ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ₹1.02 ಕೋಟಿ ಮೌಲ್ಯದ ಮದ್ಯ ಜಪ್ತಿ

KannadaprabhaNewsNetwork |  
Published : Jun 24, 2026, 03:45 AM IST
ಮದ್ಯ | Kannada Prabha

ಸಾರಾಂಶ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಲಾರಿಯೊಂದನ್ನು ವಿಜಯಪುರದಲ್ಲಿ ಪೊಲೀಸರು ಪತ್ತೆ ಮಾಡಿದ್ದು, ಅದರಲ್ಲಿದ್ದ ಸುಮಾರು ₹1.02 ಕೋಟಿ ಮೌಲ್ಯದ ಅಕ್ರಮ ಮದ್ಯವನ್ನು ಮಂಗಳವಾರ ನಸುಕಿನಜಾವ ನಗರದ ಹೊರವಲಯದಲ್ಲಿ ಜಪ್ತಿ ಮಾಡಿದ್ದಾರೆ.

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಲಾರಿಯೊಂದನ್ನು ವಿಜಯಪುರದಲ್ಲಿ ಪೊಲೀಸರು ಪತ್ತೆ ಮಾಡಿದ್ದು, ಅದರಲ್ಲಿದ್ದ ಸುಮಾರು ₹1.02 ಕೋಟಿ ಮೌಲ್ಯದ ಅಕ್ರಮ ಮದ್ಯವನ್ನು ಮಂಗಳವಾರ ನಸುಕಿನಜಾವ ನಗರದ ಹೊರವಲಯದಲ್ಲಿ ಜಪ್ತಿ ಮಾಡಿದ್ದಾರೆ.

ಲಾರಿಯಲ್ಲಿದ್ದ ಎರೆಹುಳು ಗೊಬ್ಬರದ ಚೀಲಗಳಡಿಯಲ್ಲಿ ಮದ್ಯದ ಬಾಕ್ಸ್‌ಗಳನ್ನು ಅಕ್ರಮವಾಗಿ ಅಡಗಿಸಿಟ್ಟು ಸಾಗಿಸಲಾಗುತ್ತಿತ್ತು. 12,952 ಲೀಟರ್‌ಗೂ ಅಧಿಕ ಮದ್ಯದ ಬಾಟಲಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಇರದಲ್ಲಿ 290 ಬಾಕ್ಸ್ ಮ್ಯಾನ್ಷನ್ ಹೌಸ್ ಬ್ರಾಂಡಿ ಹಾಗೂ 397 ಬಾಕ್ಸ್ ರಾಯಲ್ ಬ್ಲೂ ಹಾಗೂ 800 ಬಾಕ್ಸ್ ರಾಯಲ್ ಸ್ಟಾಗ್ ಸೇರಿದಂತೆ ವಿವಿಧ ಬ್ರ್ಯಾಂಡ್‌ಗಳನ್ನು ಜಪ್ತಿ ಮಾಡಲಾಗಿದೆ. ಈ ಪ್ರಕರಣದಲ್ಲಿ ಲಾರಿ ಚಾಲಕ ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಜಲನಗರ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳಾದ ಶಿರಹಟ್ಟಿ ತಾಲೂಕಿನ ಶ್ರೀನಿವಾಸ ಮೀಸಿ, ವಿಜಯಪುರದ ಹುಸೇನಸಾಬ್ ಮುಲ್ಲಾ, ಮಹಾರಾಷ್ಟ್ರ ಮೂಲದಸಿದ್ದರಾಮ ಡಾಲೆ ಹಾಗೂ ತಾಳಿಕೋಟೆ ತಾಲೂಕಿನ ಬಸವರಾಜ ಭಜಂತ್ರಿ ಎಂಬುವವರನ್ನು ಬಂಧಿಸಲಾಗಿದೆ. ಜಪ್ತಿ ಮಾಡಲಾದ ಮದ್ಯ ಹಾಗೂ ಲಾರಿ ಸೇರಿದಂತೆ ಒಟ್ಟು ₹1.02 ಕೋಟಿ ಮೌಲ್ಯದ ವಸ್ತುಗಳ ಜಪ್ತಿ ಮಾಡಲಾಗಿದೆ.

ಹೆಚ್ಚುವರಿ ಎಸ್ಪಿ ರಾಮನಗೌಡ ಹಟ್ಟಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ನಾಗರಾಜ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾಗಿ ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಚಿತ್ರ ದೇಹ ರಚನೆಯ ಕರು ಜನನ
ನೀರಿನ ಅಭಾವದಿಂದ ಮಹಾರಾಷ್ಟ್ರದಿಂದ ನೀರು ಬಿಡುಗಡೆ ಆಗಿಲ್ಲ