ರಾಮನಗರ: ನಗರದ ಗಾಂಧಿನಗರದಲ್ಲಿ ಅಳವಡಿಸಿರುವ ಮೂರು ಬೋರ್ಡ್ ಗಳಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳು ಅಪಮಾನ ಮಾಡಿರುವ ಘಟನೆ ಗುರುವಾರ ರಾತ್ರಿ ಜರುಗಿದೆ.
ನಗರದ ಜನನಿಬಿಡ ಜೂನಿಯರ್ ಕಾಲೇಜು ರಸ್ತೆಗೆ ಹೊಂದಿಕೊಂಡಂತಿರುವ ಗಾಂಧಿನಗರದ ಎರಡು ಅಡ್ಡರಸ್ತೆಗಳಲ್ಲಿ ಮತ್ತು ಬಿ.ಎಂ ರಸ್ತೆಯ ಗಾಂಧಿನಗರ ವೃತ್ತದ ಅರಳಿಮರದ ಬಳಿ ಅಳವಡಿಸಿದ್ದ ಅಂಬೇಡ್ಕರ್ ಭಾವಚಿತ್ರ ಮತ್ತು ಸಂದೇಶ ಇರುವ ಬೋರ್ಡ್‌ಗಳನ್ನು ಅಳವಡಿಸಲಾಗಿದೆ. ತಡರಾತ್ರಿ ಕಿಡಿಗೇಡಿಗಳು, ಮೂರು ಬೋರ್ಡ್‌ಗಳನ್ನು ಅವಮಾನ ಮಾಡಿದ್ದಾರೆ ಎಂದು ಪ್ರತಿಭಟನಾನಿತರು ಆಕ್ರೋಶ ವ್ಯಕ್ತಪಡಿಸಿದರು.
ಸಂವಿಧಾನ ಶಿಲ್ಪಿಗೆ ಅವಮಾನ ಮಾಡಿರುವ ಕಿಡಿಗೇಡಿಗಳನ್ನು ಪೊಲೀಸರು 24 ತಾಸಿನಗೊಳಗೆ ಪತ್ತೆಹಚ್ಚಿ ಬಂಧಿಸಬೇಕು. ಇಲ್ಲಿಯವರೆಗೆ ನಗರದಲ್ಲಿ ಇಂತಹ ಯಾವುದೇ ಘಟನೆ ನಡೆದಿರಲಿಲ್ಲ. ಇದೀಗ ಕಿಡಿಗೇಡಿಗಳು ಶಾಂತಿಯುತ ವಾತಾವರಣವನ್ನು ಕದಡುವ ಕೆಲಸ ಮಾಡಿದ್ದಾರೆ. ಮುಂದೆ ಯಾರೂ ಇಂತಹ ನೀಚ ಕೃತ್ಯಕ್ಕೆ ಕೈ ಹಾಕದಂತೆ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಸ್ಥಳಕ್ಕೆ ಭೇಟಿ ನೀಡಿದ ಡಿವೈಎಸ್ಪಿ ಬಿ.ಎನ್. ಶ್ರೀನಿವಾಸ್ ಮತ್ತು ರಾಮನಗರ ಪುರ ಠಾಣೆ ಸಬ್ ಇನ್‌ಸ್ಪೆಕ್ಟರ್ ತನ್ವೀರ್ ಹುಸೇನ್ ಅವರು, ಅಂಬೇಡ್ಕರ್ ಚಿತ್ರಕ್ಕೆ ಅವಮಾನವಾಗಿರುವ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆದಷ್ಟು ಬೇಗ ಕಿಡಿಗೇಡಿಗಳನ್ನು ಬಂಧಿಸಲಾಗುವುದು ಎಂದು ಭರವಸೆ ನೀಡಿದರು. ಬಳಿಕ ಸ್ಥಳೀಯರು ಪ್ರತಿಭಟನೆ ನಿಲ್ಲಿಸಿದರು.
9ಕೆಆರ್ ಎಂಎನ್ 6.ಜೆಪಿಜಿರಾಮನಗರದ ಗಾಂಧಿನಗರದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿರುವುದನ್ನು ಖಂಡಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು.