ಹರಪನಹಳ್ಳಿ: ಸಂವಿಧಾನದ ಚೌಕಟ್ಟಿನಲ್ಲಿ ನಾವೆಲ್ಲರೂ ಬದುಕು ಸಾಗಿಸಿ ಅಭಿವೃದ್ಧಿ ಹೊಂದಬೇಕು ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು.
ಡಾ.ಬಿ.ಆರ್. ಅಂಬೇಡ್ಕರ್ ಬೇರೆ ಬೇರೆ ದೇಶಗಳನ್ನು ಸುತ್ತಿ ಅಧ್ಯಯನ ಮಾಡಿ ನಮ್ಮ ದೇಶಕ್ಕೆ ಅನುಗುಣವಾದ ಸಂವಿಧಾನವನ್ನು ರೂಪಿಸಿದ್ದಾರೆ. ಆ ಸಂವಿಧಾನದ ಮೂಲಕ ನಮ್ಮ ದೇಶ ಸದೃಡವಾಗಿ ಮುನ್ನಡೆಯುತ್ತಲಿದೆ ಎಂದು ತಿಳಿಸಿದರು.
ವಿವಿಧತೆಯಲ್ಲಿ ಏಕತೆ ಹೊಂದಿರುವ ಭಾರತ ಎಂತಹ ಸವಾಲನ್ನು ಸಹ ಎದುರಿಸಿ ಅಭಿವೃದ್ದಿಯತ್ತ ಸಾಗಿದೆ ಎಂದು ನುಡಿದರು.ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕಂದಾಯ ಉಪವಿಭಾಗಾಧಿಕಾರಿ ಚಿದಾನಂದಗುರುಸ್ವಾಮಿ, ಸಂವಿಧಾನ ಜಾರಿಗೆ ಬಂದ ದಿನವನ್ನು ನಾವು ಗಣರಾಜ್ಯೋತ್ಸವ ಎಂದು ರಾಷ್ಟ್ರೀಯ ಹಬ್ಬವಾಗಿ ಆಚರಣೆ ಮಾಡುತ್ತೇವೆ ಎಂದು ತಿಳಿಸಿದರು.
ಪುರಸಭಾ ಮುಖ್ಯಾಧಿಕಾರಿ ಎರಗುಡಿ ಶಿವಕುಮಾರ ಮಾತನಾಡಿ, ಇಡೀ ದೇಶಕ್ಕೆ ಅನುಗುಣವಾದಂತಹ ಸಂವಿಧಾನವನ್ನು ರಚಿಸಿ ಕಾನೂನನ್ನು ಅಂಬೇಡ್ಕರ್ ನೀಡಿದ್ದಾರೆ ನಮ್ಮ ನಮ್ಮ ಕ್ಷೇತ್ರಗಳಲ್ಲಿ ಉತ್ತಮವಾಗಿ ಕೆಲಸ ಮಾಡೋಣ ಎಂದು ಅವರು ತಿಳಿಸಿದರು.
ಪುರಸಭಾ ಅಧ್ಯಕ್ಷ ಎಂ.ಫಾತಿಮಾಬಿ, ಉಪಾದ್ಯಕ್ಷ ಎಚ್.ಕೊಟ್ರೇಶ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ, ಪುರಸಭಾ ಸದಸ್ಯರಾದ ಅಬ್ದುಲ್ ರಹಿಮಾನ್, ಉದ್ದಾರ ಗಣೇಶ, ಲಾಟಿ ದಾದಾಪೀರ, ಮಂಜುನಾಥ ಇಜಂತಕರ್, ಜಾಕೀರ ಹುಸೇನ್, ಡಿವೈಎಸ್ಪಿ ವೆಂಕಟಪ್ಪ ನಾಯಕ, ಸಿಪಿಐ ನಾಗರಾಜ ಎಂ.ಕಮ್ಮಾರ, ಸುವರ್ಣ ಮಹೋತ್ಸವ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ.ಟಿ.ಎಂ. ಚಂದ್ರಶೇಖರಯ್ಯ, ಸುಮಾ ಜಗದೀಶ, ಕವಿತಾ ಸುರೇಶ, ತಹಶೀಲ್ದಾರ ಬಿ.ವಿ. ಗಿರೀಶಬಾಬು, ಬಿಇಒ ಲೇಪಾಕ್ಷಪ್ಪ, ತಾಪಂ ಇಒ ಚಂದ್ರಶೇಖರ, ಪುರಸಭಾ ಮುಖ್ಯಾಧಿಕಾರಿ ಎರಗುಡಿ ಶಿವಕುಮಾರ, ಬಿಸಿಎಂ ಅಧಿಕಾರಿ ಭೀಮಪ್ಪ, ಪಿಎಸ್‌ಐ ಎಸ್.ಸಿ. ಹಿರೇಮಠ ಇದ್ದರು.