ಸಂವಿಧಾನದ ಆಶಯಗಳಿಗೆ ಬದ್ಧರಾಗಿ ಬದುಕು ನಡೆಸಿ: ನೀಲಗಂಗಾ

KannadaprabhaNewsNetwork |  
Published : Nov 27, 2026, 02:00 AM IST
ಯಲಬುರ್ಗಾದಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. | Kannada Prabha

ಸಾರಾಂಶ

ಪ್ರತಿಯೊಬ್ಬರೂ ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಭಾರತ ಸಂವಿಧಾನದ ಆಶಯಗಳಿಗೆ ಬದ್ಧರಾಗಿ ಬದುಕು ನಡೆಸಬೇಕು.

ನೀಲಗಂಗಾ ಬಬಲಾದ ಕರೆ, ಯಲಬುರ್ಗಾದಲ್ಲಿ ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ

ಕನ್ನಡಪ್ರಭ ವಾರ್ತೆ ಯಲಬುರ್ಗಾ

ಪ್ರತಿಯೊಬ್ಬರೂ ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಭಾರತ ಸಂವಿಧಾನದ ಆಶಯಗಳಿಗೆ ಬದ್ಧರಾಗಿ ಬದುಕು ನಡೆಸಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ನೀಲಗಂಗಾ ಬಬಲಾದ ಹೇಳಿದರು.

ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಗುರುವಾರ ತಾಲೂಕಾಡಳಿತ ಹಾಗೂ ಛಲವಾದಿ ಮಹಾಸಭಾ ತಾಲೂಕಾ ಘಟಕದಿಂದ ಹಮ್ಮಿಕೊಂಡ ಸಂವಿಧಾನ ದಿನಾಚರಣೆ ಅಂಗವಾಗಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ವಿಶ್ವಕ್ಕೆ ಮಾದರಿಯಾಗಿರುವ ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ದೇಶದ ಎಲ್ಲ ನಾಗರಿಕರಿಗೂ ಸಮಾನತೆ ಹಾಗೂ ಹಕ್ಕು ಕಲ್ಪಿಸಿದ್ದಾರೆ. ಸಂವಿಧಾನದ ಆಶಯಗಳಂತೆ ನಡೆದು, ಅದರ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶಿಕ್ಷಣ, ಸಮಾನತೆ, ಹೋರಾಟ ಸೇರಿದಂತೆ ಮೂಲಭೂತ ಹಕ್ಕು ಕಲ್ಪಿಸಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಾರತದ ಸಂವಿಧಾನ ವಿಶ್ವದ ಅನೇಕ ರಾಷ್ಟ್ರಗಳಿಗೆ ಮಾದರಿಯಾಗಿದೆ ಎಂದರು.

ಪ್ರಮುಖರಾದ ಕೆರಿಬಸಪ್ಪ ನಿಡಗುಂದಿ, ಡಿ.ಕೆ. ಪರಶುರಾಮ, ಉಪ ತಹಸೀಲ್ದಾರ್ ವಿಜಯಕುಮಾರ ಗುಂಡೂರ, ಪಪಂ ಮುಖ್ಯಾಧಿಕಾರಿ ನಾಗೇಶ, ಬಿಸಿಎಂ ಅಧಿಕಾರಿ ಶಿವಶಂಕರ ಕರಡಕಲ್ಲ, ಮುಖಂಡರಾದ ರೇವಣಪ್ಪ ಹಿರೇಕುರುಬರ, ರಸೂಲಸಾಬ ದಮ್ಮೂರು ಮಾತನಾಡಿದರು.

ಈ ವೇಳೆ ಅಂಬೇಡ್ಕರ್ ಕುರಿತು ಕ್ರಾಂತಿಗೀತೆ ಹಾಡಲಾಯಿತು. ಸಂವಿಧಾನದ ಪೀಠಿಕೆ ಬೋಧಿಸಲಾಯಿತು.

ಗ್ರೇಡ್-2 ತಹಸೀಲ್ದಾರ್ ಮಹಾಂತಗೌಡ, ಮುಖಂಡರಾದ ಸಿದ್ದಪ್ಪ ಕಟ್ಟಿಮನಿ, ಶಂಕರ ಜಕ್ಕಲಿ, ಅಮರೇಶ ಹುಬ್ಬಳ್ಳಿ, ಸಂಗಣ್ಣ ತೆಂಗಿನಕಾಯಿ, ಛತ್ರಪ್ಪ ಛಲವಾದಿ, ಕನಕೇಶ ಪೇಟರ್, ವಿಜಯ ಜಕ್ಕಲಿ, ಭೀಮಣ್ಣ ಹವಳಿ, ಶರಣಪ್ಪ ಛಲವಾದಿ, ಡಿ.ಕೆ. ರವಿ, ಶಶಿಧರ ಹೊಸಮನಿ, ಶಿವಾನಂದ ಅರಬರ, ಅಧಿಕಾರಿಗಳಾದ ಟಿ.ಜೆ. ದಾನಿ, ಮಹಾಂತೇಶ ಹಿರೇಮಠ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಂವಿಧಾನ ಆಶಯಗಳ ಅರಿತು ಪಾಲಿಸುವುದು ಪ್ರತಿ ಪ್ರಜೆಯ ಕರ್ತವ್ಯ-ನಾಗರಾಜ
ಸಭೆ ಅರ್ಧಕ್ಕೆ ಎದ್ದು ಹೋದ ಟಿ.ಎಂ. ಶಾಹಿದ್ ತೆಕ್ಕಿಲ್