ಕನಕದಾಸರ ಆದರ್ಶಗಳಿಂದ ಜೀವನ ಸಾರ್ಥಕ: ಬಿ.ಕೆ ಸಂಗಮೇಶ್ವರ್

KannadaprabhaNewsNetwork |  
Published : Nov 09, 2025, 01:45 AM IST
ಭದ್ರಾವತಿಯಲ್ಲಿ ತಾಲೂಕು ಆಡಳಿತ ಹಾಗು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ತಾಲೂಕು ಪಂಚಾಯಿತಿ ಕಛೇರಿ ಆವರಣದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ  ಹರಿದಾಸ ಸಂತ, ದಾರ್ಶನಿಕ, ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತಿ ಕಾರ್ಯಕ್ರಮ ಕರ್ನಾಟಕ ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು. | Kannada Prabha

ಸಾರಾಂಶ

ಕನಕದಾಸರ ಆದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಂಡಾಗ ಮಾತ್ರ ನಮ್ಮ ಜೀವನ ಸಾರ್ಥಕವಾಗುತ್ತದೆ ಎಂದು ಕರ್ನಾಟಕ ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.

ಕನ್ನಡಪ್ರಭ ವಾರ್ತೆ ಭದ್ರಾವತಿ

ಕನಕದಾಸರ ಆದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಂಡಾಗ ಮಾತ್ರ ನಮ್ಮ ಜೀವನ ಸಾರ್ಥಕವಾಗುತ್ತದೆ ಎಂದು ಕರ್ನಾಟಕ ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.

ಅವರು ಶನಿವಾರ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ತಾಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಹರಿದಾಸ ಸಂತ, ದಾರ್ಶನಿಕ, ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕನಕದಾಸರ ಬದುಕು ನಮ್ಮೆಲ್ಲರಿಗೂ ಸ್ಪೂರ್ತಿದಾಯಕವಾಗಬೇಕು. ಅವರ ಆದರ್ಶಗಳು ನಮ್ಮ ಜೀವನಕ್ಕೆ ದಾರಿದೀಪವಾಗಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಮುನ್ನಡೆಯಬೇಕೆಂದರು.

ಕುರುಬ ಸಮುದಾಯದವರ ಬೇಡಿಕೆಯಂತೆ ನಗರಸಭೆ ವ್ಯಾಪ್ತಿಯಲ್ಲಿ ಕನಕದಾಸರು ಅಥವಾ ಸಂಗೊಳ್ಳಿ ರಾಯಣ್ಣರವರ ಪ್ರತಿಮೆ ನಿರ್ಮಿಸಿಕೊಡಲು ಬದ್ಧನಾಗಿದ್ದೇನೆ ಎಂದು ಭರವಸೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಮೇಲ್ವಿಚಾರಕ ಎಸ್.ವಿ ಶಶಿಕುಮಾರ್ ಉಪನ್ಯಾಸ ನೀಡಿ, ಕನಕದಾಸರ ಕುರಿತು ನಾವೆಲ್ಲರು ಅವರ ಬದುಕಿನಲ್ಲಿ ತಿಮ್ಮಪ್ಪ ತಿಮ್ಮಪ್ಪನಾಯಕನಾದ ಬಗೆ, ಕನಕನಾಯಕ ಕನಕದಾಸನಾದ ಬಗೆ ಅರ್ಥಮಾಡಿಕೊಂಡರೆ ಸಾಕು. ಕನಕದಾಸರು ಯಾರು, ಸಮಾಜಕ್ಕೆ ಅವರ ಕೊಡುಗೆಗಳು ಏನು ಎಂಬುದು ನಮಗೆ ಅರ್ಥವಾಗುತ್ತದೆ ಎಂದರು.

ಡಾ. ಬಿ.ಆರ್ ಅಂಬೇಡ್ಕರ್‌ರವರು, ಕನಕದಾಸರು ಮತ್ತು ಮಹರ್ಷಿ ವಾಲ್ಮೀಕಿಯವರು, ಸಮಾಜಕ್ಕೆ ನೀಡಿರುವ ಕೊಡುಗೆಗಳು ಅನನ್ಯವಾಗಿವೆ. ಆದರೆ ಹಿಂದುಳಿದ ಹಾಗೂ ತಳಸಮುದಾಯದವರು ಸಮಾಜಕ್ಕೆ ನೀಡಿರುವ ಕೊಡುಗೆಗಳು ಸಮಾಜದ ಮುಖ್ಯ ವಾಹಿನಿಗೆ ಬರುವುದೇ ಇಲ್ಲ. ಮೇಲ್ವರ್ಗದವರ ಕೊಡುಗೆಗಳು ಮಾತ್ರ ಪ್ರಜ್ವಲಿಸುತ್ತವೆ. ಇದು ವಿಷಾದನೀಯ ಸಂಗತಿಯಾಗಿದೆ. ಕನಕದಾಸರು ಕೇವಲ ನಮ್ಮ ಕನಕದಾಸರು ಮಾತ್ರವಲ್ಲ. ನಮ್ಮೆಲ್ಲರ ಕನಕದಾಸರು ಎಂಬುದನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದರು.

ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷೆ ಗೀತಾ ರಾಜಕುಮಾರ್, ಉಪಾಧ್ಯಕ್ಷ ಮಣಿ ಎಎನ್‌ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಪೌರಾಯುಕ್ತ ಕೆ.ಎನ್ ಹೇಮಂತ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ, ತಹಸೀಲ್ದಾರ್ ಪರುಸಪ್ಪ ಕುರುಬರ, ನಗರಸಭೆ ಸದಸ್ಯರಾದ ಮಂಜುಳಾ ಸುಬ್ಬಣ್ಣ, ಅನಿತಾ ಮಲ್ಲೇಶ್, ಕಾಂತರಾಜ್, ಕೆ. ಸುದೀಪ್ ಕುಮಾರ್, ಹನುಮಂತಪ್ಪ, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ಹಿರಿಯ ಪತ್ರಕರ್ತ ಕಣ್ಣಪ್ಪ, ಸಮಾಜದ ಪ್ರಮುಖರಾದ ಹಾ. ರಾಮಪ್ಪ, ಕರಿಯಪ್ಪ, ಗ್ಯಾಮಣ್ಣ, ಹೇಮಾವತಿ ಶಿವಾನಂದ್, ಉಮೇಶ್, ಕೇಸರಿಪಡೆ ಗಿರೀಶ್, ಮಹಾದೇವಣ್ಣ, ಎಸ್. ಮಂಜುನಾಥ್, ಮಾಲಾ ಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ ನಿರೂಪಿಸಿ, ಅಭಿಲಾಷ್ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಸಮಾಜದ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮಕ್ಕೂ ಮೊದಲು ನಗರದ ಲೋಯರ್ ಹುತ್ತಾದಿಂದ ಶ್ರೀ ಕನಕದಾಸರ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ