ಕನ್ನಡಪ್ರಭ ವಾರ್ತೆ ನಾಪೋಕ್ಲು
ಹೊದವಾಡ ಗ್ರಾಮದ ರಾಫಾಲ್ಸ್ ಇಂಟರ್‌ನ್ಯಾಷನಲ್ ಇಂಗ್ಲಿಷ್ ಮಾಧ್ಯಮ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು.ಜೀವನದಲ್ಲಿ ಸಿಗುವ ಒಂದೊಂದು ಅವಕಾಶವನ್ನು ಬಳಸಿಕೊಂಡು ಮುಂದೆ ಬರಲು ಪ್ರಯತ್ನಿಸಬೇಕು. ಹಲವಾರು ವರ್ಷಗಳ ಪರಿಸರಮದಿಂದ ಆಗುವಂಥದ್ದು ಒಂದು ಕ್ಷಣದಲ್ಲಿ ಸಾಧನೆ ಮಾಡಲು ಅಸಾಧ್ಯ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಝೀವಲ್ ಖಾನ್ ಮಾತನಾಡಿ, ಸದೃಢ ಸಮಾಜ ನಿರ್ಮಾಣ ಉತ್ತಮ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದರು.ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕೊಡಗು ಜಿಲ್ಲಾ ಉಪಾಧ್ಯಕ್ಷ ಎನ್ ಕೆ ಮೆಹಬೂಬ್ ಸಾಬ್ ಅಧ್ಯಕ್ಷತೆ ವಹಿಸಿದ್ದರು. ಹೊದ್ದೂರು ಗ್ರಾಮ ಪಂಚಾಯಿತಿ ಸದಸ್ಯ ಕೆ ಎಂ ಮೊಯ್ದು, ಕೊಡಗು ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಅಧಿಕಾರಿ ದಮಯಂತಿ ಹಾಗೂ ಶಾಲಾ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷೆ ಐ ಜೆ ಸಮೀರಾ ಮತ್ತಿತರರಿದ್ದರು.