ಕನ್ನಡಪ್ರಭ ವಾರ್ತೆ, ದಾವಣಗೆರೆ
ಅರಿವುಳ್ಳ ಮಾನವ ಜನ್ಮದಲ್ಲಿ ಅರಿತು ಬಾಳಿದರೆ ಬಾಳು ಬಂಗಾರವಾಗುತ್ತದೆ, ಮರೆತು ಮಲಗಿದರೆ ಬದುಕು ಬಂಧನಕಾರಿ ಆಗುತ್ತದೆ. ಅರಿವಿನ ಆದರ್ಶಗಳು ಬದುಕಿನ ಉನ್ನತಿ, ಶ್ರೇಯಸ್ಸಿಗೆ ಸೋಪಾನವಾಗಿವೆ ಎಂದು ಬಾಳೆಹೊನ್ನೂರಿನ ಶ್ರೀ ರಂಭಾಪುರಿ ಪೀಠದ ಡಾ.ವೀರ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ನುಡಿದರು.ನಗರದ ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಭವನದಲ್ಲಿ ಶನಿವಾರ ಶ್ರೀಮದ್ ವೀರಶೈವ ಸದ್ಬೋಧನಾ ಸಂಸ್ಥೆ ಜಿಲ್ಲಾ ಘಟಕ ಸಂಘಟಿಸಿದ ಜನಜಾಗೃತಿ ಧರ್ಮ ಸಮಾವೇಶದ ಸಮಾರೋಪ ಸಮಾರಂಭದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಅಧಿಕಾರದ ಅಂತಸ್ತು ಮೇಲೇರಿದಂತೆ ನೀತಿಯ ಅಂತಸ್ತು ಸಹ ಮೇಲೇರಬೇಕು ಎಂದರು.
ಧರ್ಮದಿಂದ ವಿಮುಖನಾದರೆ ಬದುಕು ಅಶಾಂತಿಯ ಕಡಲಾಗುತ್ತದೆ. ಶ್ರೀ ಜಗದ್ಗುರು ರೇಣುಕಾಚಾರ್ಯರು ಸಮಷ್ಠಿ ಪ್ರಜ್ಞೆಯಿಂದ ಜೀವ ಜಗತ್ತಿಗೆ ಕೊಟ್ಟ ಮೌಲ್ಯಾಧಾರಿತ ಚಿಂತನೆಗಳು ನಮ್ಮೆಲ್ಲರ ಬಾಳಿಗೆ ಬೆಳಕು ತೋರುತ್ತವೆ ಎಂದು ಜಗದ್ಗುರು ತಿಳಿಸಿದರು.ಬಿಳಕಿ ಹಿರೇಮಠದ ರಾಚೋಟೇಶ್ವರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ, ಭಾರತೀಯ ಸಂಸ್ಕೃತಿಗೆ ಮಹಿಳೆಯರ ಕೊಡುಗೆ ಅಪಾರ. ಜ್ಞಾನ ಕ್ರಿಯಾತ್ಮಕವಾದ ಧರ್ಮ ಪಾಲನೆಯಿಂದ ಜಗದಲ್ಲಿ ಶಾಂತಿ ನೆಲೆಸಲು ಸಾಧ್ಯ ಎಂದು ಹೇಳಿದರು.
ಬೀರೂರು ಬಾಳೆಹೊನ್ನೂರು ಖಾಸಾ ಶಾಖಾ ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು. ಚನ್ನಗಿರಿ ಡಾ.ಕೇದಾರ ಶಿವಶಾಂತವೀರ ಶಿವಾಚಾರ್ಯ ಸ್ವಾಮಿಗಳು ಭಕ್ತಿ ಗೀತೆ ಹಾಡಿದರು. ಹಾರನಹಳ್ಳಿ ಶಿವಯೋಗಿ ಶಿವಾಚಾರ್ಯರು, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಯದೇವ ನಾಯ್ಕ, ಮಾಜಿ ಮೇಯರ್ ಎಸ್.ಟಿ.ವೀರೇಶ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ವೀರೇಶ ಹನಗವಾಡಿ, ಕಾಂಗ್ರೆಸ್ ಮುಖಂಡ ಎಂ.ಟಿ.ಸುಭಾಶ್ಚಂದ್ರ, ಪಾಲಿಕೆ ವಿಪಕ್ಷ ನಾಯಕ ಕೆ.ಪ್ರಸನ್ನಕುಮಾರ, ಹರಿಹರ ಎಸ್‌ಜೆವಿಪಿ ಕಾಲೇಜು ಕಾರ್ಯದರ್ಶಿ ಆರ್.ಟಿ.ಪ್ರಶಾಂತ, ಗುರಿ ಸೋಗಿ, ಜಯಪ್ರಕಾಶ ಮಾಗಿ ಭಾಗವಹಿಸಿದ್ದರು.ಸಂಸ್ಥೆ ಜಿಲ್ಲಾಧ್ಯಕ್ಷ ದೇವರಮನೆ ಶಿವಕುಮಾರ, ಶ್ರೀ ಜಗದ್ಗುರು ರೇಣುಕ ಸಾಂಸ್ಕೃತಿಕ ಸಂಘದ ಅಧ್ಯಕ್ಷ ದೇವರಮನೆ ಶಿವರಾಜ, ರೂಪ ಗಣೇಶ, ಮೇನಕಾ ವೀರೇಶ, ವಿದ್ಯಾ ಉಮೇಶ, ನಂದಿಗಾವಿ ತಿಪ್ಪೇಸ್ವಾಮಿ, ರಾಜಶೇಖರ ಹಿರೇಮಠ, ಜಿ.ಇ.ಪ್ರಶಾಂತ, ಶಿಲ್ಪ ಗಣೇಶ ಕಬ್ಬಿಣ ಕಂತಿಮಠ, ಡಿ.ಆಂಜನೇಯ, ಅರುಣಕುಮಾರ ಹಿರೇಮಠ ಸೇರಿದಂತೆ ಹಲವಾರು ಗಣ್ಯರು ರಂಭಾಪುರಿ ಶ್ರೀಗಳಿಂದ ಗುರುರಕ್ಷೆ ಸ್ವೀಕರಿಸಿದರು.
ಬಾದಾಮಿ ಮಲ್ಲಿಕಾರ್ಜುನ, ಡಾ.ವೀರಣ್ಣ ಶೆಟ್ಟರ್ ಕಾರ್ಯಕ್ರಮ ನಡೆಸಿಕೊಟ್ಟರು. ಗುರು ರೇಣುಕಾ ಸಾಂಸ್ಕೃತಿಕ ಸಂಘದ ಕೊಟ್ರೇಶ ಜಗದ್ಗುರುಗಳಿಗೆ ಗೌರವ ಮಾಲೆ ಸಮರ್ಪಿಸಿದರು. ಬೆಳಿಗ್ಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳು ಇಷ್ಟಲಿಂಗ ಮಹಾಪೂಜಾ ನೆರವೇರಿಸಿ ಭಕ್ತರಿಗೆ ಶುಭ ಹಾರೈಸಿದರು. ದಾಸೋಹ ಜರುಗಿತು.- - -
ಬಾಕ್ಸ್ * "ಸತ್ಯಕ್ಕೆ ಇರುವುದೊಂದೇ ದಾರಿ " ಸಮಾಜ ಸೇವಾ ವಿಭೂಷಣ ಪ್ರಶಸ್ತಿಯನ್ನು ರಂಭಾಪುರಿ ಶ್ರೀಗಳಿಂದ ಸ್ವೀಕರಿಸಿದ ಬಿಜೆಪಿ ರಾಜ್ಯ ಎಸ್‌ಟಿ ಮೋರ್ಚಾ ಉಪಾಧ್ಯಕ್ಷ ಶ್ರೀನಿವಾಸ ಟಿ.ದಾಸಕರಿಯಪ್ಪ ಮಾತನಾಡಿ, ಸುಳ್ಳಿಗೆ ಹಲವಾರು ದಾರಿ, ಸತ್ಯಕ್ಕೆ ಇರುವುದೊಂದೇ ದಾರಿ. ಪೂರ್ವಜರ ಹಿತಚಿಂತನೆಗಳು ಬಾಳಿನ ಆಶಾಕಿರಣವಾಗಿವೆ. ಯುವಜನಾಂಗ ದೇಶದ ಅಮೂಲ್ಯ ಶಕ್ತಿ ಮತ್ತು ಆಸ್ತಿ. ಯುವ ಜನಾಂಗಕ್ಕೆ ಇತಿಹಾಸದ ಅರಿವು ಅಗತ್ಯವಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿ, ಯುವಜನರು ಆದರ್ಶ, ಸಂಸ್ಕಾರಗಳನ್ನು ಬೆಳೆಸಿಕೊಳ್ಳಬೇಕು ಎಂದರು.- - - -3ಕೆಡಿವಿಜಿ8:
ದಾವಣಗೆರೆಯಲ್ಲಿ ಶನಿವಾರ ಜನಜಾಗೃತಿ ಧರ್ಮ ಸಮಾವೇಶದಲ್ಲಿ ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ ಟಿ.ದಾಸಕರಿಯಪ್ಪ ಅವರಿಗೆ ರಂಭಾಪುರಿ ಶ್ರೀಗಳು ಸಮಾಜ ಸೇವಾ ವಿಭೂಷಣ ಪ್ರಶಸ್ತಿ ನೀಡಿ, ಆಶೀರ್ವದಿಸಿದರು.