ಕನ್ನಡಪ್ರಭ ವಾರ್ತೆ ಕೋಲಾರತಂಬಾಕು ಮಾರಾಟ ಪರವಾನಿಗೆ ಇಲ್ಲದೆ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಜರುಗಿಸುವಂತೆ ಎಸ್.ಎಂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಎಡಿಸಿ ಮಂಗಳ ಸೂಚಿಸಿದರು.ಜಿಲ್ಲಾ ತಂಬಾಕು ನಿಯಂತ್ರಣ ಘಟಕದಿಂದ ತಂಬಾಕು ನಿಯಂತ್ರಣ ಮತ್ತು ಕೋಟ್ಪಾ ಕಾಯ್ದೆಯ ಅನುಷ್ಠಾನ ಕುರಿತು ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಸಭೆಯಲ್ಲಿ ಮಾತನಾಡಿ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳಾದ ಬೀಡಿ, ಸಿಗರೇಟು, ಪಾನ್‌ಮಸಾಲ, ಹನ್ಸ್ ಇತ್ಯಾದಿ ತಂಬಾಕು ಉತ್ಪನ್ನಗಳು ಮಾರಾಟ ಮಾಡಲು ಕಡ್ಡಾಯವಾಗಿ ತಂಬಾಕು ಮಾರಾಟ ಪರವಾನಿಗೆ ಪಡೆಯಬೇಕು ಎಂದರು. ಪರವಾನಗೆ ಇಲ್ಲದಿದ್ದರೆ ದಂಡ
ತಂಬಾಕು ಉತ್ಪನ್ನಗಳ ಮಾರಾಟ ಪರವಾನಿಗೆ ಇಲ್ಲದೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಿದಲ್ಲಿ ದಂಡ ವಿಧಿಸಬೇಕು, ನಗರಸಭೆ ವ್ಯಾಪ್ತಿಯಲ್ಲಿ ಪರವಾನಿಗೆ ಇಲ್ಲದೆ ತಂಬಾಕು ಉತ್ಪನ್ನಗಳ ಮಾರಾಟ ಮಾಡಿದರೆ ೪೦೦೦ ರೂ.ಗಳು ದಂಡ ಮತ್ತು ಮಾರಾಟ, ಮುಂದುವರಿಸಿದರೆ ಪ್ರತಿದಿನಕ್ಕೆ ೧೦೦ ರು.ನಂತೆ ದಂಡ ವಿಧಿಸಲಾಗುವುದು ಹಾಗೂ ಮಾಲೀಕರ ವಿರುದ್ದ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.ತಂಬಾಕಿನಿಂದ ಕ್ಯಾನ್ಸರ್ಶೇ.೨೨ ಕ್ಯಾನ್ಸರ್ ರೋಗಗಳು ತಂಬಾಕು ಉತ್ಪನ್ನಗಳಾದ ಬೀಡಿ, ಸಿಗರೇಟ್, ಗುಟ್ಕಾ, ಹನ್ಸ್, ಕಡ್ಡಿಪುಡಿ ಇತರೆ ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುತ್ತಿದೆ. ಶೇ೭೧ ಶ್ವಾಶಕೋಶದ ಕ್ಯಾನ್ಸರ್ ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುತ್ತಿದೆ ಎಂದು ಎಚ್ಚರಿಸಿದರು.
ಸಭೆಯಲ್ಲಿ ಜಿಪಂ ಸಹಾಯಕ ಕಾರ್ಯದರ್ಶಿ ವೆಂಕಟಾಚಲಪತಿ, ಆಹಾರ ಸುರಕ್ಷತೆಯ ಅಂಕಿತ ಅಧಿಕಾರಿ ಡಾ.ರಾಕೇಶ್, ಡಿಡಿಪಿಯು ಬಾಲಕೃಷ್ಣ, ಮಹಿಳಾ-ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶ ಎನ್.ನಾರಾಯಣಸ್ವಾಮಿ, ಬಂಗಾರಪೇಟೆ ತಾಲೂಕು ಆರೋಗ್ಯಾಧಿಕಾರಿ ಡಾ.ಸುನೀಲ್‌ಕುಮಾರ್.ಬಿ, ಪೊಲೀಸ್ ಇನ್ಸ್‌ಪೆಕ್ಟರ್ ಆರ್.ದಯಾನಂದ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪ್ರೇಮ.ಎಂ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಮಹಮದ್.ಪಿ ಇದ್ದರು.