ಕುಷ್ಟಗಿ:
ತಾಲೂಕಿನ ಕೇಸೂರು ಗ್ರಾಮದಲ್ಲಿ ನಡೆದ ಜಗದ್ಗುರು ರೇಣುಕಾಚಾರ್ಯರ ಜಯಂತಿ ಹಾಗೂ ಲಿಂ. ಚಂದ್ರಶೇಖರ ಶಿವಾಚಾರ್ಯರ 30ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ನಡೆದ ಭಾವಚಿತ್ರಗಳ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಅವರು, ವಿಶ್ವ ಬಂಧುತ್ವದ ಆದರ್ಶ ಮಾನವೀಯ ಮೌಲ್ಯ ತೋರಿಸಿದ ಜಗದ್ಗುರು ರೇಣುಕಾಚಾರ್ಯರ ವಿಚಾರಧಾರೆಗಳು ಸರ್ವಕಾಲಕ್ಕೂ ಸರ್ವರಿಗೂ ಅನ್ವಯಿಸುತ್ತವೆ ಎಂದರು.
ಅಂತರಂಗ, ಬಹಿರಂಗ ಶುದ್ಧಿಗೆ ಪ್ರಾಧಾನ್ಯತೆ ಕೊಟ್ಟ ರೇಣುಕಾಚಾರ್ಯರು ಧರ್ಮದ ದಶ ಗಾತ್ರಗಳನ್ನು ಶೋಧಿಸಿ ಭಕ್ತರನ್ನು ಉದ್ಧರಿಸಿದರು. ಮಹಾಜ್ಞಾನಿ ಅಗಸ್ತ್ಯ ಮಹರ್ಷಿಗಳಿಗೆ ಶಿವಾದ್ವೈತ ತತ್ವ ಸಿದ್ಧಾಂತ ಬೋಧಿಸಿ ಹರಸಿದವರು. ಧಾರ್ಮಿಕ ಕ್ರಾಂತಿಯ ಜತೆಗೆ ಸಾಮಾಜಿಕ, ಸಾಂಸ್ಕೃತಿಕ, ಅಸ್ಪೃಶ್ಯರ ಉದ್ಧಾರ ಮತ್ತು ಮಹಿಳೆಯರಿಗೆ ಧಾರ್ಮಿಕ ಆಚರಣೆ ಕೊಟ್ಟು ಹರಸಿದ ಕೀರ್ತಿ ರೇಣುಕಾಚಾರ್ಯರಿಗೆ ಸಲ್ಲುತ್ತದೆ ಎಂದರು.ಅದ್ಧೂರಿ ಮೆರವಣಿಗೆ:
ಈ ವೇಳೆ ವೀರಬಸವ ದೇವರು, ಶಿವಪ್ರಸಾದ ದೇವರು, ಪ್ರವಚನಕಾರ ಕಮತಗಿ ಗಣೇಶ ಶಾಸ್ತ್ರೀ, ಕಡಕಲಾಟ ಘನಲಿಂಗ ದೇವರು, ಗುರುದೇವ ದೇವರು, ಚಿದಾನಂದಯ್ಯ ಹಿರೇಮಠ, ಬಸವರಾಜ ಹೊನ್ನಿಗನೂರು ಸೇರಿದಂತೆ ವಿವಿಧ ಮಠದ ಸ್ವಾಮೀಜಿ, ಗ್ರಾಮಸ್ಥರು, ಮಹಿಳೆಯರು ಇದ್ದರು.