ಡಿ.13ಕ್ಕೆ ಲೋಕ್‌ಅದಾಲತ್: ನ್ಯಾ. ಎಂ.ಎಸ್.ಸಂತೋಷ್

KannadaprabhaNewsNetwork |  
Published : Nov 28, 2025, 01:30 AM IST
ಪೊಟೋ: 27ಎಸ್‌ಎಂಜಿಕೆಪಿ04ಶಿವಮೊಗ್ಗದ ಜಿಲ್ಲಾ ನ್ಯಾಯಲಯದ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್. ಸಂತೋಷ್ ಮಾತನಾಡಿದರು. | Kannada Prabha

ಸಾರಾಂಶ

ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳ ಶೀಘ್ರ ವಿಲೇವಾರಿ ಹಾಗೂ ಪಕ್ಷಗಾರರಿಗೆ ತ್ವರಿತ ನ್ಯಾಯದಾನ ನೀಡುವ ಉದ್ದೇಶದಿಂದ ಡಿ.13ರಂದು ಈ ವರ್ಷದ ಕೊನೆಯ ಲೋಕ್‌ಅದಾಲತ್‌ನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್.ಸಂತೋಷ್ ತಿಳಿಸಿದರು.

ಶಿವಮೊಗ್ಗ: ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳ ಶೀಘ್ರ ವಿಲೇವಾರಿ ಹಾಗೂ ಪಕ್ಷಗಾರರಿಗೆ ತ್ವರಿತ ನ್ಯಾಯದಾನ ನೀಡುವ ಉದ್ದೇಶದಿಂದ ಡಿ.13ರಂದು ಈ ವರ್ಷದ ಕೊನೆಯ ಲೋಕ್‌ಅದಾಲತ್‌ನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್.ಸಂತೋಷ್ ತಿಳಿಸಿದರು. ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಡಿ.13ರಂದು ಜರುಗುವ ಲೋಕ್ ಅದಾಲತ್‌ನಲ್ಲಿ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ವೈವಾಹಿಕ ವಿವಾಹದ ವ್ಯಾಜ್ಯಗಳು, ಅಪಘಾತಕ್ಕೆ ಸಂಬಂಧಿಸಿದ ಪರಿಹಾರದ ವ್ಯಾಜ್ಯಗಳು, ಕೌಟುಂಬಿಕ ದೌರ್ಜನ್ಯ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ವಾಣಿಜ್ಯ ವಿವಾದದ ದಾವೆಗಳು, ವೇತನ ಮತ್ತು ಸೇವೆಗೆ ಸಂಬಂಧಿಸಿದ ವ್ಯಾಜ್ಯಗಳು, ರಾಜೀ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಗ್ರಾಹಕರ ವೇದಿಕೆಯ ಪ್ರಕರಣಗಳು, ಸಾಲದ ಪ್ರಕರಣಗಳು, ಪಾಲು ವಿಭಾಗದ ದಾವೆಗಳು, ಸ್ಥಿರ ಆಸ್ತಿ ಸ್ವಾಧೀನದ ದಾವೆಗಳು, ಭೂಸ್ವಾಧೀನದ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳ ರಾಜೀ ಸಂಧಾನಕ್ಕಾಗಿ ಉಭಯ ಪಕ್ಷಗಾರರ ಉಪಸ್ಥಿತಿಯಲ್ಲಿ ನ್ಯಾಯಾಧೀಶರು ಮತ್ತು ನ್ಯಾಯಿಕೇತರ ಸಂಧಾನಕಾರರು ರಾಜೀ ಸಂಧಾನದ ಪ್ರಕ್ರಿಯೆಯನ್ನು ಕೈಗೊಂಡು ಪಕ್ಷಗಾರರು ವಿವಾದವನ್ನು ಇತ್ಯರ್ಥಪಡಿಸುವರು. ಅಂದರಂತೆ ಅಂತಿಮ ಆದೇಶವನ್ನು ಅದೇ ದಿನದಂದು ನೀಡಲಾಗುವುದು. ಸಾರ್ವಜನಿಕರು ಮತ್ತು ಪಕ್ಷಗಾರರು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಕಳೆದ ಸೆಪ್ಟೆಂಬರ್‌ 13ರಂದು ಕೈಗೊಂಡಿದ್ದ ಈ ವರ್ಷದ 3ನೇ ರಾಷ್ಟ್ರೀಯ ಲೋಕ್‌ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇದ್ದ 14550 ರಷ್ಟು ಪ್ರಕರಣಗಳು ರಾಜೀ ಸಂಧಾನದ ಮೂಲಕ ಕೊನೆಗೊಂಡಿದ್ದು, ಅವುಗಳ ಮೂಲಕ ಪಕ್ಷಗಾರರು ಒಟ್ಟು 36,49,86,652 ರು. ಮೊತ್ತದ ಪರಿಹಾರ ಒಳಗೊಂಡ ವಿವಾದಗಳನ್ನು ರಾಜೀ ಮಾಡಿಕೊಂಡಿದ್ದಾರೆ. ಅದೇ ಸಂದರ್ಭದಲ್ಲಿ ಒಟ್ಟು 1,46,464 ವ್ಯಾಜ್ಯ ಪೂರ್ವ ಪ್ರಕರಣಗಳು ಕೊನೆಗೊಂಡಿದ್ದು, ಅವುಗಳ ಮೂಲಕ ಒಟ್ಟು 46,95,49,044 ರು. ಮೊತ್ತದ ಪರಿಹಾರ ಒಳಗೊಂಡ ವಿವಾದಗಳನ್ನು ರಾಜೀ ಮಾಡಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉದ್ಯೋಗಾಂಕ್ಷಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸುದ್ದಿ
ಜನಪ್ರತಿನಿಧಿಗಳಿಗೆ ಗೌರ್‍ನರ್‌ ಅಪಮಾನ : ಸಿದ್ದರಾಮಯ್ಯಆಕ್ರೋಶ