ಗ್ರಂಥಾಲಯಗಳು ಜ್ಞಾನದ ಭಂಡಾರಗಳು : ಯಶ್‌ಪಾಲ್ ಸುವರ್ಣ

KannadaprabhaNewsNetwork |  
Published : Nov 22, 2026, 02:30 AM IST
ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಿಸಲಾಯಿತು | Kannada Prabha

ಸಾರಾಂಶ

ಗ್ರಂಥಾಲಯಗಳು ಜ್ಞಾನದ ಭಂಡಾರಗಳಿದ್ದಂತೆ. ಪ್ರಪಂಚದ ಎಲ್ಲಾ ಭಾಷೆಯ ಜ್ಞಾನ ನಮಗೆ ಗ್ರಂಥಾಲಯದಲ್ಲಿ ದೊರೆಯುತ್ತದೆ. ಪುಸ್ತಕ ಓದುವುದರಿಂದ ನಮ್ಮ ಜ್ಞಾನ ವಿಕಸನ ವಾಗುತ್ತದೆ ಎಂದು ಶಾಸಕ ಯಶ್‌ಪಾಲ್ ಎ. ಸುವರ್ಣ ಹೇಳಿದರು.

ಉಡುಪಿ : ಗ್ರಂಥಾಲಯಗಳು ಜ್ಞಾನದ ಭಂಡಾರಗಳಿದ್ದಂತೆ. ಪ್ರಪಂಚದ ಎಲ್ಲಾ ಭಾಷೆಯ ಜ್ಞಾನ ನಮಗೆ ಗ್ರಂಥಾಲಯದಲ್ಲಿ ದೊರೆಯುತ್ತದೆ. ಪುಸ್ತಕ ಓದುವುದರಿಂದ ನಮ್ಮ ಜ್ಞಾನ ವಿಕಸನ ವಾಗುತ್ತದೆ ಎಂದು ಶಾಸಕ ಯಶ್‌ಪಾಲ್ ಎ. ಸುವರ್ಣ ಹೇಳಿದರು.

ಅವರು ಶುಕ್ರವಾರ ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾ ಮತ್ತು ನಗರ ಕೇಂದ್ರ ಗ್ರಂಥಾಲಯ ಉಡುಪಿ ಇದರ ಆಶ್ರಯದಲ್ಲಿ ಅಜ್ಜರಕಾಡು ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಜಿಲ್ಲಾ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ - 2026 ಅಂಗವಾಗಿ ಉತ್ತಮ ಓದುಗ/ ಉತ್ತಮ ಸಿಬ್ಬಂದಿ ಸೇವಾ ಪುರಸ್ಕಾರ ಮತ್ತು ಬಹುಮಾನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ಉತ್ತಮ ಓದುಗ ಪುರಸ್ಕಾರಕ್ಕೆ ಭಾಜನರಾದ ಗಣೇಶ್ ಬಿ ಹೆಗ್ಡೆ ಹಾಗೂ ವಿಜಯಲಕ್ಷ್ಮಿ ಬಿ.ವಿ. ಮತ್ತು ಉತ್ತಮ ಸಿಬ್ಬಂದಿ ಸೇವಾ ಪುರಸ್ಕಾರಕ್ಕೆ ಭಾಜನರಾದ ಪುಷ್ಪ, ನಳಿನಾಕ್ಷಿ, ಸಾಧನಾ ಹಾಗೂ ಅನಿತಾ ಅವರುಗಳನ್ನು ಸನ್ಮಾನಿಸಲಾಯಿತು. ಸಪ್ತಾಹ ನಿಮಿತ್ತ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ನಂತರ ಸೈಬರ್ ಕ್ರೈಂ ಪೊಲೀಸ್ ಠಾಣೆಯ ನೀಲೇಶ್ ಅವರು ಸೈಬರ್ ಸುರಕ್ಷತಾ ಜಾಗೃತಿ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಶೋಕ್ ಕಾಮತ್ ಉಪಸ್ಥಿತರಿದ್ದರು.ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯ ಅಧಿಕಾರಿ ರಂಜಿತಾ ಸಿ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯ ಅಧಿಕಾರಿ ನಮಿತಾ ಬಿ. ಸ್ವಾಗತಿಸಿ, ಪ್ರಥಮ ದರ್ಜೆ ಸಹಾಯಕಿ ಪ್ರೇಮ ನಿರೂಪಿಸಿ, ಗ್ರಂಥಾಲಯ ಸಹಾಯಕಿ ಶ್ಯಾಮಲಾ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶ್ರೀ ಮುತ್ತಪ್ಪಸ್ವಾಮಿ ದೇವಾಲಯದಲ್ಲಿ ಪೊಟ್ಟನ್ ದೇವರ ನೂತನ ಗುಡಿಗೆ ಭೂಮಿ ಪೂಜೆ
ಸರ್ವೇ ಇಲಾಖೆಗೆ ಲೋಕಾಯುಕ್ತ ದಿಢೀರ್ ದಾಳಿ: ಪರಿಶೀಲನೆ