ನೆಲ್ಯಾಡಿಯಲ್ಲಿ ಸರಣಿ ಅಪಘಾತ: ಮದ್ಯದ ಲೋಡ್ ತುಂಬಿದ್ದ ಲಾರಿ ಪಲ್ಟಿ

KannadaprabhaNewsNetwork |  
Published : Sep 21, 2026, 02:45 AM IST
ನೆಲ್ಯಾಡಿಯಲ್ಲಿ ಸರಣಿ ಅಪಘಾತ: ಮದ್ಯದ ಲೋಡ್ ತುಂಬಿದ್ದ ಲಾರಿ ಪಲ್ಟಿ | Kannada Prabha

ಸಾರಾಂಶ

ಇಲ್ಲಿನ ಠಾಣಾ ವ್ಯಾಪ್ತಿಯ ನೆಲ್ಯಾಡಿ ಗ್ರಾಮದ ಬೆಥನಿ ಕಾಲೇಜು ಬಳಿ ರಾಷ್ಟ್ರೀಯ ಹೆದ್ದಾರಿ-೭೫ರಲ್ಲಿ ಲಾರಿಯೊಂದು ಮತ್ತೊಂದು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು, ಬಳಿಕ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್‌ಗೆ ತಾಗಿಕೊಂಡು ಹೋಗಿ ಪಲ್ಟಿಯಾದ ಘಟನೆ ೨೦ರ ಮುಂಜಾನೆ ನಡೆದಿದೆ.

ಉಪ್ಪಿನಂಗಡಿ: ಇಲ್ಲಿನ ಠಾಣಾ ವ್ಯಾಪ್ತಿಯ ನೆಲ್ಯಾಡಿ ಗ್ರಾಮದ ಬೆಥನಿ ಕಾಲೇಜು ಬಳಿ ರಾಷ್ಟ್ರೀಯ ಹೆದ್ದಾರಿ-೭೫ರಲ್ಲಿ ಲಾರಿಯೊಂದು ಮತ್ತೊಂದು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು, ಬಳಿಕ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್‌ಗೆ ತಾಗಿಕೊಂಡು ಹೋಗಿ ಪಲ್ಟಿಯಾದ ಘಟನೆ ೨೦ರ ಮುಂಜಾನೆ ನಡೆದಿದೆ.ಘಟನೆಯಲ್ಲಿ ಮದ್ಯದ ಲೋಡ್ ತುಂಬಿದ್ದ ಲಾರಿ ಸೇರಿದಂತೆ ಮೂರು ವಾಹನಗಳು ಜಖಂಗೊಂಡಿದ್ದು, ಲಾರಿ ಚಾಲಕ ಸಣ್ಣಪುಟ್ಟ ಗಾಯಗೊಂಡ ಘಟನೆ ನಡೆದಿದೆಸಕಲೇಶಪುರ ಕಡೆಯಿಂದ ಮಂಗಳೂರು ಕಡೆಗೆ ಲಾರಿಯನ್ನು ಅದರ ಚಾಲಕ ಶಮೀರ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದರೆನ್ನಲಾಗಿದೆ. ಈ ವೇಳೆ ಎದುರಿನಿಂದ ಸಕಲೇಶಪುರ ಕಡೆಯಿಂದ ಬರುತ್ತಿದ್ದ ಬೆಂಗಳೂರು ನೆಲಮಂಗಲ ನಿವಾಸಿ ರಾಜ ಎಂ.(೫೬) ಅವರಿಗೆ ಸೇರಿದ ಮದ್ಯದ ಲೋಡ್ ತುಂಬಿದ್ದ ಲಾರಿಗೆ ಹಿಂಬದಿಯಿಂದ ರಭಸವಾಗಿ ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ಲಾರಿ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಗ್ಯಾಸ್ ಟ್ಯಾಂಕರ್‌ಗೆ ತಾಗಿಕೊಂಡು ಹೋಗಿ ರಸ್ತೆಯ ಎಡಬದಿಗೆ ಮಗುಚಿ ಬಿದ್ದಿದೆ. ಘಟನೆಯಿಂದ ವಾಹನಗಳು ಜಖಂಗೊಂಡಿದ್ದು, ಮದ್ಯದ ಲೋಡ್‌ಗೂ ಹಾನಿಯಾಗಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ನೆಲ್ಯಾಡಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಲಾರಿ ಮಾಲೀಕರಾದ ರಾಜ ಎಂ. ಅವರು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೈಲಿಂದ ಪರಾರಿಯಾಗಿದ್ದ ಹಂತಕ 12 ವರ್ಷ ಬಳಿಕ ಅರೆಸ್ಟ್‌
ಕನಸು ಅರ್ಥೈಸಿಕೊಂಡು ಮುನ್ನಡೆದರೆ ಬದುಕು ಗೆದ್ದಂತೆ