ಲಿಟಲ್ ಸ್ಕಾಲರ್ಸ್ ಅಕಾಡೆಮಿ: ನೋಟ್ ಬುಕ್ ವಿತರಣೆ

KannadaprabhaNewsNetwork |  
Published : Jul 14, 2026, 02:30 AM IST
ಚಿತ್ರ : 13ಎಂಡಿಕೆ1 : ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣಾ ಕಾರ್ಯಕ್ರಮ. | Kannada Prabha

ಸಾರಾಂಶ

ಮಗ್ಗುಲ ಗ್ರಾಮದಲ್ಲಿರುವ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಲಿಟಲ್ ಸ್ಕಾಲರ್ಸ್ ಅಕಾಡೆಮಿ ವತಿಯಿಂದ ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಿಸಲಾಯಿತು.

ವಿರಾಜಪೇಟೆ: ಮಗ್ಗುಲ ಗ್ರಾಮದಲ್ಲಿರುವ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಲಿಟಲ್ ಸ್ಕಾಲರ್ಸ್ ಅಕಾಡೆಮಿ ವತಿಯಿಂದ ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಿಸಲಾಯಿತು. ಲಿಟಲ್ ಸ್ಕಾಲರ್ಸ್ ಅಕಾಡೆಮಿಯು ವಿದ್ಯಾಸಂಸ್ಥೆಯಲ್ಲಿ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶದಿಂದ ಎಲ್ ಎಸ್ ಎ ಕೇರ್ ಎಂಬ ಘಟಕವನ್ನು ಆರಂಭಿಸಲಾಗಿದೆ. ಈ ಘಟಕ ವತಿಯಿಂದ ಪ್ರಪ್ರಥಮವಾಗಿ ಪೀಪಲ್ ಹೌಸ್ ವಿದ್ಯಾರ್ಥಿ ತಂಡದ ಕಾರ್ಯಕ್ರಮದಡಿ ಹೆಗ್ಗಳದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ಲಿಟಲ್ ಸ್ಕಾಲರ್ಸ್ ಅಕಾಡೆಮಿ ಮುಖ್ಯಸ್ಥೆ ಹಾಗೂ ಸಮಾಜ ಸೇವಕರಾದ ಪೂಜಾ ಸಜೇಶ್ ವಿತರಿಸಿದರು. ಈ ಸಂದರ್ಭ ಮಾತನಾಡಿದ ಪೂಜಾ ಸಜೇಶ್, ಪ್ರತಿ ತಿಂಗಳು ಎಲ್ ಎಸ್ ಎ ಕೇರ್ ಮೂಲಕ ತಿಂಗಳಿಗೊಂದು ವೈವಿಧ್ಯಮಯ ಸಮಾಜಮುಖಿ ಕಾರ್ಯಕ್ರಮವನ್ನು ಆಯೋಜಿಸುವ ಉದ್ದೇಶವನ್ನು ಸಂಸ್ಥೆ ಹೊಂದಿದೆ. ಈ ಹಿಂದೆಯೂ ಹೆಗ್ಗಳ ಗ್ರಾಮದ ಸರ್ಕಾರಿ ಶಾಲೆ ಹಾಗೂ ಇತರೆಡೆಗಳಲ್ಲಿ ಸಂಸ್ಥೆಯಿಂದ ಸಾಮಾಜಿಕ ಕಾರ್ಯಕ್ರಮಗಳಾಗಿದ್ದು, ಇನ್ನು ಮುಂದೆಯೂ ಅದನ್ನು ಮುಂದುವರಿಸಿಕೊಂಡು ಹೋಗಲಾಗುವುದು ಎಂದು ಹೇಳಿದರು. ವಿರಾಜಪೇಟೆ ಹಾಗೂ ಕಲ್ತೋಡು ಸಿಆರ್ ಪಿ ಸೈಫುನ್ನಿಸ ಮುಖ್ಯ ಅತಿಥಿಗಳಾಗಿದ್ದರು. ಶಾಲೆ ಮುಖ್ಯ ಶಿಕ್ಷಕಿ ಕಮಲಮ್ಮ, ಸಹ ಶಿಕ್ಷಕಿ ಕಮರುನ್ನಿಸ, ಎಸ್ ಡಿಎಂಸಿ ಸದಸ್ಯರು, ಉಭಯ ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾರ್ವಜನಿಕರ ಸಹಭಾಗಿತ್ವ ಇಲ್ಲದಿದ್ದರೇ ನಿರೀಕ್ಷಿತ ಗುರಿ ತಲುಪಲು ಸಾಧ್ಯವಿಲ್ಲ
ಮಹಿಳಾ ಸಾಹಿತಿಗಳಿಗೆ ವಿಷಯದ ಮಿತಿ ಹೇರಿಕೆ ಸಲ್ಲ- ಮಮತಾ ಸಾಗರ