ವೃತ್ತಿಯನ್ನು ಗೌರವಿಸಿದರೆ ಜೀವನ ಸುಗಮ: ವರಾಳೆ

KannadaprabhaNewsNetwork |  
Published : Apr 18, 2024, 02:26 AM IST
ಗೋಕಾಕ: ಲಕ್ಷ್ಮಣರಾವ ಜಾರಕಿಹೊಳಿ ಪಾಲಿಟೆಕ್ನಿಕ್‌ನ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭವನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಗೋಕಾಕ ವೃತ್ತಿ ಜೀವನದಲ್ಲಿ ವೃತ್ತಿಯನ್ನು ಗೌರವಿಸಿ ಮಾದರಿಯಾಗಿ ಕಾರ್ಯನಿರ್ವಹಿಸಿದರೆ ಸದಾ ಸುಖವಾಗಿರಬಹುದು ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಸ್.ಪಿ. ವರಾಳೆ ಹೇಳಿದರು.

ಕನ್ನಡಪ್ರಭ ವಾರ್ತೆ ಗೋಕಾಕ ವೃತ್ತಿ ಜೀವನದಲ್ಲಿ ವೃತ್ತಿಯನ್ನು ಗೌರವಿಸಿ ಮಾದರಿಯಾಗಿ ಕಾರ್ಯನಿರ್ವಹಿಸಿದರೆ ಸದಾ ಸುಖವಾಗಿರಬಹುದು ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಸ್.ಪಿ. ವರಾಳೆ ಹೇಳಿದರು.ಬುಧವಾರ ಲಕ್ಷ್ಮಣರಾವ ಜಾರಕಿಹೊಳಿ ಪಾಲಿಟೆಕ್ನಿಕ್‌ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಶ್ರೇಷ್ಠತೆ ಜನ್ಮದಿಂದ ಬರುವುದಿಲ್ಲ. ಅದನ್ನು ಬೆಳೆಸಿಕೊಳ್ಳಬೇಕು. ತಾವು ಪಡೆದ ತಾಂತ್ರಿಕ ನೈಪುಣ್ಯತೆಯಿಂದ ಸ್ವಾವಲಂಬಿಗಳಾಗಿ ತಮ್ಮ ಬದುಕು ರೂಪಿಸಿಕೊಳ್ಳಿ. ಉನ್ನತ ಶಿಕ್ಷಣ ಪಡೆದರೆ ವೃತ್ತಿ ಜೀವನದಲ್ಲಿ ಹೆಚ್ಚಿನ ಸಾಧನೆ ಮಾಡಲು ಸಹಕಾರಿಯಾಗುತ್ತದೆ. 30 ವರ್ಷಗಳಿಂದ ಈ ಭಾಗದ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣ ನೀಡುತ್ತಿರುವ ಲಕ್ಷ್ಮೀ ಏಜುಕೇಶನ್ ಟ್ರಸ್ಟ್‌ನ ಕಾರ್ಯ ಶ್ಲಾಘನೀಯವಾಗಿದ್ದು, ತಾಂತ್ರಿಕ ಹಾಗೂ ವೈದ್ಯಕೀಯ ಮಹಾವಿದ್ಯಾಲಯಗಳನ್ನು ಪ್ರಾರಂಭಿಸಿ ಸಂಸ್ಥೆ ಹೆಮ್ಮರವಾಗಿ ಬೆಳೆಯಲೆಂದು ಹಾರೈಸಿದರು.

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸಿದರು.

ಆಡಳಿತಾಧಿಕಾರಿ ಎ.ಕೆ. ಕುಲಕರ್ಣಿ, ಪ್ರಾಚಾರ್ಯ ಎಚ್.ಎಸ್. ಅಡಿಬಟ್ಟಿ, ಉಪನ್ಯಾಸಕ ಪಿ.ಡಿ. ಪಾಂಚಾಳ ವೇದಿಕೆಯ ಮೇಲಿದ್ದರು.

ಕನ್ನಡಪ್ರಭ ವಾರ್ತೆ ಗೋಕಾಕ: ವೃತ್ತಿ ಜೀವನದಲ್ಲಿ ವೃತ್ತಿಯನ್ನು ಗೌರವಿಸಿ ಮಾದರಿಯಾಗಿ ಕಾರ್ಯನಿರ್ವಹಿಸಿದರೆ ಸದಾ ಸುಖವಾಗಿರಬಹುದು ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಸ್.ಪಿ. ವರಾಳೆ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಣ್ಣನ ವೀರಭೂಮಿ ಶೀಘ್ರ ಲೋಕಾರ್ಪಣೆ
ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಗಟ್ಟಿ