ಲಯನ್ಸ್ ಕ್ಲಬ್ ಬಪ್ಪನಾಡು ಇನ್‌ಸ್ಪೈರ್‌ ಸಂಸ್ಥಾಪಕರ ದಿನಾಚರಣೆ, ಸಾಧಕರಿಗೆ ಸನ್ಮಾನ

KannadaprabhaNewsNetwork |  
Published : Nov 17, 2025, 02:00 AM IST
ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ಇದರ ಸಂಸ್ಥಾಪಕರ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ | Kannada Prabha

ಸಾರಾಂಶ

ಸುರತ್ಕಲ್ ಲಯನ್ಸ್ ಸೆಂಟರ್‌ನಲ್ಲಿ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್‌ಫೈರ್‌ ಸಂಸ್ಥಾಪಕರ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಮೂಲ್ಕಿ

ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್‌ಫಯರ್‌ ಕಳೆದ ಮೂರು ವರ್ಷದಲ್ಲಿ ಉತ್ತಮ ಸೇವಾ ಕಾರ್ಯಕ್ರಮದ ಮೂಲಕ ಜಿಲ್ಲೆಯಲ್ಲಿ ಸತತವಾಗಿ ಮೂರು ವರ್ಷವೂ ಪ್ರಥಮ ಸ್ಥಾನ ಗಳಿಸಿದ್ದು, ಈ ಬಾರಿಯೂ ಪ್ರಥಮ ಸ್ಥಾನದಲ್ಲಿ ರಾರಾಜಿಸುತ್ತಿದೆ ಎಂದು ಲಯನ್ಸ್‌ ಜಿಲ್ಲಾ ಮಾಜಿ ರಾಜ್ಯಪಾಲ ಡಾ.ಮೇಲ್ವಿನ್ ಡಿಸೋಜ ಹೇಳಿದರು.

ಸುರತ್ಕಲ್ ಲಯನ್ಸ್ ಸೆಂಟರ್‌ನಲ್ಲಿ ಆಯೋಜಿಸಲಾದ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್‌ಫೈರ್‌ ಸಂಸ್ಥಾಪಕರ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್‌ ಬಪ್ಪನಾಡು ಇನ್ಸ್‌ಫೈರ್‌ ಅಧ್ಯಕ್ಷ ಅನಿಲ್ ಕುಮಾರ್ ವಹಿಸಿದ್ದು, ಕಾರ್ಯಕ್ರಮದಲ್ಲಿ ಹೊಸ ಸದಸ್ಯರಿಗೆ ಪ್ರಮಾಣವಚನ ಬೋಧಿಸಲಾಯಿತು.

ಲಯನ್ಸ್‌ ಪ್ರಾಂತ್ಯ ಅಧ್ಯಕ್ಷ ಜಗದೀಶ್ ಚಂದ್ರ ಡಿ.ಕೆ., ಕ್ಲಬ್‌ನ ಎಕ್ಸ್ಟೆಂಶನ್ ಚೇರ್ಮನ್‌ ಓಸ್ವಾಲ್ಡ್ ಡಿಸೋಜಾ ಮತ್ತಿತರರಿದ್ದರು.

ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸುದರ್ಶನ್ ಪಡೆಯಾರ್, ಅನಿಲ್ ದಾಸ್, ಜಯಕೃಷ್ಣ, ರೆಮೋನಾ ಪಿರೇರ, ಸಚ್ಚಿದಾನಂದ ಶೆಟ್ಟಿ ಹಾಗೂ ಪೀಟರ್ ಜೇರ್ರಿ ರೋಡ್ರಿಗಾಸ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಸಿಂಧೂ ಗುಜರನ್ ಹಾಗೂ ಕೃಷಿ ಸಾಮಾಜಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಭಾನುಮತಿ ಶೆಟ್ಟಿ ಕಕ್ವಗುತ್ತು, ಶೈಲೇಶ ಹೆಗಡೆ, ಸಂಪಾ ಸಾಲಿಯನ್, ಕಾನೂನು ಪದವಿಯಲ್ಲಿ ಚಿನ್ನದ ಪದಕ ಪಡೆದ ಸಮೀಕ್ಷಾ ಹೆಗಡೆ, ಮಂಡಲ ಆರ್ಟ್‌ನಲ್ಲಿ ಗಿನ್ನಿಸ್ ದಾಖಲೆ ಬರೆದ ಅರ್ಪಿತಾ ಭಟ್ ಅವರನ್ನು ಗೌರವಿಸಲಾಯಿತು.

ಸ್ಥಾಪಕ ಅಧ್ಯಕ್ಷ ವೆಂಕಟೇಶ ಹೆಬ್ಬಾರ್‌ ಪ್ರಸ್ತಾವನೆಗೈದರು. ಅಧ್ಯಕ್ಷ ಅನಿಲ್‌ ಕುಮಾರ್‌ ಸ್ವಾಗತಿಸಿದರು. ಕಾರ್ಯದರ್ಶಿ ಅಶ್ವಿನಿ ಪ್ರಸಾದ್ ವಂದಿಸಿದರು. ಪ್ರಶಾಂತ್ ಶರ್ಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ