ಲಾಭ, ನಷ್ಟ ಏನೇ ಇರಲಿ ರೈತರಿಗೆ ಸಾಲ ನೀಡಲೇಬೇಕು

KannadaprabhaNewsNetwork |  
Published : Feb 14, 2026, 03:15 AM IST
ಸತೀಶ ಜಾರಕಿಹೊಳಿ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಬಿಡಿಸಿಸಿ ಬ್ಯಾಂಕ್‌ಗೆ ಲಾಭವಾಗಲಿ, ನಷ್ಟವಾಗಲಿ ರೈತರಿಗೆ ಸಾಲ ನೀಡುವುದು ಕಡ್ಡಾಯ. ಆರ್‌ಬಿಐ ಮತ್ತು ನಬಾರ್ಡ್‌ ನಿರ್ದೇಶನದಂತೆ ರೈತರಿಗೆ ಸಾಲ ನೀಡಲೇಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬಿಡಿಸಿಸಿ ಬ್ಯಾಂಕ್‌ಗೆ ಲಾಭವಾಗಲಿ, ನಷ್ಟವಾಗಲಿ ರೈತರಿಗೆ ಸಾಲ ನೀಡುವುದು ಕಡ್ಡಾಯ. ಆರ್‌ಬಿಐ ಮತ್ತು ನಬಾರ್ಡ್‌ ನಿರ್ದೇಶನದಂತೆ ರೈತರಿಗೆ ಸಾಲ ನೀಡಲೇಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಬೆಳಗಾವಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಬಿಡಿಸಿಸಿ ಬ್ಯಾಂಕ್ ರೈತರ ಬ್ಯಾಂಕ್ ಆಗಿದ್ದು, ರೈತರಿಗೆ ಸಾಲ ನೀಡಲೇಬೇಕು. ಆದರೆ, ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ನಬಾರ್ಡ್ ನಿರ್ದೇಶನದಂತೆ ಮಾತ್ರ ಸಾಲ ನೀಡಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು. ಬ್ಯಾಂಕ್ ಅಭಿವೃದ್ಧಿ ದೃಷ್ಟಿಯಿಂದ ಸಕ್ಕರೆ ಕಾರ್ಖಾನೆಗಳು ಸೇರಿದಂತೆ ಖಾಸಗಿ ವಲಯಕ್ಕೂ ಸಾಲ ನೀಡಲಾಗುತ್ತಿದೆ. ರೈತರಿಗೆ ನೀಡುವ ಸಾಲದ ಮಿತಿಯನ್ನು ಹೆಚ್ಚಿಸುವ ಅಧಿಕಾರ ಬಿಡಿಸಿಸಿ ಬ್ಯಾಂಕ್ ಕೈಯಲ್ಲಿ ಇಲ್ಲ. ರೈತರ ಸಾಲ ಮಿತಿ ಹೆಚ್ಚಿಸುವ ಅಧಿಕಾರ ಆರ್‌ಬಿಐ ಹಾಗೂ ನಬಾರ್ಡ್‌ ಕೈಯಲ್ಲಿದೆ ಎಂದರು.

ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಆಗುವ ಯೋಗ ಸಮೀಪ ಬಂದಿದೆ ಎಂಬ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅ‍ವರು, ಶಾಸಕರು ತಮ್ಮ ಇಲಾಖೆಗೆ ಬೇಕಾದ ಕೆಲಸಗಳಿಗೆ ಬಜೆಟ್‌ನಲ್ಲಿ ಅನುದಾನ ಕೇಳಿದ್ದಾರೆ. ಬೆಳಗಾವಿ ಜಿಲ್ಲೆಗೆ ಪ್ರತ್ಯೇಕವಾಗಿ ಹೆಚ್ಚಿನ ಅನುದಾನ ಕೇಳಿಲ್ಲ. ಇಲಾಖಾವಾರು ಸಿಗುವ ಅನುದಾನದಲ್ಲಿ ಜಿಲ್ಲೆಗೆ ಅಗತ್ಯವಿರುವ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗುವುದು. ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ಸಿಗುವ ವಿಶ್ವಾಸವಿದೆ ಎಂಬ ಆಶಯ ವ್ಯಕ್ತಪಡಿಸಿದರು.

ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿದೆ. ಜಿಲ್ಲೆಯಲ್ಲಿ ಬಿಎಲ್‌ಒಗಳು ಈಗಾಗಲೇ ಶೇ.70ರಷ್ಟು ಕೆಲಸ ಪೂರ್ಣಗೊಳಿಸಿದ್ದಾರೆ. ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುತ್ತಿದ್ದಾರೆ. ಖಾನಾಪುರದಲ್ಲಿ ಹಕ್ಕಿಪಿಕ್ಕಿ ಜನರಿಗೆ ಮತದಾನದ ಹಕ್ಕು ನೀಡದಿರುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಪರಿಶೀಲನೆ ನಡೆಸುವಂತೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಯಾವುದೇ ಹೆಸರುಗಳನ್ನು ತೆಗೆದುಹಾಕಿಲ್ಲ. ಹೆಸರು ತೆಗೆಯಲು ಇನ್ನೂ ನಿರ್ದೇಶನ ಬಂದಿಲ್ಲ. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ 2028ರವರೆಗೆ ನಡೆಯಲಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಕಾಲದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಯಾಗಲಿ
ಕಾರ್ಮಿಕ ದ್ರೋಹವನ್ನು ಸಹಿಸಲಾಗದು: ಬಿ.ಎಂ. ಭಟ್‌