ಮಹನೀಯರ ಸಂದೇಶಗಳನ್ನುಅಳವಡಿಸಿಕೊಂಡರೆ ಜೀವನ ಸಾರ್ಥಕ: ಡಿ.ರವಿಶಂಕರ್

KannadaprabhaNewsNetwork | Published : Nov 19, 2024 12:45 AM

ಸಾರಾಂಶ

ಕಾಗಿನೆಲೆ ಮೈಸೂರು ಶಾಖಾ ಮಠದ ಶಿವಾನಂದಪುರಿ ಶ್ರೀಗಳು ಆಶೀರ್ವಚನ ನೀಡಿದರು. ಮಡಿಕೇರಿ ತಾಲೂಕು ಬಿಇಒ ಡಾ.ಬಿ.ಸಿ. ದೊಡ್ಡೇಗೌಡ ಭಕ್ತ ಕನಕದಾಸರ ಕುರಿತು ಉಪನ್ಯಾಸ ನೀಡಿದರು.

ಕನ್ನಡಪ್ರಭ ವಾರ್ತೆ ಕೆ.ಆರ್. ನಗರ

ಮಹನೀಯರು ನಮಗೆ ಹಾಕಿಕೊಟ್ಟಿರುವ ತತ್ವ ಮತ್ತು ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಎಲ್ಲರ ಜೀವನ ಸಾರ್ಥಕವಾಗಲಿದೆ ಎಂದು ಶಾಸಕ ಡಿ. ರವಿಶಂಕರ್ ಹೇಳಿದರು.

ತಾಲೂಕು ಆಡಳಿತ ಮತ್ತು ತಾಲೂಕು ಕುರುಬರ ಸಂಘದ ವತಿಯಿಂದ ಪಟ್ಟಣದ ಕಾಗಿನೆಲೆ ಮಠದ ಆವರಣದಲ್ಲಿ ನಡೆದ ಭಕ್ತ ಕನಕದಾಸರ 537 ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕನಕದಾಸರು ಕುಲ ಕುಲವೆಂದು ಹೊಡೆದಾಡಬೇಡಿ ಎಂದು ಸಂದೇಶ ನೀಡಿದ್ದು, ಇದನ್ನು ಎಲ್ಲರೂ ಅರಿಯಬೇಕೆಂದರು.

ವಿಧಾನ ಪರಿಷತ್ ಸದಸ್ಯರಾದ ಎಚ್. ವಿಶ್ವನಾಥ್ ಅವರ ಸಲಹೆಯಂತೆ ಮುಂದಿನ ವರ್ಷದಿಂದ ಪಟ್ಟಣದ ಪುರಸಭೆಯ ಡಾ. ರಾಜಕುಮಾರ್

ಸಾಂಸ್ಕೃತಿಕ ಭಾನಂಗಳದಲ್ಲಿ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮ ಆಚರಿಸಬೇಕೆಂದು ಅಧಿಕಾರಿಗಳಿಗೆ ಆದೇಶಿಸಿದರು.

ಕಾಗಿನೆಲೆ ಮೈಸೂರು ಶಾಖಾ ಮಠದ ಶಿವಾನಂದಪುರಿ ಶ್ರೀಗಳು ಆಶೀರ್ವಚನ ನೀಡಿದರು. ಮಡಿಕೇರಿ ತಾಲೂಕು ಬಿಇಒ ಡಾ.ಬಿ.ಸಿ. ದೊಡ್ಡೇಗೌಡ ಭಕ್ತ ಕನಕದಾಸರ ಕುರಿತು ಉಪನ್ಯಾಸ ನೀಡಿದರು. ಆನಂತರ ಕನ್ನಡಪ್ರಭ ವರದಿಗಾರ ಕುಪ್ಪೆಮಹದೇವಸ್ವಾಮಿ, ಪತ್ರಕರ್ತರಾದ ನಾಗೇಶ್, ಜಿ.ಕೆ. ನಾಗಣ್ಣ ಸೇರಿದಂತೆ ಇತರ ಸಾಧಕರಿಗೆ ಕನಕಶ್ರೀ ಪ್ರಶಸ್ತಿ ನೀಡುವುದರ ಜತೆಗೆ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳ ಪರವಾಗಿ ಅವರ ಪೋಷಕರನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮ ಆರಂಭಕ್ಕೂ ಮೊದಲು ಪಟ್ಟಣದ. ಹಾಸನ- ಮೈಸೂರು ರಸ್ತೆಯಲ್ಲಿರುವ ಡಾ.ಬಿ.ಆರ್‌. ಅಂಬೇಡ್ಕರ್ ಅವರ ಪ್ರತಿಮೆಯ ಬಳಿಯಿಂದ ಭಕ್ತ ಕನಕದಾಸರ ಭಾವಚಿತ್ರವನ್ನು ಬೆಳ್ಳಿರಥದಲ್ಲಿ ವಿವಿಧ ಸಾಂಸ್ಕೃತಿಕ ಕಲಾ ತಂಡಗಳ ಜತೆ ಮೆರವಣಿಗೆ ಮಾಡಲಾಯಿತು‌.

ತಾಲೂಕು ಕುರುಬರ ಸಂಘದ ಅಧ್ಯಕ್ಷ ಜೆ. ಶಿವಣ್ಣ, ಉಪಾಧ್ಯಕ್ಷ ಸಾಕರಾಜು, ಪ್ರಧಾನ ಕಾರ್ಯದರ್ಶಿ ಪ್ರಕಾಶ್, ನಿರ್ದೇಶಕರಾದ ಕೆ.ಎಚ್. ಬುಡೀಗೌಡ, ಜೆ. ಕೃಷ್ಣೇಗೌಡ, ಎಂ.ಎಸ್. ಅನಂತ್, ದೇವರಾಜು, ಜಿಲ್ಲಾ ನಿರ್ದೇಶಕರಾದ ಬಸವರಾಜು, ಜಿ.ಎಂ. ಹೇಮಂತ್, ಜಿಪಂ ಮಾಜಿ ಸದಸ್ಯರಾದ ಜಿ.ಆರ್. ರಾಮೇಗೌಡ, ಜಯರಾಮೇಗೌಡ, ಪುರಸಭೆ ಸದಸ್ಯರಾದ ನಟರಾಜು, ಪ್ರಕಾಶ್, ಶಿವುನಾಯಕ್, ಬೇರ್ಯ ಗ್ರಾಪಂ ಅಧ್ಯಕ್ಷ ಮಂಜಪ್ಪ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್.ಮಹೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ಎಚ್.ಪಿ.ಪ್ರಶಾಂತ್, ಗ್ಯಾರಂಟಿ ಪ್ರಾಧಿಕಾರ ಸಮಿತಿ ಅಧ್ಯಕ್ಷ ಎಂ.ಎಸ್. ಮಹದೇವ್, ಉದಯಶಂಕರ್, ತಾಲೂಕು ಕಾಂಗ್ರೆಸ್ ವಕ್ತಾರ ಸೈಯದ್ ಜಾಬೀರ್, ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಂ. ಮಾಲೇಗೌಡ, ತಾಲೂಕು ಕುರುಬ ಸಮಾಜದ ಮುಖಂಡರಾದ ಗರುಡಗಂಭದಸ್ವಾಮಿ, ಕೆಂಪನಕೊಪ್ಪಲುಜಗದೀಶ್, ರೈತ ಮುಖಂಡ ಎಂ.ಜೆ. ರಮೇಶ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಡಾ.ಡಿ. ನಟರಾಜು, ತಹಸೀಲ್ದಾರ್ಗಳಾದ ಸೋಮನಗೌಡ ಎಸ್. ನರಗುಂದ, ಜೆ. ಸುರೇಂದ್ರಮೂರ್ತಿ, ಬಿಇಒ ಆರ್. ಕೃಷ್ಣಪ್ಪ, ಪುರಸಭೆ ಮುಖ್ಯಾಧಿಕಾರಿ ಬಿ.ವಿ.ವೆಂಕಟೇಶ್ ಇದ್ದರು.

Share this article