ಮಾನವ ಧರ್ಮದ ನೆಲೆಗಟ್ಟಿನ ಮೇಲೆ ಬದುಕು ಸಾಗಿಸಿ: ಶಿವಸಿದ್ದೇಶ್ವರ ಶ್ರೀ

KannadaprabhaNewsNetwork |  
Published : May 04, 2026, 01:15 AM IST
ಪೋಟೋ 1 : ತೊರೆಕೆಂಪೋಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಸ್ವಾಮಿ ಹಾಗೂ ಶ್ರೀ ಈಶ್ವರ ದೇವಾಲಯ ಉದ್ಘಾಟನೆ, ವಿಮಾನ ಗೋಪುರ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ ಕಿರಿಯ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ದಿವ್ಯ ಮಾತನಾಡಿದರು. | Kannada Prabha

ಸಾರಾಂಶ

ದಾಬಸ್‍ಪೇಟೆ: ಆಧುನಿಕತೆಯ ಅಬ್ಬರದ ಮಧ್ಯೆಯೂ ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಜಾತ್ರೆ, ಗುಡಿ ಗೋಪುರಗಳ ನಿರ್ಮಾಣ, ಧಾರ್ಮಿಕ ಕಾರ್ಯಕ್ರಮಗಳು ಸಂತಸ ವೃದ್ಧಿಸಿ, ಸಂಸ್ಕೃತಿ ಉಳಿಸುವಲ್ಲಿ ಸಹಕಾರಿ ಎಂದು ಸಿದ್ದಗಂಗಾ ಮಠದ ಕಿರಿಯ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು.

ದಾಬಸ್‍ಪೇಟೆ: ಆಧುನಿಕತೆಯ ಅಬ್ಬರದ ಮಧ್ಯೆಯೂ ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಜಾತ್ರೆ, ಗುಡಿ ಗೋಪುರಗಳ ನಿರ್ಮಾಣ, ಧಾರ್ಮಿಕ ಕಾರ್ಯಕ್ರಮಗಳು ಸಂತಸ ವೃದ್ಧಿಸಿ, ಸಂಸ್ಕೃತಿ ಉಳಿಸುವಲ್ಲಿ ಸಹಕಾರಿ ಎಂದು ಸಿದ್ದಗಂಗಾ ಮಠದ ಕಿರಿಯ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು.

ತೊರೆಕೆಂಪೋಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಸ್ವಾಮಿ ಹಾಗೂ ಶ್ರೀ ಈಶ್ವರ ದೇವಾಲಯ ಉದ್ಘಾಟನೆ, ವಿಮಾನ ಗೋಪುರ ಲೋಕಾರ್ಪಣೆ, ಬಸವೇಶ್ವರ, ಈಶ್ವರ, ಗಣಪತಿ, ಸುಬ್ರಹ್ಮಣ್ಯ ದೇವರ ಪ್ರತಿಷ್ಠಾಪನೆ ಹಾಗೂ ಶ್ರೀ ಜಗಜ್ಯೋತಿ ಬಸವೇಶ್ವರರು ಹಾಗೂ ಶ್ರೀ ಶಿವಕುಮಾರ ಸ್ವಾಮೀಜಿಯವರ ಶಿಲಾವಿಗ್ರಹ ಅನಾವರಣದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ವಿವಿಧ ಧರ್ಮಗಳು ನಾಡಿನಲ್ಲಿದ್ದರೂ ಕೊನೆಗೆ ಐಕ್ಯ ಸ್ಥಾನ ಮಾತ್ರ ಒಂದೇ ಆಗಿದೆ. ನೊಂದ ಜೀವಗಳನ್ನು ಹಸನು ಮಾಡುವ ಶಕ್ತಿಯುಳ್ಳ ನಮ್ಮ ಸಂಸ್ಕೃತಿ ಅರ್ಥೈಸಿಕೊಳ್ಳಲು ವಿದೇಶಿಗರು ಒಲವು ತೋರುತ್ತಿರುವುದು ಹೆಮ್ಮೆಯ ಸಂಗತಿ. ಧರ್ಮದ ಜಾಗೃತಿ, ಮೌಲ್ಯ ಉಳಿಸಿಕೊಂಡು, ಬದುಕಿಗೆ ಅರ್ಥ ತಂದುಕೊಡುವಲ್ಲಿ ಪ್ರತಿಯೊಬ್ಬರೂ ಗಮನಹರಿಸಬೇಕಿದೆ ಎಂದು ಸಲಹೆ ನೀಡಿದರು.

ಸಮಾರಂಭದಲ್ಲಿ ಗದ್ದುಗೆ ಮಠದ ಶ್ರೀ ಮಹಂತ ಸ್ವಾಮೀಜಿ, ಬಸವಣ್ಣ ದೇವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಹೊನ್ನಮ್ಮಗವಿ ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಹೊನ್ನಮ್ಮಗವಿ ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಜಗ್ಗಯ್ಯನಮಠದ ಶ್ರೀ ಚನ್ನಬಸವ ಸ್ವಾಮೀಜಿ, ಕಂಬಾಳು ಮಠದ ಶ್ರೀ ಚನ್ನವೀರ ಶಿವಾಚಾರ್ಯ ಸ್ವಾಮೀಜಿ, ಬಂಡೆಮಠದ ಶ್ರೀ ಮಹಾಲಿಂಗ ಸ್ವಾಮೀಜಿ, ಮುಖ್ಯ ಅತಿಥಿಗಳಾಗಿ ಶಾಸಕ ಶ್ರೀನಿವಾಸ್‌, ಎನ್‌ಪಿಎ ಅಧ್ಯಕ್ಷ ಎಂ.ಕೆ.ನಾಗರಾಜು, ಟಿಎಪಿಎಂಎಸ್ ಅಧ್ಯಕ್ಷ ಹನುಮಂತರಾಜು, ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ಎಚ್.ಕೆ.ಲೋಕೇಶ್, ತಾಪಂ ಮಾಜಿ ಸದಸ್ಯ ಮುನಿರಾಜು, ಎಂಬಿಟಿ ರಾಮಕೃಷ್ಣಪ್ಪ ಇತರರು ಉಪಸ್ಥಿತರಿದ್ದರು.

ಪೋಟೋ 1 : ತೊರೆಕೆಂಪೋಹಳ್ಳಿಯಲ್ಲಿ ಬಸವೇಶ್ವರ ಸ್ವಾಮಿ ಹಾಗೂ ಈಶ್ವರ ದೇವಾಲಯ ಉದ್ಘಾಟನೆ, ವಿಮಾನ ಗೋಪುರ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ ಕಿರಿಯ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಗದರಹಿತ ನೋಂದಣಿ ವ್ಯವಸ್ಥೆ ತಕ್ಷಣ ಸ್ಥಗಿತಗೊಳಿಸಿ
ಆಲಿಕಲ್ಲು ಸಹಿತ ಮಳೆಗೆ ತೆಂಗು ಅಡಿಕೆ ನಾಶ