ಮಾರಕ ಕಾಯಿಲೆಗಳನ್ನು ಆರಂಭದಲ್ಲೇ ಗುಣಪಡಿಸಬಹುದು

KannadaprabhaNewsNetwork |  
Published : Oct 08, 2026, 01:45 AM IST
7ಎಚ್ಎಸ್ಎನ್12 :  | Kannada Prabha

ಸಾರಾಂಶ

ಮಾಜಿ ಎಂಎಲ್‌ಸಿ ಎಂ.ಎ. ಗೋಪಾಲಸ್ವಾಮಿ ಅವರ ೫೬ನೇ ಹುಟ್ಟುಹಬ್ಬದ ಅಂಗವಾಗಿ ಎಂ.ಎ.ಗೋಪಾಲಸ್ವಾಮಿ ಬ್ರಿಗೇಡ್ ಹಾಗೂ ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಬದಲಾಗುತ್ತಿರುವ ಜೀವನ ಶೈಲಿ, ಆಹಾರ ಪದ್ಧತಿ, ಒತ್ತಡ ಹಾಗೂ ವ್ಯಾಯಾಮದ ಕೊರತೆಯಿಂದ ಮಧುಮೇಹ, ಹೃದ್ರೋಗ, ರಕ್ತದೊತ್ತಡ, ಕ್ಯಾನ್ಸರ್ ಸೇರಿ ವಿವಿಧ ಕಾಯಿಲೆಗಳು ಹೆಚ್ಚುತ್ತಿವೆ. ಪೌಷ್ಟಿಕ ಆಹಾರ, ನಿಯಮಿತ ವ್ಯಾಯಾಮ, ಸಮರ್ಪಕ ನಿದ್ರೆ ಹಾಗೂ ಒತ್ತಡ ನಿಯಂತ್ರಣಕ್ಕೆ ಆದ್ಯತೆ ನೀಡಬೇಕು. ಸಣ್ಣ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿ ಸದೆ ಆರಂಭಿಕ ಹಂತದಲ್ಲಿಯೇ ವೈದ್ಯರನ್ನು ಸಂಪರ್ಕಿಸುವುದು ಅಗತ್ಯ ಎಂದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಗಂಭೀರ ಕಾಯಿಲೆಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಬಹುದೆಂದು ಶ್ರೀ ಆದಿಚುಂಚನಗಿರಿ ಶಾಖಾಮಠದ ಶ್ರೀ ಶಂಭುನಾಥ ಸ್ವಾಮೀಜಿ ಅವರು ಹೇಳಿದರು.

ಪಟ್ಟಣದ ಪೇಟೆ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಮಾಜಿ ಎಂಎಲ್‌ಸಿ ಎಂ.ಎ. ಗೋಪಾಲಸ್ವಾಮಿ ಅವರ ೫೬ನೇ ಹುಟ್ಟುಹಬ್ಬದ ಅಂಗವಾಗಿ ಎಂ.ಎ.ಗೋಪಾಲಸ್ವಾಮಿ ಬ್ರಿಗೇಡ್ ಹಾಗೂ ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಬದಲಾಗುತ್ತಿರುವ ಜೀವನ ಶೈಲಿ, ಆಹಾರ ಪದ್ಧತಿ, ಒತ್ತಡ ಹಾಗೂ ವ್ಯಾಯಾಮದ ಕೊರತೆಯಿಂದ ಮಧುಮೇಹ, ಹೃದ್ರೋಗ, ರಕ್ತದೊತ್ತಡ, ಕ್ಯಾನ್ಸರ್ ಸೇರಿ ವಿವಿಧ ಕಾಯಿಲೆಗಳು ಹೆಚ್ಚುತ್ತಿವೆ. ಪೌಷ್ಟಿಕ ಆಹಾರ, ನಿಯಮಿತ ವ್ಯಾಯಾಮ, ಸಮರ್ಪಕ ನಿದ್ರೆ ಹಾಗೂ ಒತ್ತಡ ನಿಯಂತ್ರಣಕ್ಕೆ ಆದ್ಯತೆ ನೀಡಬೇಕು. ಸಣ್ಣ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿ ಸದೆ ಆರಂಭಿಕ ಹಂತದಲ್ಲಿಯೇ ವೈದ್ಯರನ್ನು ಸಂಪರ್ಕಿಸುವುದು ಅಗತ್ಯ ಎಂದರು.

ಜನಸೇವೆಯ ಉದ್ದೇಶದಿಂದ ಹುಟ್ಟುಹಬ್ಬದ ಸಂದರ್ಭದಲ್ಲಿ ಉಚಿತ ಆರೋಗ್ಯ ಶಿಬಿರ ಆಯೋಜಿಸಿರುವುದು ಶ್ಲಾಘನೀಯ. ಆರ್ಥಿಕವಾಗಿ ಹಿಂದುಳಿದವರು ಹಾಗೂ ದೂರದ ಪ್ರದೇಶಗಳ ಜನರಿಗೆ ಒಂದೇ ಸ್ಥಳದಲ್ಲಿ ವಿವಿಧ ತಜ್ಞ ವೈದ್ಯರಿಂದ ತಪಾಸಣೆ ಮತ್ತು ಸಲಹೆ ಪಡೆಯಲು ಇಂತಹ ಶಿಬಿರಗಳು ಸಹಕಾರಿಯಾಗುತ್ತವೆಂದು ಹೇಳಿದರು.

ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಎ. ಗೋಪಾಲಸ್ವಾಮಿ ಅವರು ಮಾತನಾಡಿ, ಆರೋಗ್ಯಕರ ಜೀವನಶೈಲಿಯನ್ನು ಪ್ರತಿದಿನವೂ ಪಾಲಿಸು ವುದು ಅಗತ್ಯ. ವಿಶೇ?ವಾಗಿ ೪೦ ವರ್ಷ ಮೇಲ್ಪಟ್ಟವರು ಹಾಗೂ ಕುಟುಂಬದಲ್ಲಿ ಕಾಯಿಲೆ ಗಳ ಹಿನ್ನಲೆ ಹೊಂದಿರುವವರು ವೈದ್ಯರ ಸಲಹೆಯಂತೆ ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಮುಂದಿನ ದಿನಗಳಲ್ಲಿಯೂ ಆರೋಗ್ಯ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದೆಂದರು.ವಿವಿಧ ವಿಭಾಗಗಳ ತಪಾಸಣೆ: ಡಾ.ಭಾವನಾ ಗೋಪಾಲಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಶಿಬಿರದಲ್ಲಿ ಹೃದ್ರೋಗ, ಮಧು ಮೇಹ, ಕ್ಯಾನ್ಸರ್, ಪಿತ್ತಜನಕಾಂಗ, ಶಸ್ತ್ರಚಿಕಿತ್ಸೆ, ಕಣ್ಣು, ಕಿವಿ-ಮೂಗು-ಗಂಟಲು, ಮಕ್ಕಳ ಆರೋಗ್ಯ, ಮಾನಸಿಕ ಆರೋಗ್ಯ, ಮೂಳೆ-ಕೀಲು, ದಂತ ಹಾಗೂ ಸ್ತ್ರಿರೋಗ ವಿಭಾಗಗಳ ತಜ್ಞರು ಭಾಗವಹಿಸಿ ಸಾರ್ವಜನಿಕರಿಗೆ ತಪಾಸಣೆ ಹಾಗೂ ವೈದ್ಯಕೀಯ ಸಲಹೆ ನೀಡಿದರು. ಮಹಿಳೆಯರ ಆರೋಗ್ಯಕ್ಕೆ ವಿಶೇಷ ಆದ್ಯತೆ ನೀಡಲಾಗಿತ್ತು. ಶಿಬಿರದಲ್ಲಿ ಉಚಿತ ಇಸಿಜಿ ಮತ್ತು ರಕ್ತ ಪರೀಕ್ಷೆ ನಡೆಸಿ, ಅಗತ್ಯವಿರುವವರಿಗೆ ಔಷಧಗಳನ್ನು ವಿತರಿಸಲಾಯಿತು. ಅಂಗಾಂಗ ದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲು ಜಾಥಾ ಕೂಡ ಆಯೋಜಿಸಲಾಗಿತ್ತು.

ನುಗ್ಗೇಹಳ್ಳಿ ಪುರವರ್ಗ ಹಿರೇಮಠದ ಡಾ. ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ, ಶಕ್ತಿಮಠದ ಬಸವೇಶ್ವರ ಚೈತನ್ಯ ಸ್ವಾಮೀಜಿ, ಹೃದಯ ತಜ್ಞ ಡಾ.ನಾಗೇಶ್, ಡಾ.ಪ್ರಥಮ್ ನಾಗೇಶ್, ಗೀತಾ ಗೋಪಾಲಸ್ವಾಮಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್, ಮಾಜಿ ಅಧ್ಯಕ್ಷ ಎಂ.ಶಂಕರ್, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಎಲ್. ಪಿ. ಪ್ರಕಾಶಗೌಡ, ಪುರಸಭೆ ಮಾಜಿ ಅಧ್ಯಕ್ಷ ಸಿ. ಟಿ. ಅಶೋಕ್ ಕುಮಾರ್‌, ಕಾಂಗ್ರೆಸ್ ಮುಖಂಡ ಜೋಗಿಪುರ ನಂದನ್ ಸೇರಿ ಸಮಿತಿ ಪದಾಧಿಕಾರಿಗಳು, ಮುಖಂಡರು, ಗಣ್ಯರು, ವೈದ್ಯರು, ಆರೋಗ್ಯ ಸಿಬ್ಬಂದಿ, ಎಂ.ಎ.ಗೋಪಾಲಸ್ವಾಮಿ ಅವರ ಅಭಿಮಾನಿಗಳು, ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್‌ ಜಿಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ: ಖಂಡ್ರೆ
ಮೀನು ಹಿಡಿಯುವ ಕಾರ್ಯ ಟೆಂಡರ್ ಮೂಲಕ ನಡೆಸಿ