ರಂಗಭೂಮಿಯಿಂದ ಜೀವನ ಸಂಸ್ಕಾರ: ಶಾಸಕ ಯಶಪಾಲ್ ಸುವರ್ಣ

KannadaprabhaNewsNetwork |  
Published : May 03, 2026, 02:45 AM IST
ರಂಗಭೂಮಿ ಆನಂದೋತ್ಸವವನ್ನು ಶಾಸಕ ಯಶ್‌ಪಾಲ್ ಸುವರ್ಣ ಉದ್ಘಾಟಿಸಿದರು | Kannada Prabha

ಸಾರಾಂಶ

ನಾಟಕಗಳು ಕೇವಲ ಮನೋರಂಜನೆಗೆ ಮಾತ್ರವಲ್ಲ, ಜೀವನ ಸಂಸ್ಕಾರವನ್ನು ಬೆಳೆಸುತ್ತವೆ. ಬದುಕಿನ ಆಚಾರ ವಿಚಾರ ತಿಳಿಸುವ ಕೆಲಸ ರಂಗಭೂಮಿಯಿಂದ, ರಂಗಕಲೆಗಳಿಂದ ಇನ್ನಷ್ಟು ನಡೆಯಬೇಕು. ಈ ನಿಟ್ಟಿನಲ್ಲಿ ರಂಗಭೂಮಿ ಉಡುಪಿಯ ಕಾರ್ಯ ಮಾದರಿಯಾಗಿದೆ ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ಹೇಳಿದರು.

ಉಡುಪಿ: ನಾಟಕಗಳು ಕೇವಲ ಮನೋರಂಜನೆಗೆ ಮಾತ್ರವಲ್ಲ, ಜೀವನ ಸಂಸ್ಕಾರವನ್ನು ಬೆಳೆಸುತ್ತವೆ. ಬದುಕಿನ ಆಚಾರ ವಿಚಾರ ತಿಳಿಸುವ ಕೆಲಸ ರಂಗಭೂಮಿಯಿಂದ, ರಂಗಕಲೆಗಳಿಂದ ಇನ್ನಷ್ಟು ನಡೆಯಬೇಕು. ಈ ನಿಟ್ಟಿನಲ್ಲಿ ರಂಗಭೂಮಿ ಉಡುಪಿಯ ಕಾರ್ಯ ಮಾದರಿಯಾಗಿದೆ ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ಹೇಳಿದರು.

ಅವರು ನಗರದ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ರಂಗಭೂಮಿ ಉಡುಪಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಸಹಯೋಗದಲ್ಲಿ ಸಂಸ್ಥೆಯ ಸಂಸ್ಥಾಪಕ ದಿ.ಕುತ್ಪಾಡಿ ಆನಂದ ಗಾಣಿಗರ ಸ್ಮರಣಾರ್ಥ ಎರಡು ದಿನಗಳ ಕಾಲ ಹಮ್ಮಿಕೊಂಡ ರಂಗಭೂಮಿ ಆನಂದೋತ್ಸವ 2026 ನ್ನು ಉದ್ಘಾಟಿಸಿ ಮಾತನಾಡಿದರು.

ರಂಗಭೂಮಿ ಉಡುಪಿ ಸಂಸ್ಥೆಯನ್ನು ಹುಟ್ಟುಹಾಕಿ, ಅದರ ಅಧ್ಯಕ್ಷನಾಗಿ, ಕಲಾವಿದನಾಗಿ ಬೆಳೆಸಿದ ದಿ. ಕುತ್ಪಾಡಿ ಆನಂದ ಗಾಣಿಗ ಅವರ ಶ್ರಮ ಇಂದು ಫಲ ನೀಡಿದೆ. ಈ ಸಂಸ್ಥೆ ಅನೇಕ ಕಲಾವಿದರು, ಪ್ರತಿಭೆಗಳಿಗೆ ವೇದಿಕೆಯಾಗಿ ನಾಡಿಗೆ ಪರಿಚಯಿಸಿದೆ. ಆನಂದ ಗಾಣಿಗರು ರಂಗಭೂಮಿಗೆ ನೀಡಿದ ಕೊಡುಗೆ ಅಪಾರ. ಸಮಾಜದ ಅಂಕುಡೊಂಕನ್ನು ತಿದ್ದುವ ಈ ನಾಟಕೋತ್ಸವಗಳು ಇಂದಿನ ಆಧುನಿಕ ಕಾಲಘಟ್ಟದಲ್ಲಿ ಹೆಚ್ಚುಹೆಚ್ಚು ನಡೆಯಬೇಕಾದ ಅಗತ್ಯವಿದೆ ಎಂದು ಅವರು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ರಂಗಭೂಮಿ ಉಡುಪಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ, ರಂಗಭೂಮಿ ಉಡುಪಿ ತನ್ನ 60 ವರ್ಷಗಳ ಇತಿಹಾಸದಲ್ಲಿ ಅನೇಕ ಕೊಡುಗೆಗಳನ್ನು ಸಮಾಜಕ್ಕೆ ನೀಡಿದೆ. ಈ ಸಂಸ್ಥೆಯನ್ನು ಮುನ್ನಡೆಸಿದ ದಿ. ಆನಂದ ಗಾಣಿಗರ ಶ್ರಮ, ಮಾತು ನಮ್ಮ ಮುಂದಿದೆ. ಮಕ್ಕಳಿಗೆ ರಂಗಶಿಕ್ಷಣ ನೀಡಿ ಭವಿಷ್ಯದ ಕಲಾವಿದರನ್ನು ಹುಟ್ಟುಹಾಕುವ ಯೋಜನೆಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಸಂಘಸoಸ್ಥೆಗಳು, ರಂಗಾಸಕ್ತ ಮನಸ್ಸುಗಳು ರಂಗಭೂಮಿಯನ್ನು ಉಳಿಸಿ ಬೆಳೆಸಲು ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.

ಕರ್ನಾಟಕ ಬ್ಯಾಂಕಿನ ಅಧಿಕಾರಿ ಸುಬ್ರಹ್ಮಣ್ಯ, ರಂಗಭೂಮಿ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಚಂದ್ರ ಕುತ್ಪಾಡಿ, ಉಪಾಧ್ಯಕ್ಷರಾದ ಭಾಸ್ಕರ ರಾವ್ ಕಿದಿಯೂರು, ಎನ್. ಆರ್. ಬಲ್ಲಾಳ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕ ಜಿ.ಪಿ.ಪ್ರಭಾಕರ್ ತುಮರಿ ಕಾರ್ಯಕ್ರಮ ನಿರೂಪಿಸಿದರು. ರಂಗಭೂಮಿಯ ರಂಗಶಿಕ್ಷಣ ನಿರ್ದೇಶಕ ವಿದ್ಯಾವಂತ ಆಚಾರ್ಯ ಸ್ವಾಗತಿಸಿದರು. ಸಭಾ ಕಾರ್ಯಕ್ರಮದ ಬಳಿಕ ಶ್ರೀಪಾದ ಹೆಗಡೆ ನಿರ್ದೇಶನದ ಸಂವೇದನೆ ನಾಟಕ ಪ್ರದರ್ಶನಗೊಂಡಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ
ರಾಯಲ್‌ ಸ್ಕೂಲ್‌ ಸೌಲಭ್ಯಗಳು ರಾಜ್ಯಕ್ಕೆ ಮಾದರಿ