ಕನ್ನಡಪ್ರಭ ವಾರ್ತೆ ಮಡಿಕೇರಿ
ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಉನ್ನತಿ ಭವನದ ದಿ:ಪಂದ್ಯಂಡ.ಐ.ಬೆಳ್ಯಪ್ಪ ಸ್ಮಾರಕ ಸಭಾಂಗಣದಲ್ಲಿ ಶನಿವಾರ ನಡೆದ ಬ್ಯಾಂಕಿನ 99 ನೇ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೃಷಿಕರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ. ಆ ನಿಟ್ಟಿನಲ್ಲಿ ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ರು. ವರೆಗೂ ಸಾಲವನ್ನು ಸಹಕಾರ ಬ್ಯಾಂಕುಗಳ ಮೂಲಕ ವಿತರಿಸಲಾಗುತ್ತಿದೆ ಎಂದು ಬಾಂಡ್ ಗಣಪತಿ ಅವರು ಹೇಳಿದರು.ಸಹಕಾರ ಬ್ಯಾಂಕ್‌ಗಳು ಸರ್ಕಾರದ ಆದೇಶವನ್ನು ಕಡ್ಡಾಯವಾಗಿ ಪ್ರಥಮ ಆದ್ಯತೆಯಲ್ಲಿ ಪಾಲಿಸಬೇಕು. ಯಾವುದೇ ಕಾರಣಕ್ಕೂ ಲೆಕ್ಕ ಪರಿಶೋಧನೆಯನ್ನು ವಿಳಂಬ ಮಾಡಬಾರದು ಎಂದು ಕೊಡಂದೇರ ಪಿ.ಗಣಪತಿ ಅವರು ಒತ್ತಿ ಹೇಳಿದರು.
ಸಹಕಾರ ಸಂಘಗಳ ಕಾಯ್ದೆ ತಿದ್ದುಪಡಿಗೆ ಇದೇ ಸಂದರ್ಭದಲ್ಲಿ ಅತೃಪ್ತಿ ವ್ಯಕ್ತಪಡಿಸಿದ ಬಾಂಡ್ ಗಣಪತಿ ಅವರು ಆಡಳಿತ ಮಂಡಳಿಗೆ ನಾಮ ನಿರ್ದೇಶನ ಸದಸ್ಯರನ್ನು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನಾಗಿ ಪರಿಗಣಿಸುವುದು ಸರಿಯಲ್ಲ. ಈ ಬಗ್ಗೆ ಚಿಂತಿಸಬೇಕಿದೆ ಇದೇ ಸಂದರ್ಭದಲ್ಲಿ ತಿಳಿಸಿದರು.
2023-24ನೇ ಸಾಲಿನ ಲೆಕ್ಕ ಪರಿಶೋಧನೆ (ಆಡಿಟ್)ನಲ್ಲಿ ಇದೇ ಮೊದಲ ಬಾರಿಗೆ ಶೇ.93 ರಷ್ಟು ಅಂಕ ಪಡೆದು ಬ್ಯಾಂಕು ಕಳೆದ ಹಲವು ವರ್ಷಗಳಿಂದ ಆಡಿಟ್‌ನಲ್ಲಿ ‘ಎ’ ವರ್ಗೀಕರಣ ಇರುತ್ತದೆ. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನಿಂದ, 2022-23 ನೇ ಸಾಲಿಗೆ ಅತ್ಯುತ್ತಮ ಕಾರ್ಯ ನಿರ್ವಹಣೆಗೆ ನಮ್ಮ ಬ್ಯಾಂಕಿಗೆ 2024 ರ ಸೆಪ್ಟೆಂಬರ್, 13 ರಂದು ನಡೆದ ಅಪೆಕ್ಸ್ ಬ್ಯಾಂಕಿನ ವಾರ್ಷಿಕ ಮಹಾ ಸಭೆಯಲ್ಲಿ ‘ಅತ್ಯುತ್ತಮ ಸಾಧನಾ ತೃತೀಯ ಪ್ರಶಸ್ತಿ ದೊರೆತಿದೆ ಎಂದು ಇದೇ ಸಂದರ್ಭ ಮಾಹಿತಿ ನೀಡಿದರು.
ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ಕೇಟೋಳಿರ ಎಸ್.ಪೂವಯ್ಯ, ನಿರ್ದೇಶಕರಾದ ಹೊಟ್ಟೆಂಗಡ ಎಂ.ರಮೇಶ್, ಹೊಸೂರು ಜೆ.ಸತೀಶ್ ಕುಮಾರ್, ಕೆ.ಅರುಣ್ ಭೀಮಯ್ಯ, ಕಾಂಗೀರ ಎನ್.ಸತೀಶ್, ಪೂಳಂಡ ಪಿ.ಪೆಮ್ಮಯ್ಯ, ಎಚ್.ಕೆ.ಮಾದಪ್ಪ, ಎಸ್.ಸಿ.ಶರತ್‌ಶೇಖರ್, ಎನ್.ಎಂ.ಉತ್ತಪ್ಪ, ಶರವಣ ಕುಮಾರ್ ಟಿ.ಆರ್., ಗುಮ್ಮಟ್ಟೀರ ಎಸ್.ಕಿಲನ್ ಗಣಪತಿ, ಜಲಜಾ ಶೇಖರ್, ಎಂ.ಕೆ.ಬೆಳ್ಳಿಯಪ್ಪ, ವೃತ್ತಿಪರ ನಿರ್ದೇಶಕರಾದ ಎ.ಗೋಪಾಲಕೃಷ್ಣ, ಮುಂಡಂಡ ಸಿ.ನಾಣಯ್ಯ ಸಹಕಾರ ಸಂಘಗಳ ಉಪ ನಿಬಂಧಕರಾದ ಜಿ.ಆರ್.ವಿಜಯ್ ಕುಮಾರ್, ಬ್ಯಾಂಕಿನ ಸಿಇಒ ಪ್ರವೀಣ್ ಬಿ ನಾಯಕ್, ಪ್ರಧಾನ ವ್ಯವಸ್ಥಾಪಕಿ ಬೋಜಮ್ಮ ಜಿ.ಎಂ. ಇತರರು ಇದ್ದರು.