ಪ್ರತಿಯೊಬ್ಬ ಮನುಷ್ಯನು ಹುಟ್ಟಿದ ಮೇಲೆ ಸಮಾಜಕ್ಕೆ ಏನಾದರೂ ಕೊಡುಗೆ ಕೊಟ್ಟಾಗ ಮಾತ್ರ ಅವನ ಬದುಕು ಸಾರ್ಥಕವಾಗುತ್ತದೆ ಎಂದು ಬೆಳ್ಳಾವಿ ಮಠದ ಕಾರದ ವೀರ ಬಸವೇಶ್ವರ ಸ್ವಾಮೀಜಿ ಹೇಳಿದರು.
ಕನ್ನಡಪ್ರಭ ವಾರ್ತೆ ಗುಬ್ಬಿ
ಪ್ರತಿಯೊಬ್ಬ ಮನುಷ್ಯನು ಹುಟ್ಟಿದ ಮೇಲೆ ಸಮಾಜಕ್ಕೆ ಏನಾದರೂ ಕೊಡುಗೆ ಕೊಟ್ಟಾಗ ಮಾತ್ರ ಅವನ ಬದುಕು ಸಾರ್ಥಕವಾಗುತ್ತದೆ ಎಂದು ಬೆಳ್ಳಾವಿ ಮಠದ ಕಾರದ ವೀರ ಬಸವೇಶ್ವರ ಸ್ವಾಮೀಜಿ ಹೇಳಿದರು.ಪಟ್ಟಣದಲ್ಲಿ ನಡೆದ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಕುಮಾರಸ್ವಾಮಿ ಅವರು, ಮುಂಚಿನಿಂದಲೂ ಸಾಮಾಜಿಕವಾಗಿ ಧಾರ್ಮಿಕವಾಗಿ ಶೈಕ್ಷಣಿಕವಾಗಿ ಮತ್ತು ಹಲವು ರೀತಿಯ ಕಾರ್ಯಕ್ರಮ ಮಾಡುವ ಮೂಲಕ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಾ ಬಂದಿರುವುದು ನಿಜವಾಗಿಯೂ ಖುಷಿ ನೀಡಿದೆ ಎಂದು ಹೇಳಿದರು. ನೂತನ ಅಧ್ಯಕ್ಷ ಕುಮಾರಸ್ವಾಮಿ ಮಾತನಾಡಿದರು. ಈ ವೇಳೆ ಟಿ ಎಸ್ ರಾಜನ್, ಡಾ ನಟರಾಜು ಡಾ ಮಂಜುನಾಥ್ ಗೌಡ, ಗಾಯತ್ರಿ ಗಿರೀಶ್, ಎಸ್ ಎಲ್ ವೆಂಕಟೇಶ್, ವಿವೇಕಾನಂದ ಸ್ವಾಮಿ, ಅಶೋಕ್ ಕುಮಾರ್, ಎಲ್ ವಿ ಸಾವಂತ್, ಬಸವರಾಜು, ರಮೇಶ್ ಬಾಬು, ಸಿದ್ದಪ್ಪ ಗುಜ್ಜರಿ, ಜಯದೇವ ಕುಮಾರ್, ಗಿರೀಶ್ ಹೊಸಹಳ್ಳಿ, ವಿಶ್ವರಾಧ್ಯ, ಹುಂಡೆ ರಾಮಯ್ಯ, ಕೀರ್ತಿರಾಜ್ ಸೇರಿದಂತೆ ಇನ್ನಿತರರು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.