ಕನ್ನಡಪ್ರಭ ವಾರ್ತೆ ಬಂಗಾರಪೇಟೆ
ತಾಲೂಕಿನ ಕಸಬಾ ಹೋಬಳಿ ಕಾರಹಳ್ಳಿ ಗ್ರಾಮದಲ್ಲಿ ಕೆಲವು ಪ್ರಭಾವಿ ರಾಜಕಾರಣಿಗಳ ಕುಮ್ಮಕ್ಕಿನಿಂದ ಜನರು ವಾಸಮಾಡುವ ಪ್ರದೇಶದಲ್ಲಿ ಮದ್ಯದ ಅಂಗಡಿ ತೆರೆಯಲು ಮುಂದಾಗಿದ್ದಾರೆ. ಇದರಿಂದ ಸಾರ್ವಜನಿಕ ಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಕಾರಣ ಪರವಾಗಿ ರದ್ದುಪಡಿಸಬೇಕು ಎಂದು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಪ್ರತಾಪ್ ನೇತೃತ್ವದಲ್ಲಿ ಗ್ರಾಮಸ್ಥರು ಆಗ್ರಹಿಸಿದರು.ತಾಲೂಕಿನ ಕಾರಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒಗೆ ಮನವಿ ಸಲ್ಲಿಸಿ ಮಾತನಾಡಿದ ಅವರು ಕಾರಹಳ್ಳಿ ಗ್ರಾಮದ ಮುಖ್ಯರಸ್ತೆಯಲ್ಲಿ ಪ್ರಭಾಕರ್ ಆಚಾರಿ ಎಂಬುವರ ಮಾಲಿಕತ್ವದ ಕಟ್ಟಡದಲ್ಲಿ ಕೆಲವರು ಪ್ರಭಾವಿ ರಾಜಕಾರಣಿಗಳ ಬೆಂಬಲದಿಂದಾಗಿ ಅಬಕಾರಿ ನಿಯಮಗಳನ್ನು ಗಾಳಿಗೆತೂರಿ ಮಧ್ಯದಂಗಡಿ ತೆರೆಯಲು ಹೋರಟಿರುವುದು ಆತಂಕವನ್ನು ಉಂಟುಮಾಡಿದೆ. ಈ ಕೂಡಲೆ ಸಂಸಂಧಪಟ್ಟ ಅಧಿಕಾರಿಗಳು ಪರವಾನಗಿ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.
ಅಬಕಾರಿ ನಿಯಮ ಉಲ್ಲಂಘನೆಅಬಕಾರಿ ನಿಯಮದಂತೆ ಜನವಸತಿ ಪ್ರದೇಶದಲ್ಲಿ ಯಾವುದೇ ಮದ್ಯದಂಗಡಿ ತೆರೆಯುವಂತಿಲ್ಲ ಎಂಬ ನಿಯಮವಿದೆ. ಆದರೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಬಡ ಸಮುದಾಯಗಳು ವಾಸಮಾಡುವ ಸ್ಥಳದಲ್ಲಿ ನಿಯಮಬಾಹಿರ ಮದ್ಯದಂಗಡಿ ಆರಂಭಿಸಲು ಸಿದ್ಧತೆ ನಡೆಸಿದ್ದಾರೆ. ಅಬಕಾರಿ ಇಲಾಖೆಯ ಅಧಿಕಾರಿಗಳು ಇದನ್ನು ಕಂಡರೂ ಕಾಣದವರಂತೆ ಮೌನಕ್ಕೆ ಶರಣಾಗಿದ್ದಾರೆ. ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನ ವಾಗಲಿಲ್ಲ. ಅಧಿಕಾರಿಗಳ ಮೌನದ ಹಿಂದೆ ರಾಜಕೀಯ ವ್ಯಕ್ತಿಗಳ ಒತ್ತಡ ಇರುವ ಅನುಮಾನ ಉಂಟಾಗಿದೆ ಎಂದರು.
ಪಿಡಿಒಗೆ ಮನವಿ ಸಲ್ಲಿಕೆಒಂದುವೇಳೆ ಸಂಭಂದಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಅಂಗಡಿ ಪರವಾಗಿ ರದ್ದು ಪಡಿಸದೆಹೋದಲ್ಲಿ ಗ್ರಾಮಸ್ಥರು ಭವಿಷ್ಯದ ಹಿತದೃಷ್ಟಿಯಿಂದ ಉಗ್ರಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಬಳಿಕ ಕಾರಹಳ್ಳಿ ಗ್ರಾಪಂ ಪಿಡಿಒ ವೇಣು ಅವರಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು.
ಈ ವೇಳೆ ರೈತ ಮುಖಂಡ ಮರಗಲ್ ಶ್ರೀನಿವಾಸ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾರಾಯಣಸ್ವಾಮಿ, ಮುಖಂಡರಾದ ಕೃಷ್ಣ, ಊರ ಯಜಮಾನರು ನಾರಾಯಣಸ್ವಾಮಿ, ಗೋವಿಂದರಾಜು ಇತರರು ಇದ್ದರು.