ಕನ್ನಡಪ್ರಭ ವಾರ್ತೆ ಸಿರಿಗೆರೆ
ಸಿರಿಗೆರೆ ಸಮೀಪದ ಹಿರೇಕಬ್ಬಿಗೆರೆ ಗೊಲ್ಲರಹಟ್ಟಿಯಲ್ಲಿ ಆರಂಭವಾದ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಹಳ್ಳಿಗಳಲ್ಲಿ ಜೀವನ ಸಾಗಿಸುತ್ತಿರುವ ಬಡವರಿಗೆ ಎಲ್‌ಕೆಜಿ ಮತ್ತು ಯುಕೆಜಿ ಶಿಕ್ಷಣ ಗಗನ ಕುಸುಮವಾಗಿತ್ತು. ಈಗ ಹಳ್ಳಿಯ ಶಾಲೆಗಳಲ್ಲಿ ಮಕ್ಕಳಿಗೆ ಈ ಶಿಕ್ಷಣ ದೊರಕುತ್ತಿದೆ. ಪೋಷಕರು ಸರ್ಕಾರಿ ಶಾಲೆಯಲ್ಲಿನ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದರು.ಶಿಕ್ಷಣ ನಮ್ಮ ಬದುಕಿನಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ. ದೇಶವನ್ನು ಹೊಸ ದಿಕ್ಕಿನ ಕಡೆಗೆ ತೆಗೆದುಕೊಂಡು ಹೋಗುವಂತಹ ಶಕ್ತಿ ಶಿಕ್ಷಣಕ್ಕೆ ಮಾತ್ರವೇ ಇದೆ. ಇದನ್ನು ಅರಿತು ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದರು.
ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್ ಮಾತಾನಾಡಿ, ಎಲ್‌ಕೆಜಿ, ಯುಕೆಜಿ ಕಲಿಕೆಯ ಪರಿಣಾಮದ ಸಾಧ್ಯತೆಗಳ ಬಗ್ಗೆ ವಿವರಿಸಿದರು. ಹಳ್ಳಿ ಮಕ್ಕಳಿಗೆ ಉತ್ತಮ ಕಲಿಕೆ ಸೂಕ್ತವಾಗಿದೆ. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಸಂಖ್ಯೆಯ ಹೆಚ್ಚಳ ಆಗುವುದರ ಬಗ್ಗೆ ಗ್ರಾಮಸ್ಥರಿಗೆ ತಿಳಿ ಹೇಳಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಜಿ.ಬಿ.ಮಹಾಂತೇಶ್, ಖಜಾಂಚಿ ಎ.ಮಲ್ಲಿಕಾರ್ಜುನ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಕೇಶವಮೂರ್ತಿ, ನಿವೃತ್ತ ಮುಖ್ಯ ಶಿಕ್ಷಕ ವೀರಣ್ಣ, ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಹನುಮಂತಪ್ಪ ಉಪಸ್ಥಿತರಿದ್ದರು.