ಹೊಸಕೋಟೆ: ಮನುಷ್ಯ ಜೀವನ ಅತ್ಯಮೂಲ್ಯವಾದುದು. ಪ್ರತಿಯೊಬ್ಬ ಮನುಷ್ಯನು ಜೀವನದಲ್ಲಿ ಸತ್ಯ, ಧರ್ಮದ ಹಾದಿಯಲ್ಲಿ ನಡೆದರೆ ಬದುಕು ಸಾರ್ಥಕತೆ ಕಾಣುತ್ತದೆ. ನಾನು ಸತ್ಯ ಧರ್ಮದ ಹಾದಿಯಲ್ಲೇ ನಡೆಯುತ್ತಿದ್ದೇನೆ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಹೇಳಿದರು.
ಕಾಂಗ್ರೆಸ್ ವಿರುದ್ಧ ಕಿಡಿ:
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಸಿಕ್ಕಿಕೊಂಡಿದೆ. ಬಡ ಮಧ್ಯಮ ವರ್ಗ ಸೇರಿದಂತೆ ಎಲ್ಲಾ ವರ್ಗದವರು ಕಟ್ಟಿದ ತೆರಿಗೆ ಹಣವನ್ನು ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಬಳಕೆ ಮಾಡದೆ ವಿವಿಧ ಕೆಲಸಗಳಿಗೆ ವೈಯಕ್ತಿಕವಾಗಿ ಬಳಕೆ ಮಾಡಿಕೊಂಡಿರುವುದು ತಪ್ಪು. ಈ ರೀತಿ ಯಾವುದೇ ಪಕ್ಷವಾಗಲಿ, ವ್ಯಕ್ತಿಯಾಗಲಿ ಮಾಡುವುದು ಸರಿಯಲ್ಲ. ಈಗಾಗಲೆ ಎಸ್‌ಐಟಿ, ಇಡಿ ತನಿಖೆ ನಡೆಯುತ್ತಿದೆ. ಅಂತಹವರ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ರಾಜಕಾರಣ ಎಂದರೆ ಜನಸೇವೆ. ಆದರೀಗ ರಾಜಕಾರಣ ಎಂದರೆ ಸ್ವಾರ್ಥಗೆಂಬಂತಾಗಿದೆ. ಜನಸೇವೆ ಬಿಟ್ಟು ಅಧಿಕಾರ ಹಾಗೂ ಹಣದ ಹಿಂದೆ ಹೋಗುವವರೆ ಹೆಚ್ಚು. ಆದ್ದರಿಂದ ರಾಜಕಾರಣವನ್ನು ವ್ಯಾಪಾರ ಮಾಡಿಕೊಳ್ಳದೆ ಪ್ರಜಾಸೇವೆಯನ್ನಾಗಿ ಮಾಡಿಕೊಳ್ಳಬೇಕು ಎಂದು ಎಂಟಿಬಿ ನಾಗರಾಜ್ ತಿಳಿಸಿದರು.ಕಾರ್ಯಕ್ರಮದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಹುಲ್ಲೂರು ಕೆ.ಸತೀಶ್, ನಾಡಪ್ರಭು ಕೆಂಪೇಗೌಡರ ಒಕ್ಕಲಿಗರ ಸಂಘದ ನಿರ್ದೆಶಕ ಬೋಧನಹೊಸಹಳ್ಳಿ ಸೊಣ್ನೇಗೌಡ, ಭರತ್ ಗೌಡ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಭರತ್‌ಗೌಡ ಮತ್ತಿತರರು ಹಾಜರಿದ್ದರು.
ಪಾರದರ್ಶಕ ಆಡಳಿತಕ್ಕೆ ಒತ್ತು ನೀಡಿ
(ಒಂದು ಫೋಟೋ ಪ್ಯಾನಲ್‌ನಲ್ಲಿ ಬಳಸಿ)
3: ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರ ಹುಟ್ಟುಹಬ್ಬದ ಪ್ರಯುಕ್ತ ಕಾರ್ಯಕರ್ತರು ಕೇಕ್ ಕತ್ತರಿಸಿ ಶುಭಾಶಯ ಕೋರಿದರು.
ಹೊಸಕೋಟೆಯಲ್ಲಿ ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಯೊಬ್ಬರು ಟಗರು ಉಡುಗೊರೆಯಾಗಿ ನೀಡಿದರು. ತಾಲೂಕು ಬಿಜೆಪಿ ಅಧ್ಯಕ್ಷ ಹುಲ್ಲೂರು ಕೆ.ಸತೀಶ್, ನಾಡಪ್ರಭು ಕೆಂಪೇಗೌಡರ ಒಕ್ಕಲಿಗರ ಸಂಘದ ನಿರ್ದೆಶಕ ಬೋಧನಹೊಸಹಳ್ಳಿ ಸೊಣ್ನೇಗೌಡ, ಭರತ್ ಗೌಡ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಭರತ್‌ಗೌಡ ಮತ್ತಿತರರು ಹಾಜರಿದ್ದರು.