಮ ಸ್ನೇಹಿತನಿದ್ದಂತೆ, ಪುಸ್ತಕವನ್ನು ತಲೆಬಾಗಿ ಓದಿದರೆ ನಮ್ಮನ್ನು ತಲೆಯೆತ್ತಿ ನಿಲ್ಲುವಂತೆ ಮಾಡುತ್ತವೆ. ಅಂತಹ ಸ್ನೇಹಿತನನ್ನು ಯಾವಾಗಲೂ ಜೊತೆಯಲ್ಲಿ ಇರಿಸಿಕೊಂಡು ಅದರ ಜ್ಞಾನ ಭಂಡಾರವನ್ನು ಹೃದಯದಾಳಕ್ಕೆ ಇಳಿಸಿಕೊಳ್ಳಬೇಕು ಎಂದರು.

ವಿಧಾನ ಪರಿಷತ್ ಶಾಸಕ ಸಿ.ಟಿ. ರವಿ ಮಾತನಾಡಿ, ಗ್ರಂಥಾಲಯಗಳು ನಮ್ಮ ಜ್ಞಾನ ವೃದ್ಧಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಆಧುನಿಕ ಯುಗದಲ್ಲಿ ವಿದ್ಯೆ ಒಂದು ಅಸ್ತ್ರವಿದ್ದಂತೆ ಯಾರು ವಿದ್ಯೆ ಬಲ್ಲವನಾಗಿರುತ್ತಾರೋ ಯಾರು ಜ್ಞಾನ ಹೊಂದಿರುತ್ತಾರೋ ಅವರು ಶಕ್ತಿಶಾಲಿ ಯಾಗಿರುತ್ತಾರೆ. ನಮ್ಮ ಜ್ಞಾನವೇ ನಮಗೆ ಶಕ್ತಿ, ನಾವು ಸಂಪಾದಿಸಿದ ಸಂಪತ್ತು ಯಾವಾಗ ಬೇಕಾದರೂ ಖಾಲಿಯಾಗಬಹುದು ಆದರೆ ನಾವು ಸಂಪಾದಿಸಿದ ವಿದ್ಯೆ ಎಂದೂ ಖಾಲಿಯಾಗಲು ಸಾಧ್ಯವಿಲ್ಲ ಎಂದು ಹೇಳಿದರು.

ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್ ಮಾತನಾಡಿ, ಏನನ್ನಾದರೂ ಸಂಶೋಧನೆ ಮಾಡಬೇಕು ಎಂದರೆ ಗ್ರಂಥಾಲಯದ ಪುಸ್ತಕಗಳು ಮಹತ್ವದ ಪಾತ್ರ ವಹಿಸುತ್ತವೆ. ಹಾಗೆಯೇ ಪುಸ್ತಕಗಳ ಸಹಾಯವಿಲ್ಲದೆ ಒಬ್ಬ ವ್ಯಕ್ತಿ ಜ್ಞಾನಿಯಾಗಲು ಸಾಧ್ಯವಿಲ್ಲ ಎಂದು ಹೇಳಿದರು.

ನಗರ ಕೇಂದ್ರ ಗ್ರಂಥಾಲಯ ಮುಖ್ಯ ಗ್ರಂಥಾಲಯಾಧಿಕಾರಿ ಜಿ. ಉಮೇಶ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷರಾದ ಬಿ.ಎಚ್. ಹರೀಶ್, ಉಪ ವಿಭಾಗಾಧಿಕಾರಿ ದಲ್ಜಿತ್ ಕುಮಾರ್, ನಗರಸಭೆ ಉಪಾಧ್ಯಕ್ಷೆ ಅನು ಮಧು ಕರ್, ರವೀಶ್ ಖ್ಯಾತನಬೀಡು ಉಪಸ್ಥಿತರಿದ್ದರು.

5 ಕೆಸಿಕೆಎಂ 5ಚಿಕ್ಕಮಗಳೂರು ನಗರ ಕೇಂದ್ರ ಗ್ರಂಥಾಲಯದ ನೂತನ ಕಟ್ಟಡವನ್ನು ವಿಧಾನಪರಿಷತ್‌ ಶಾಸಕ ಎಸ್‌.ಎಲ್‌. ಭೋಜೇಗೌಡ ಶನಿವಾರ ಉದ್ಘಾಟಿಸಿದರು. ಶಾಸಕ ಎಚ್‌.ಡಿ. ತಮ್ಮಯ್ಯ, ಎಂಎಲ್‌ಸಿ ಸಿ.ಟಿ. ರವಿ, ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್‌, ಉಪಾಧ್ಯಕ್ಷೆ ಅನು ಮಧುಕರ್‌ ಇದ್ದರು.

PREV

Recommended Stories

ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ