)
ದಾವಣಗೆರೆ: ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ 2025ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಪುಸ್ತಕಗಳನ್ನು ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಲೇಖಕರು, ಲೇಖಕ ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರಿಂದ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. ಪುಸ್ತಕಗಳು 2025ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿರಬೇಕು. ಕಾಯಿದೆ ಅನ್ವಯ ಪ್ರಕಾಶಕರು 2025 ರಲ್ಲಿ ಮುದ್ರಿಸಿ ಪ್ರಕಟಿಸಿದ ಮೊದಲ ಆವೃತ್ತಿಯ ಪುಸ್ತಕಗಳು 3 ಪ್ರತಿಗಳನ್ನು ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಪಾರ್ಕ್, ಬೆಂಗಳೂರು ಇಲ್ಲಿಗೆ ಸಲ್ಲಿಸಬೇಕು. ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿ ಆಯ್ಕೆಗಾಗಿ ಸಲ್ಲಿಸಲಾದ 3 ಪ್ರತಿಗಳಲ್ಲಿ ಒಂದನ್ನು ಪರಿಗಣಿಸಲಾಗುತ್ತದೆ.
ಆಯ್ಕೆ ಸಮಿತಿಗೆ ಆಯ್ಕೆಗಾಗಿ ಪುಸ್ತಕಗಳನ್ನು ಸಲ್ಲಿಸಲಿಚ್ಛಿಸುವ ಲೇಖಕರು, ಲೇಖಕ-ಪ್ರಕಾಶಕರು ಮತ್ತು ಪ್ರಕಟಣ ಸಂಸ್ಥೆಯವರು ನಿಗದಿತ ಅವಧಿಯೊಳಗೆ ರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ ಪುಸ್ತಕಗಳ ನೋಂದಣಿ ಅಧಿನಿಯಮದಡಿ ನಿಯಮಾನುಸಾರ ಪುಸ್ತಕಗಳನ್ನು ಸಲ್ಲಿಸಬೇಕು.
ನಿಬಂಧನೆಗಳು, ನೋಂದಣಿಗಾಗಿ ನಿಗದಿತ ಅರ್ಜಿ ಹಾಗೂ ಮತ್ತಿತರ ಮಾಹಿತಿಯನ್ನು ಇಲಾಖೆಯ **http://www.dpl.karnataka.gov.in ** ವೆಬ್‌ಸೈಟನ್ನು ರಾಜ್ಯದ ಎಲ್ಲ ಜಿಲ್ಲಾ ನಗರ ಕೇಂದ್ರ ಗ್ರಂಥಾಲಯಗಳ ಉಪ ನಿರ್ದೇಶಕರು ಮತ್ತು ಉಪ ಗ್ರಂಥಾಲಯ ಅಧಿಕಾರಿ ಕಚೇರಿಯಿಂದ ಅಥವಾ ದಾವಣಗೆರೆ ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರ ಕಚೇರಿಯಿಂದ ಪಡೆಯಬಹುದು.- - -