- ಹುಲೀಕೆರೆ ದೊಡ್ಡಮಠದಲ್ಲಿ ಶ್ರೀ ಬಸವರಾಜ ದೇಶೀಕೇಂದ್ರ ಸ್ವಾಮೀಜಿ ಪುಣ್ಯಾರಾಧನೆ,
ಧಾರ್ಮಿಕ ಮತ್ತು ಸಾಮಾಜಿಕ ಮೌಲ್ಯಗಳ ಪರಿಪಾಲನೆಯಿಂದ ಬದುಕು ಉಜ್ವಲವಾಗಲಿದೆ ಎಂದು ರಂಭಾಪುರಿ ಪೀಠದ ಜಗದ್ಗುರು ಶ್ರೀ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ತಾಲೂಕಿನ ಹುಲೀಕೆರೆ ದೊಡ್ಡಮಠದಲ್ಲಿ ಶ್ರೀ ಬಸವರಾಜ ದೇಶೀಕೇಂದ್ರ ಸ್ವಾಮೀಜಿ ಪುಣ್ಯಾರಾಧನೆ, ಶ್ರೀ ವಿರೂಪಾಕ್ಷಲಿಂಗ ಶಿವಾಚಾರ್ಯ ಸ್ವಾಮೀಜಿ 80ನೇ ವರ್ಷದ ವರ್ಧಂತಿ ಹಾಗೂ ಶ್ರೀ ಮಲ್ಲಿಕಾರ್ಜುನ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 2ನೇ ವರ್ಷದ ಪಟ್ಟಾಧಿಕಾರ ಮಹೋತ್ಸವದ ಸಾನಿಧ್ಯವಹಿಸಿ ಮಾತನಾಡಿದರು.ಮನುಷ್ಯನಲ್ಲಿ ಆತ್ಮಬಲ ಬೆಳೆಯಲು ಆಧ್ಯಾತ್ಮದ ಹಸಿವು ಬೇಕು. ಸನ್ಮಾರ್ಗದಲ್ಲಿ ನಡೆಯುವ ಛಲಬೇಕು. ಅನಾರೋಗ್ಯಕರ ಸಮಾಜಕ್ಕೆ ಅಡಿಗಲ್ಲು ಇಡುವ ಜನರ ಸಂಖ್ಯೆಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಮನುಷ್ಯ ಜಾಗೃತಗೊಂಡು ಆದರ್ಶ ಸಂಸ್ಕೃ ತಿ ಉಳಿವಿಗಾಗಿ ಶ್ರಮಿಸಬೇಕಾಗಿದೆ. ಸತ್ಯ ಶುದ್ಧ ಕಾಯಕದಿಂದ ಜೀವನ ಸಾರ್ಥಕಗೊಳ್ಳುತ್ತದೆ ಎಂದರು.
ಸ್ವಾಮಿಗಳ ಸಂಸ್ಕಾರದ ಗರಡಿಯಲ್ಲಿ ಬೆಳೆದ ಸರಳತೆ ಮತ್ತು ಸಾತ್ವಿಕತೆಗೆ ಹೆಸರಾದ ಶ್ರೀ ವಿರೂಪಾಕ್ಷಲಿಂಗ
ರಂಗದಲ್ಲಿ ಅಮೂಲ್ಯ ಕೊಡುಗೆ ಕೊಟ್ಟ ಕೀರ್ತಿ ಅವರಿಗೆ ಸಲ್ಲುತ್ತದೆ, ಹಿರಿಯ ಸ್ವಾಮೀಜಿಗಳು ಮುಂದೆ 100 ನೇ ವರ್ಷದ ವರ್ಧಂತಿ ಆಚರಿಸಿಕೊಳ್ಳುವಂತಾಗಲಿ ಎಂದರು. ಹುಲಿಕೆರೆ ಮಠದ ಶ್ರೀವಿರೂಪಾಕ್ಷಲಿಂಗ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ ನಮ್ಮ ಜನ್ಮ ಇಂದು ಸಾರ್ಥಕಗೊಂಡಿದೆ. ಭಕ್ತ
ಆಶೀರ್ವದಿಸಿದ್ದು ನಮಗೆ ಆನೆ ಬಲ ಬಂದಂತಾಗಿದೆ. ಉಸಿರು ಇರುವ ತನಕ ವೀರಶೈವ ಸಂಸ್ಕೃತಿ ಮತ್ತು ಗುರು ಪರಂಪರೆ
ಶಾಸಕ ಎಚ್.ಡಿ ತಮ್ಮಯ್ಯ ಮಾತನಾಡಿ, ಶಿಕ್ಷಣ ಮತ್ತು ಆರೋಗ್ಯ ನೀಡುವುದು ಸರ್ಕಾರದ ಜವಾಬ್ದಾರಿ. ಇಂತಹ ಮಠಗಳು ಇವೆರಡನ್ನು ನೀಡುತ್ತಾ ಗ್ರಾಮೀಣ ಭಾಗದ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವ ಮೂಲಕ ಶೈಕ್ಷಣಿಕ ಕಾಳಜಿಗೆ ಒತ್ತು ನೀಡುತ್ತಿವೆ. ಶ್ರೀ ಮಠ ಬಯಲು ಭಾಗದ ಲಕ್ಷಾಂತರ ಭಕ್ತರನ್ನು ಹೊಂದಿದ್ದು, ಸ್ವಾಮೀಜಿ ಸರಳತೆ ಮೂರ್ತಿಯಾಗಿ, ಸಾಮಾಜಿಕ ಸೇವಾ ಕೈಂಕರ್ಯದ ಪ್ರತೀಕವಾಗಿ ಪ್ರತಿಯೊಬ್ಬ ಭಕ್ತರಿಗೂ ಮಾರ್ಗದರ್ಶಕರಾಗಿದ್ದಾರೆ ಎಂದರು.
ಕಾರಣ ಆತಂಕ ಸಂಘರ್ಷಕ್ಕೆ ಕಾರಣವಾಗಿದೆ. ಸನಾತನ ಧರ್ಮದ ಮೌಲ್ಯಗಳನ್ನು ಸಂರಕ್ಷಿಸಿಕೊಂಡು ಬಂದರೆ ಎಲ್ಲ ಮತ ಧರ್ಮಗಳು ಸಾಮರಸ್ಯದಿಂದ ಬದುಕಿ ಬಾಳಲು ಸಾಧ್ಯವಾಗುತ್ತದೆ ಎಂದರು.
ಪೋಟೊ15ಕೆಕೆಡಿಯು2.
ಕಡೂರು ತಾಲೂಕಿನ ಹುಲಿಕೆರೆಯಲ್ಲಿ ನಡೆದದೊಡ್ಡಮಠದ ಶ್ರೀ ವಿರೂಪಾಕ್ಷಲಿಂಗ ಶಿವಾಚಾರ್ಯ ವರ್ಧಂತಿಮಹೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಮಾರಂಭದಲ್ಲಿ“ವರಯೋಗಿ” ನಾಮಾಂಕಿತ ಅಭಿನಂದನಾ ಗ್ರಂಥವನ್ನುಶಾಸಕ ಎಚ್.ಡಿ.ತಮ್ಮಯ್ಯ ಬಿಡುಗಡೆ ಮಾಡಿದರು.