ಡಿ.12ಕ್ಕೆ ಜಿಲ್ಲೆಯಾದ್ಯಂತ ಲೋಕ್‌ ಅದಾಲತ್

KannadaprabhaNewsNetwork |  
Published : Oct 10, 2026, 01:45 AM IST
ಧಾರವಾಡ ಜಿಲ್ಲಾ ಪಂಚಾಯ್ತಿ ಕಚೇರಿ | Kannada Prabha

ಸಾರಾಂಶ

ಚಾಮರಾಜನಗರ: ರಾಷ್ಟ್ರೀಯ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದಂತೆ ಚಾಮರಾಜನಗರ ಜಿಲ್ಲಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್ ಪ್ರಕ್ರಿಯೆಯನ್ನು ಡಿ.12ರಂದು ಹಮ್ಮಿಕೊಳ್ಳಲಾಗಿದೆ

ಚಾಮರಾಜನಗರ: ರಾಷ್ಟ್ರೀಯ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದಂತೆ ಚಾಮರಾಜನಗರ ಜಿಲ್ಲಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್ ಪ್ರಕ್ರಿಯೆಯನ್ನು ಡಿ.12ರಂದು ಹಮ್ಮಿಕೊಳ್ಳಲಾಗಿದೆ.

ಈ ಲೋಕ್ ಅದಾಲತ್‌ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದ್ದಲ್ಲಿ, ಮುಂಚಿತವಾಗಿ ಚಾಮರಾಜನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ಆಯಾಯ ತಾಲ್ಲೂಕು ಕಾನೂನು ಸೇವಾ ಸ ಮಿತಿಗಳನ್ನು ಆನ್‌ಲೈನ್, ವೀಡಿಯೊ ಕಾನ್ಫರೆನ್ಸ್, ಇ-ಮೇಲ್, ಎಸ್.ಎಂ.ಎಸ್., ವಾಟ್ಸಾಪ್ ಮೂಲಕ ಅಥವಾ ಖುದ್ದಾಗಿ ಹಾಜರಾಗುವ ಮೂಲಕ ಸಂಪರ್ಕಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಕೋರಿದೆ.

ಲೋಕ್ ಅದಾಲತ್ ನಿಮಿತ್ತ ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜೀ ಯೋಗ್ಯ ದಾವೆ, ಪ್ರಕರಣಗಳನ್ನು ಶೀಘ್ರ ಪರಿಣಾಮಕಾರಿ ತೀರ್ಮಾನಕ್ಕೆ ಎ.ಡಿ.ಆರ್. ಕಟ್ಟಡದಲ್ಲಿ ಪೂರ್ವಭಾವಿ ಸಮಾಲೋಚನಾ ಕೇಂದ್ರ ತೆರೆಯಲಾಗಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ.

ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವೂ ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು.

ಪ್ರತಿದಿನ ಜಿಲ್ಲೆಯಲ್ಲಿರುವ ಎಲ್ಲಾ ನ್ಯಾಯಾಲಯಗಳಲ್ಲಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಲೋಕ್ ಅದಾಲತ್ ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‌ಗಳು ಭೌತಿಕ ಹಾಗೂ ವಿಡಿಯೋ ಕಾನ್ಸರೆನ್ಸ್ ಮೂಲಕ ಕರ್ನಾಟಕ ಉಚ್ಚ ನ್ಯಾಯಾಲಯದ ಎಸ್‌ಒಪಿ ನಿಯಮಗಳಂತೆ ನಡೆಯುತ್ತವೆ.

ಹೆಚ್ಚಿನ ಮಾಹಿತಿಗೆ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ 15100, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ 1800-425-90900, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಚಾಮರಾಜನಗರ 08226-226022, ತಾಲೂಕು ಕಾನೂನು ಸೇವಾ ಸಮಿತಿಗಳಾದ ಕೊಳ್ಳೇಗಾಲ 08224-256788, ಗುಂಡ್ಲುಪೇಟೆ 08229-223279, ಯಳಂದೂರು 08226-240229 ಇ-ಮೇಲ್ dlsachnagar2021@gmail.com ಸಂಪರ್ಕಿಸುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉದ್ಘಾಟನೆಗೆ ಮುನ್ನವೇ ಕಟ್ಟಡ ಬಿರುಕು
ಬಸರವಳ್ಳಿ ಪಂಚಾಯಿತಿ ಹಸಲರ ವಾರ್ಡಿಗೆ ಬೇಕಿದೆ ಸಂಪರ್ಕ ಸೇತುವೆ