ಅಧ್ಯಯನ, ಪರಿಶ್ರಮದಿಂದ ಜೀವನ ರೂಪಿಸಿಕೊಳ್ಳಲು ಸಾಧ್ಯ: ಕೇಕಡ ನಾಣಯ್ಯ

KannadaprabhaNewsNetwork |  
Published : Feb 11, 2025, 12:50 AM IST
ಚೇರಂಬಾಣೆ ಅರುಣ ವಿದ್ಯಾ ಸಂಸ್ಥೆಯಲ್ಲಿ ಓಜಸ್ವಿ ಚೈತನ್ಯ ಫೌಂಡೇಶನ್ ವತಿಯಿಂದ ಕೊಡಗು ಗೌಡ ಸಮಾಜ ಬೆಂಗಳೂರು ಅವರ ಸಹಭಾಗಿತ್ವದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ “ನಾನು ಮತ್ತು ನನ್ನ ಭವಿಷ್ಯ” ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಬೆಂಗಳೂರು ಗೌಡ ಸಮಾಜದ ಅಧ್ಯಕ್ಷರಾದ  ಕೇಕಡ ನಾಣಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿಮಾತನಾಡಿದರು | Kannada Prabha

ಸಾರಾಂಶ

ವಿದ್ಯಾರ್ಥಿಗಳು ನಿರಂತರವಾದ ಅಧ್ಯಯನ ಮತ್ತು ಪರಿಶ್ರಮದಿಂದ ಮಾತ್ರ ಜೀವನವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಕೇಕಡ ನಾಣಯ್ಯ ಹೇಳಿದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ವಿದ್ಯಾರ್ಥಿಗಳು ನಿರಂತರವಾದ ಅಧ್ಯಯನ ಮತ್ತು ಪರಿಶ್ರಮದಿಂದ ಮಾತ್ರ ಜೀವನವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಬೆಂಗಳೂರು ಗೌಡ ಸಮಾಜದ ಅಧ್ಯಕ್ಷರಾದ ಕೇಕಡ ನಾಣಯ್ಯ ಹೇಳಿದರು.

ಚೇರಂಬಾಣೆ ಅರುಣ ವಿದ್ಯಾ ಸಂಸ್ಥೆಯಲ್ಲಿ ಓಜಸ್ವಿ ಚೈತನ್ಯ ಫೌಂಡೇಶನ್ ವತಿಯಿಂದ ಕೊಡಗು ಗೌಡ ಸಮಾಜ ಬೆಂಗಳೂರು ಅವರ ಸಹಭಾಗಿತ್ವದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ‘ನಾನು ಮತ್ತು ನನ್ನ ಭವಿಷ್ಯ’ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು .

ವಿದ್ಯಾರ್ಥಿಗಳು ತಮ್ಮ ಗುರಿಯ ಸ್ಪಷ್ಟತೆಯನ್ನು ಹೊಂದಿರಬೇಕು ಎಂದ ಅವರು ಜೀವನದಲ್ಲಿ ಯಾವುದೇ ವ್ಯಸನಕ್ಕೆ ಬಲಿಯಾಗದೆ ಸಮಾಜ ಮತ್ತು ದೇಶದ ಹಿತವನ್ನು ಕಾಪಾಡುವ ಸಜ್ಜನಿಕೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿ ಮಾತನ್ನು ಹೇಳಿದರು.

ಸಮಾರಂಭದಲ್ಲಿ ಬೆಂಗಳೂರು ಗೌಡ ಸಮಾಜದ ಉಪಾಧ್ಯಕ್ಷರಾದ ಅಯ್ಯಟಿರ ಮೋಹನ್, ಹಾಗೂ ಬೇಕಲ್ ಬಿಪಿನ್, ಅಳಮಂಡ ಮೋಹನ್ ದೇವಯ್ಯ, ಅರುಣ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಪಿ ಎಸ್ ಸುಬ್ಬಯ್ಯ , ಬೋಧಕರು, ಸಿಬ್ಬಂದಿ ಹಾಗೂ ಮಕ್ಕಳು ಉಪಸ್ಥಿತರಿದ್ದರು.

ಓಜಸ್ವಿ ಚೈತನ್ಯ ಫೌಂಡೇಶನ್ ಸಂಪನ್ಮೂಲ ವ್ಯಕ್ತಿಗಳಾದ ಡಾಕ್ಟರ್ ಕವಿತಾ, ಬ್ರಿಜೇಶ್ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿಯನ್ನು ನೀಡಿ ಮಾರ್ಗದರ್ಶನ ಮಾಡಿದರು.

ಕಾಲೇಜಿನ ಪ್ರಾಂಶುಪಾಲರದ ಡಿ ಎಸ್ ರಾಮಕೃಷ್ಣ ಸ್ವಾಗತಿಸಿದರು. ಅಧ್ಯಾಪಕಿ ಸುಷ್ಮಾ ಕಾರ್ಯಕ್ರಮ ನಿರೂಪಿಸಿ ಮುಖ್ಯ ಶಿಕ್ಷಕರಾದ ಸಿ ಆರ್ ಲೋಕೇಶ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ