ಉತ್ತರ ಕರ್ನಾಟಕದ ಲಿಂಗಾಯತ ಗಾಣಿಗರು ನಮ್ಮ ಮೀಸಲಾತಿಯನ್ನು ಕಸಿದುಕೊಳ್ಳುತ್ತಾರೆ

KannadaprabhaNewsNetwork |  
Published : Dec 25, 2024, 12:45 AM IST
ವಿಜೆಪಿ ೨೪ವಿಜಯಪುರ ಗಾಣಿಗ ಸೇವಾ ಕ್ಷೇಮಾಭಿವೃದ್ಧಿ ಸಂಘದಿಂದ ಪಟ್ಟಣದ ಸೌಮ್ಯ ಚನ್ನಕೇಶವಸ್ವಾಮಿ ದೇವಾಲಯ ಆವರಣದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಕ್ಯಾಲೆಂಡರ್ ಬಿಡುಗಡೆ ಮಾಡುತ್ತಿರುವುದು. | Kannada Prabha

ಸಾರಾಂಶ

ವಿಧಾನಸಭೆ, ವಿಧಾನಪರಿಷತ್ತು, ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಸಮುದಾಯವನ್ನು ಪ್ರತಿನಿಧಿಸಲು ಜನಪ್ರತಿನಿಧಿಗಳು ಇಲ್ಲ. ನಮ್ಮ ಪರ ಧ್ವನಿ ಎತ್ತುವವರಿಲ್ಲದೆ ನಾವು ಸೊರಗುತ್ತಿದ್ದೇವೆ. ಸೌಕರ್ಯಗಳಿಂದ ವಂಚಿತರಾಗಿದ್ದೇವೆ. ಹೀಗಾಗಿ ಎಲ್ಲರನ್ನು ಒಗ್ಗೂಡಲು ಜ.೧೧ ರಂದು ನೆಲಮಂಗಲದ ಮಠದಲ್ಲಿ ಗಾಣಿಗರ ಹಬ್ಬ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಬ್ಬವನ್ನು ಉದ್ಘಾಟಿಸಲಿದ್ದಾರೆ ಎಂದು ಪೂಣಾರ್ನಂದಪುರಿ ಸ್ವಾಮೀಜಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಉತ್ತರ ಕರ್ನಾಟಕದ ಲಿಂಗಾಯತ ಗಾಣಿಗರು ೨ಎ ಮೀಸಲಾತಿಗಾಗಿ ಒತ್ತಾಯಿಸುತ್ತಿದ್ದಾರೆ. ಅವರನ್ನು ಹಿಂದುಳಿದ ವರ್ಗಕ್ಕೆ ಸೇರಿಸಲು ಅವಕಾಶ ನೀಡಬಾರದು. ಇಲ್ಲದಿದ್ದರೆ ನಮ್ಮ ಮೀಸಲಾತಿಯನ್ನು ಅವರು ಕಸಿದುಕೊಳ್ಳುತ್ತಾರೆ ಎಂದು ನೆಲಮಂಗಲ ಕ್ಷೇತ್ರ ತೈಲೇಶ್ವರ ಗಾಣಿಗ ಮಹಾಸಂಸ್ಥಾನದ ಪೀಠಾಧಿಪತಿ ಪೂರ್ಣಾನಂದಪುರಿ ಸ್ವಾಮೀಜಿ ಹೇಳಿದರು.

ವಿಜಯಪುರ ಗಾಣಿಗ ಸೇವಾ ಕ್ಷೇಮಾಭಿವೃದ್ಧಿ ಸಂಘದಿಂದ ಪಟ್ಟಣದ ಸೌಮ್ಯ ಚನ್ನಕೇಶವಸ್ವಾಮಿ ದೇವಾಲಯದ ಆವರಣದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ಗಾಣಿಗ ಸಮುದಾಯವನ್ನು ಬಿಜೆಪಿ ಸರ್ಕಾರದಲ್ಲಿ ಅಭಿವೃದ್ಧಿ ಹೊಂದಿರುವ ಸಮುದಾಯಗಳ ಪಟ್ಟಿಗೆ ಸೇರ್ಪಡೆಗೊಳಿಸಲು ಪ್ರಯತ್ನಿಸುತ್ತಿದ್ದರು. ನಾವು ಬಹಳಷ್ಟು ಹೋರಾಟ ನಡೆಸಿ, ಹಿಂದುಳಿದ ಸಮುದಾಯದ ಸಾಲಿಗೆ ಸೇರ್ಪಡೆಗೊಳಿಸಿದೆವು. ಈಗ ಉತ್ತರ ಕರ್ನಾಟಕದ ಲಿಂಗಾಯಿತ ಗಾಣಿಗರು ೨ಎ ಮೀಸಲಾತಿ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅವರನ್ನು ಹಿಂದುಳಿದ ವರ್ಗಗಳ ಮೀಸಲಾತಿಯಡಿ ಸೇರಿಸಲು ಅವಕಾಶ ನೀಡಬಾರದು. ನಾವೆಲ್ಲರೂ ಹೋರಾಟ ಮಾಡಬೇಕು, ಗಾಣಿಗ ಸಮುದಾಯದವರು ರಾಜ್ಯದಲ್ಲಿ ೧೦ ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದರೂ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ರಾಜಕೀಯವಾಗಿ ಹಿಂದುಳಿದಿದ್ದೇವೆ. ಸಮಾಜ ಒಗ್ಗಟ್ಟಾಗಬೇಕು. ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಬೇಕು ಎಂದು ಹೇಳಿದರು.

ಜ.೧೧ಕ್ಕೆ ಗಾಣಿಗರ ಹಬ್ಬ:

ವಿಧಾನಸಭೆ, ವಿಧಾನಪರಿಷತ್ತು, ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಸಮುದಾಯವನ್ನು ಪ್ರತಿನಿಧಿಸಲು ಜನಪ್ರತಿನಿಧಿಗಳು ಇಲ್ಲ. ನಮ್ಮ ಪರ ಧ್ವನಿ ಎತ್ತುವವರಿಲ್ಲದೆ ನಾವು ಸೊರಗುತ್ತಿದ್ದೇವೆ. ಸೌಕರ್ಯಗಳಿಂದ ವಂಚಿತರಾಗಿದ್ದೇವೆ. ಹೀಗಾಗಿ ಎಲ್ಲರನ್ನು ಒಗ್ಗೂಡಲು ಜ.೧೧ ರಂದು ನೆಲಮಂಗಲದ ಮಠದಲ್ಲಿ ಗಾಣಿಗರ ಹಬ್ಬ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಬ್ಬವನ್ನು ಉದ್ಘಾಟಿಸಲಿದ್ದಾರೆ ಎಂದು ಪೂಣಾರ್ನಂದಪುರಿ ಸ್ವಾಮೀಜಿ ತಿಳಿಸಿದರು.

ಗಾಣಿಗ ಸಂಘದ ಸೇವಾ ಕ್ಷೇಮಾಭಿವೃದ್ಧಿ ಅಧ್ಯಕ್ಷ ಜಿ.ರಾಜಗೋಪಾಲ್ ಮಾತನಾಡಿ, ನಮ್ಮ ಜನಾಂಗದ ಏಳಿಗೆಗಾಗಿ ತೆರೆದಿರುವ ಮಠವನ್ನು ಅಭಿವೃದ್ಧಿಪಡಿಸುವ ಅಗತ್ಯವಿದೆ. ಸಮಾಜಕ್ಕೆ ಉತ್ತಮ ಮಾರ್ಗದರ್ಶನ ಮಾಡುವಲ್ಲಿ ಮಠಗಳ ಪಾತ್ರ ಮಹತ್ತರವಾಗಿದೆ ಎಂದರು.

ಕಾರ್ಯಾಧ್ಯಕ್ಷ ವಿ.ಅಂಜಿನಪ್ಪ,ಗೌರವಾಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷ ಆರ್.ವಸಂತ್ ಕುಮಾರ್, ಪ್ರಧಾನ ಕಾರ್ಯದರ್ಶಿ ಎನ್.ಲಕ್ಷ್ಮಣ್, ರಾಮು ಭಗವಾನ್, ಜಿ.ಮಂಜುನಾಥ್, ಆರ್.ಗಗನ್, ಆರ್. ವರುಣ್, ರಮೇಶ್ ಮತ್ತಿತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಂ ಜಿ ವಿರೋಧಕ್ಕೆ ರೈತರಿಗೆ ಸಿಎಂ ಕರೆ
ನೀವೂ ಸಿಎಂ ಆಗಬೇಕು : ಡಿಕೆಗೆ ಪೂಜಾರಿ ಹಾರೈಕೆ