22ರಂದು ರಾಮಜ್ಯೋತಿ ಬೆಳಗಿಸಿ ಶ್ರೀರಾಮನನ್ನು ಸ್ವಾಗತಿಸಿ: ಶಾಸಕ ರಮೇಶ ಜಾರಕಿಹೊಳಿ

KannadaprabhaNewsNetwork |  
Published : Jan 17, 2024, 01:49 AM IST
ಗೋಕಾಕ1 | Kannada Prabha

ಸಾರಾಂಶ

ದೇಗುಲಗಳ ಸ್ವಚ್ಛತೆಗೆ ಚಾಲನೆ ನೀಡಿ ಮಾತನಾಡಿದ ಶಾಸಕ ರಮೇಶ ಜಾರಕಿಹೊಳಿ ಅವರು, ಎಲ್ಲರೂ ಪ್ರಧಾನಿ ನರೇಂದ್ರ ಮೋದಿಯವರು ತಿಳಿಸಿದಂತೆ ತಮ್ಮ ತಮ್ಮ ಮನೆಗಳಲ್ಲಿ ದೀಪಾವಳಿಯಂತೆ ರಾಮಜ್ಯೋತಿ ಬೆ‍ಳಗಿಸಿ ಶ್ರೀರಾಮಚಂದ್ರನನ್ನು ಸ್ವಾಗತಿಸಬೇಕು ಎಂದಿದ್ದಾರೆ.

ಕನ್ನಡಪ್ರಭ ವಾರ್ತೆ ಗೋಕಾಕ

ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಐತಿಹಾಸಿಕ ಸಮಾರಂಭವಾಗಿದ್ದು ಅಂದು ಎಲ್ಲರೂ ಪ್ರಧಾನಿ ನರೇಂದ್ರ ಮೋದಿಯವರು ತಿಳಿಸಿದಂತೆ ತಮ್ಮ ತಮ್ಮ ಮನೆಗಳಲ್ಲಿ ದೀಪಾವಳಿಯಂತೆ ರಾಮಜ್ಯೋತಿ ಬೆ‍ಳಗಿಸಿ ಶ್ರೀರಾಮಚಂದ್ರನನ್ನು ಸ್ವಾಗತಿಸಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದರು.

ಮಂಗಳವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಸ್ವಚ್ಛತೀರ್ಥ ಅಭಿಯಾನ ಹಿನ್ನೆಲೆಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಳಗಳಿಂದ ಹಮ್ಮಿಕೊಂಡ ನಗರದ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದ ಆವರಣದಲ್ಲಿ ದೇಗುಲಗಳ ಸ್ವಚ್ಛತೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕಾರ್ಯಕರ್ತರು ಹಾಗೂ ತಾಲೂಕಿನ ಜನತೆ ನಮ್ಮ ಸುತ್ತಮುತ್ತಲಿನ ದೇವಸ್ಥಾನಗಳ ಸ್ವಚ್ಛತೆಯನ್ನು ಕೈಗೊಂಡು, ಜ.22ರಂದು ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ಬಾಲರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿದೆ. ಆ ವೇಳೆ ದೇವಸ್ಥಾನಗಳಲ್ಲಿ ಭಜನೆ, ಕೀರ್ತನೆಗಳನ್ನು ಆಯೋಜಿಸಿ ಶ್ರದ್ಧಾ ಭಕ್ತಿಯಿಂದ ನಾವೆಲ್ಲರೂ ಶ್ರೀರಾಮ ಸ್ವಾಗತಕ್ಕೆ ಸಾಕ್ಷಿಯಾಗೋಣ ಎಂದು ಕರೆ ನೀಡಿದರು.

ದೇಶಾದ್ಯಂತ ಎಲ್ಲರೂ ಭಕ್ತಿಯಿಂದ ಅದ್ಧೂರಿಯಾಗಿ ಆಚರಿಸುತ್ತಿರುವ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ನಾವೆಲ್ಲರೂ ಪಾಲ್ಗೊಂಡು ಶ್ರೀರಾಮನ ಅನುಗ್ರಹಕ್ಕೆ ಪಾತ್ರರಾಗೋಣ. ಜ.22ರಂದು ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ನಮ್ಮಲ್ಲಿಯೂ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಅದರಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ಕೋರಿದರು.

ದೇಗುಲ ಸ್ವಚ್ಛತಾ ಕಾರ್ಯದಲ್ಲಿ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ, ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಬಿಜೆಪಿ ನಗರ ಅಧ್ಯಕ್ಷ ಭೀಮಶಿ ಭರಮನ್ನವರ, ಪ್ರಧಾನ ಕಾರ್ಯದರ್ಶಿ ಬಾಳೇಶ ಗಿಡ್ಡನವರ, ಜಿಪಂ ಮಾಜಿ ಸದಸ್ಯರಾದ ಟಿ.ಆರ್‌.ಕಾಗಲ, ಎಂ.ಎಲ್‌.ತೋಳಿನವರ, ಶಾಸಕರ ಆಪ್ತ ಸಹಾಯಕ ಭೀಮಗೌಡ ಪೊಲೀಸಗೌಡರ, ಲಕ್ಷ್ಮೀಕಾಂತ ಎತ್ತಿನಮನಿ, ಬಿಜೆಪಿ ಪದಾಧಿಕಾರಿಗಳಾದ ಜ್ಯೋತಿ ಕೊಲ್ಹಾರ, ಬಸವರಾಜ ಹಿರೇಮಠ, ಸುರೇಶ ಪತ್ತಾರ, ರಾಜೇಶ್ವರಿ ಒಡೆಯರ, ಮಂಜುನಾಥ ಪ್ರಭುನಟ್ಟಿ, ವಿರೇಂದ್ರ ಎಕ್ಕೇರಿಮಠ, ಅನೀಲ ತುರಾಯಿದಾರ, ಲಕ್ಷ್ಮಣ ತಳ್ಳಿ, ಲಕ್ಕಪ್ಪ ತಹಶೀಲದಾರ, ರಂಗಪ್ಪ ನಾಯ್ಕ, ಮುಖಂಡರಾದ ಪ್ರಭಾಕರ ಚೌಹಾನ, ಅಶೋಕ ಹೆಗ್ಗನ್ನವರ, ವಿಕಾಸ ನಾಯಿಕ, ರಘು ಸುಭಂಜಿ, ನಗರಸಭೆ ಸದಸ್ಯರಾದ ಬಸವರಾಜ ಆರೇನ್ನವರ, ಅಬ್ಬಾಸ ದೇಸಾಯಿ, ದುರ್ಗಪ್ಪ ಶಾಸ್ತ್ರಿಗೊಲ್ಲರ, ಶ್ರೀಶೈಲ ಪೂಜೇರಿ, ವಿಜಯ ಜತ್ತಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?
ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌