ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜು.8 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿರಾಜಪೇಟೆ ಕಲ್ಯಾಣಿ ಮೋಟಾರ್ಸ್ ನಲ್ಲಿ ವಿವಿಧ ಹುದ್ದೆ ಭರ್ತಿಗೊಳಿಸಲು ನೇರ ಸಂದರ್ಶನ ನಡೆಯಲಿದೆ.
ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜು.8 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿರಾಜಪೇಟೆ ಕಲ್ಯಾಣಿ ಮೋಟಾರ್ಸ್ ನಲ್ಲಿ ವಿವಿಧ ಹುದ್ದೆ ಭರ್ತಿಗೊಳಿಸಲು ನೇರ ಸಂದರ್ಶನ ನಡೆಯಲಿದೆ.
ಈ ನೇರ ಸಂದರ್ಶನದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್ 8296020826 ಅವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
-----------------------------------------------
ಆಧುನಿಕ ಪಾಕಶಾಲಾ ಕೊಠಡಿ ಉದ್ಘಾಟನೆ
ಮಡಿಕೇರಿ: ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಹಿಳಾ ಮತ್ತು ಮಕ್ಕಳ ವಿಭಾಗದ ಬಳಿ ನೂತನವಾಗಿ ಆರಂಭಿಸಲಾಗಿರುವ ಆಧುನಿಕ ಪಾಕಶಾಲಾ ಕೊಠಡಿಯನ್ನು ಶಾಸಕ ಎ.ಎಸ್.ಪೊನ್ನಣ್ಣ ಮತ್ತು ಡಾ.ಮಂತರ್ ಗೌಡ ಶನಿವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಪ್ರಮುಖರಾದ ತೆನ್ನಿರಾ ಮೈನಾ, ಪ್ರಕಾಶ್ ಆಚಾರ್ಯ, ಜಗದೀಶ್, ಹೊಸೂರು ಸೂರಜ್, ಮೋಹನ್, ಇತರರು ಇದ್ದರು.
ಈ ಸಂದರ್ಭದಲ್ಲಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಮತ್ತು ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಚರ್ಚಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.