ಕನ್ನಡಪ್ರಭ ವಾರ್ತೆ ಖಾನಾಪುರ
ತಾಲೂಕಿನ ಬೀಡಿ ಗ್ರಾಮದಲ್ಲಿ ಆಯೋಜಿಸಿದ್ದ ಪಕ್ಷದ ಹಿರಿಯ ಮುಖಂಡರು ಮತ್ತು ಬೀಡಿ ಹೋಬಳಿ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳಕರ ಅವರು ನೆರೆಯ ಮಹಾರಾಷ್ಟ್ರದಿಂದ ವಲಸೆ ಬಂದು ಇಲ್ಲಿಂದ ಮೂರು ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಒಮ್ಮೆ ಗೆದ್ದು ಎರಡು ಬಾರಿ ಸೋತಿದಿದ್ದಾರೆ. ಅವರು ಮತ್ತೊಂದು ಬಾರಿ ಅದೃಷ್ಟ ಪರೀಕ್ಷೆಗೆ ಇಳಿಯುವ ಸೂಚನೆ ನೀಡಿದ್ದು, ಇದಕ್ಕೆ ಸ್ಥಳೀಯ ಕಾರ್ಯಕರ್ತರ ವಿರೋಧವಿದೆ. ಇವರೊಂದಿಗೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಹಾಗೂ ನಾಗರಾಜು ಯಾದವ ಅವರೂ ಸಹ ಖಾನಾಪುರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳುತ್ತಿದ್ದಾರೆ. ಇದನ್ನೂ ನಾವು ವಿರೋಧಿಸುತ್ತಿದ್ದೇವೆ. ಕ್ಷೇತ್ರದಲ್ಲಿ ಪಕ್ಷದ ಅನೇಕ ಮುಖಂಡರು ಕಣಕ್ಕಿಳಿಯಲು ಸಮರ್ಥರಿದ್ದು, ಸ್ಥಳೀಯರನ್ನು ಕಡೆಗಣಿಸಿ ಹೊರಗಿನವರಿಗೆ ಅವಕಾಶ ನೀಡಬಾರದು ಆಗ್ರಹಿಸಿದರು.
ನಮ್ಮ ಆಗ್ರಹವನ್ನು ಪಕ್ಷದ ಹೈಕಮಾಂಡ್ ಗೆ ತಿಳಿಸಿದ ಬಳಿಕ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಿದ್ದೇವೆ. ಹಿಂದು-ಮುಸ್ಲಿಂ, ಮರಾಠಾ, ಲಿಂಗಾಯತ, ಹಿಂದುಳಿದ ವರ್ಗ, ಪರಿಶಿಷ್ಟ ವರ್ಗ ಸೇರಿದಂತೆ ಸ್ಥಳೀಯ ಯಾವುದೇ ಅಭ್ಯರ್ಥಿಗೆ ಟಿಕೆಟ್ ನೀಡಿದರೂ ಎಲ್ಲರೂ ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಪ್ರಯತ್ನಿಸುತ್ತೇವೆ. ಆದರೆ, ಪಕ್ಷ ಹೊರಗಿನವರಿಗೆ ಟಿಕೆಟ್ ನೀಡುವ ತೀರ್ಮಾನ ಕೈಗೊಂಡರೆ ಅದನ್ನು ಎಲ್ಲರೂ ಸೇರಿ ಒಮ್ಮತದಿಂದ ವಿರೋಧಿಸುತ್ತೇವೆ ಎಂದು ಸಾಹುಕಾರ ತಿಳಿಸಿದರು.ಈ ಸಂಧರ್ಭದಲ್ಲಿ ಪಕ್ಷದ ಹಿರಿಯರಾದ ಮಹೇಶ ಪಾಟೀಲ, ಗೋಪಾಳ ಬಾಪಶೇಟ, ಜ್ಞಾನೇಶ್ವರ ಪಾಳೇಕರ, ಅಶ್ರಫ್ ತಾಸೇವಾಲೆ ಮತ್ತಿತರರು ಇದ್ದರು.