ದೇಶಕ್ಕಾಗಿ ಬದುಕಿ, ದೇಶವನ್ನು ಕಟ್ಟುವ ಕೆಲಸ ಮಾಡಿ-ಬೊಮ್ಮಾಯಿ

KannadaprabhaNewsNetwork |  
Published : Aug 15, 2026, 03:15 AM IST
14ಎಚ್‌ವಿಆರ್‌2, 2ಎ | Kannada Prabha

ಸಾರಾಂಶ

ಸ್ವಾತಂತ್ರ್ಯ ಬಂದ ನಂತರ ಜನಿಸಿದ ನಮಗೆಲ್ಲರಿಗೂ ದೇಶವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಬೃಹತ್ ಜವಾಬ್ದಾರಿಯಿದೆ. ಈಗ ದೇಶಕ್ಕಾಗಿ ಪ್ರಾಣ ಕೊಡುವ ಕಾಲವಲ್ಲ, ದೇಶಕ್ಕಾಗಿ ಬದುಕಿ, ದೇಶವನ್ನು ಕಟ್ಟುವ ಕೆಲಸ ಮಾಡಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದ್ದಾರೆ.

​ಹಾವೇರಿ: ಸ್ವಾತಂತ್ರ್ಯ ಬಂದ ನಂತರ ಜನಿಸಿದ ನಮಗೆಲ್ಲರಿಗೂ ದೇಶವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಬೃಹತ್ ಜವಾಬ್ದಾರಿಯಿದೆ. ಈಗ ದೇಶಕ್ಕಾಗಿ ಪ್ರಾಣ ಕೊಡುವ ಕಾಲವಲ್ಲ, ದೇಶಕ್ಕಾಗಿ ಬದುಕಿ, ದೇಶವನ್ನು ಕಟ್ಟುವ ಕೆಲಸ ಮಾಡಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದ್ದಾರೆ.

ಯೂತ್ ಫಾರ್ ನೇಷನ್ ವತಿಯಿಂದ ಏರ್ಪಡಿಸಿದ್ದ ರಾಷ್ಟ್ರ ಪ್ರೇಮದ ಶ್ರಾವಣ ಸಂಭ್ರಮೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಯಾತ್ರೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ​

​ಇಂದು ದೇಶಕ್ಕೆ ಬಲವಾದ ನಾಯಕತ್ವ ದೊರೆತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತವು ಸದೃಢವಾಗಿ ಬೆಳೆಯುತ್ತಿದೆ. ಇಂದಿನ 21ನೇ ಶತಮಾನವು ಜ್ಞಾನ ಮತ್ತು ತಂತ್ರಜ್ಞಾನದ ಶತಮಾನವಾಗಿದೆ. ಕೃತಕ ಬುದ್ಧಿಮತ್ತೆ ಮತ್ತು ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದ್ದು, ಅವು ನಮ್ಮನ್ನು ನಿಯಂತ್ರಿಸುವ ಮೊದಲು ನಾವೇ ತಂತ್ರಜ್ಞಾನವನ್ನು ನಮ್ಮ ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವದಲ್ಲಿ ಭಾರತವು ಸವಾಲುಗಳನ್ನು ಜಾಣತನದಿಂದ ಎದುರಿಸುತ್ತಿದೆ ಎಂದರು.

​ಜೆನ್ ಝೀ ತಲೆಮಾರಿನ ಜವಾಬ್ದಾರಿ: ಇಂದಿನ ಜೆನ್ ಝಿ ತಲೆಮಾರಿನ ಯುವಕರು ಜಾಗತಿಕ ಬದಲಾವಣೆಗಳ ಮುಂಚೂಣಿಯಲ್ಲಿದ್ದಾರೆ. ಬರುವ ಹೊಸ ಹೊಸ ಸವಾಲುಗಳನ್ನು ಎದುರಿಸುವ ಶಕ್ತಿ ಯುವಜನತೆಯಲ್ಲಿದೆ. ಪ್ರಸ್ತುತ ಭಾರತವು ವಿಶ್ವದ 4ನೇ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಆದರೆ 2047ರ ವೇಳೆಗೆ ಭಾರತವು ವಿಶ್ವದಲ್ಲೇ ಪ್ರಥಮ ಸ್ಥಾನಕ್ಕೆ ತಲುಪಬೇಕಿದೆ. ಈ ಕನಸು ನನಸಾಗಲು ಬರಿ ರಾಜಕಾರಣಿಗಳು ವೇದಿಕೆ ಮೇಲೆ ಕುಳಿತರೆ ಸಾಲದು; ಯುವಜನತೆ ಮತ್ತು ವಿದ್ಯಾರ್ಥಿಗಳು ಕಠಿಣ ಶ್ರಮ ವಹಿಸಬೇಕು ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಮಾಜಿ ಸಚಿವ ಬಿ.ಸಿ. ಪಾಟೀಲ್, ಮಾಜಿ ಶಾಸಕ ಶಿವರಾಜ ಸಜ್ಜನ, ಅರುಣಕುಮಾರ ಪೂಜಾರ, ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣವರ, ಭೋಜರಾಜ ಕರೂದಿ, ಶೋಭಾ ನಿಸ್ಸೀಮಗೌಡ್ರ, ಸಿದ್ದರಾಜ ಕಲಕೋಟಿ, ಪರಮೇಶ್ವರಪ್ಪ ಮೇಗಳಮನಿ, ನಂಜುಂಡೇಶ ಕಳ್ಳೇರ, ವಿಜಯಕುಮಾರ ಚಿನ್ನಿಕಟ್ಟಿ, ಶಿವಾನಂದ ಮ್ಯಾಗೇರಿ, ಸಂತೋಷ ಆಲದಕಟ್ಟಿ, ನರಹರಿ ಕಟ್ಟಿ, ವೆಂಕಟೇಶ ನಾರಾಯಣಿ, ಸುರೇಶ ಹೊಸಮನಿ ಸೇರಿದಂತೆ ಮಾಜಿ ಸೈನಿಕರು, ವಿದ್ಯಾರ್ಥಿಗಳು, ಮಹಿಳೆಯರು ತಿರಂಗಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಭಾರತ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಸಾಕಷ್ಟು ಅಭಿವೃದ್ಧಿ ಹೊಂದಿದೆ. 2047ರ ವೇಳೆಗೆ ಭಾರತವನ್ನು ವಿಶ್ವಗುರುವಾಗಿಸುವ ಸಂಕಲ್ಪದೊಂದಿಗೆ ದೇಶ ಮುನ್ನಡೆಯುತ್ತಿದೆ. ಪ್ರತಿಯೊಬ್ಬರೂ ರಾಷ್ಟ್ರಭಕ್ತಿಯನ್ನು ಜೀವನದಲ್ಲಿ ಅಳವಡಿಸಿಕೊಂಡು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ನಿವೃತ್ತ ಅಧಿಕಾರಿ ಗೋವಿಂದಪ್ಪ ಗೌಡಪ್ಪಗೋಳ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಷ್ಟ್ರಧ್ವಜ ಕೇವಲ ಮೂರು ಬಣ್ಣಗಳ ಸಂಕೇತವಲ್ಲ. ಏಕತೆಯ ಪ್ರತೀಕ-ಸೌಮ್ಯ
ಸಂಭ್ರಮದ ಭಾರತ ಮಾತಾ ಮೆರವಣಿಗೆ