ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತರಲಿರುವ ಮಹತ್ವಪೂರ್ಣ ನಾರಿ ಶಕ್ತಿ ವಂದನ ಅಧಿನಿಯಮದ ಪೂರ್ವಭಾವಿಯಾಗಿ ಏ.13ರಂದು ಪ್ರಧಾನಿ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ನಾರಿ ಶಕ್ತಿ ವಂದನ ಸಮ್ಮೇಳನದ ನೇರ ಪ್ರಸಾರವನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ನೇತೃತ್ವದಲ್ಲಿ ಜಿಲ್ಲಾ ಕಚೇರಿಯಲ್ಲಿ ವೀಕ್ಷಿಸಲಾಯಿತು.
ಉಡುಪಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತರಲಿರುವ ಮಹತ್ವಪೂರ್ಣ ನಾರಿ ಶಕ್ತಿ ವಂದನ ಅಧಿನಿಯಮದ ಪೂರ್ವಭಾವಿಯಾಗಿ ಏ.13ರಂದು ಪ್ರಧಾನಿ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ನಾರಿ ಶಕ್ತಿ ವಂದನ ಸಮ್ಮೇಳನದ ನೇರ ಪ್ರಸಾರವನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ನೇತೃತ್ವದಲ್ಲಿ ಜಿಲ್ಲಾ ಕಚೇರಿಯಲ್ಲಿ ವೀಕ್ಷಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಕಿರಣ್ ಕುಮಾರ್ ಬೈಲೂರು, ಜ್ಯೋತಿ ಉದಯ ಕುಮಾರ್, ನಳಿನಿ ಪ್ರದೀಪ್ ರಾವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀನಿಧಿ ಹೆಗ್ಡೆ, ಗಿರೀಶ್ ಎಮ್. ಅಂಚನ್, ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಎಸ್. ಕುಂದರ್, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿ. ಸೋಜಾ, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ನಗರ ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು, ನಗರ ಯುವ ಮೋರ್ಚಾ ಅಧ್ಯಕ್ಷ ಶ್ರೀವತ್ಸ, ಮಹಿಳಾ ಮೋರ್ಚಾ ಸದಸ್ಯರ ಸಹಿತ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.