ಜು.12ರಂದು ಲೋಕ್ ಅದಾಲತ್

KannadaprabhaNewsNetwork |  
Published : Jun 25, 2025, 01:18 AM IST
24ಜಿಯುಡಿ2 | Kannada Prabha

ಸಾರಾಂಶ

ವಿವಾದಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಒಂದು ಉತ್ತಮ ಅವಕಾಶವಾಗಿದ್ದು ತಾಲೂಕಿನ ಹಾಗೂ ನ್ಯಾಯಾಲಯ ವ್ಯಾಪ್ತಿಯ ಕಕ್ಷಿದಾರರು ಸದುಪಯೋಗ ಪಡೆದು ಶಾಶ್ವತವಾಗಿ ಪರಿಹಾರ ಕಂಡುಕೊಳ್ಳಬೇಕು. ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಬಗೆಹರಿಸಿಕೊಳ್ಳಿ.

ಕನ್ನಡಪ್ರಭ ವಾರ್ತೆ ಗುಡಿಬಂಡೆ

ಪಟ್ಟಣದ ನ್ಯಾಯಾಲಯ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ ವತಿಯಿಂದ ಜುಲೈ 12 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು, ಇದನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಜೆ.ಎಂ.ಎಫ್.ಸಿ ನ್ಯಾಯಾಧೀಶೆ ಸವಿತಾ ರುದ್ರಗೌಡ ಚಿಕ್ಕನಗೌಡರ್‌ ತಿಳಿಸಿದರು.

ಪಟ್ಟಣದ ನ್ಯಾಯಾಲಯದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜುಲೈ 12ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಂಡಿದ್ದು, ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿಯಾಗಬಲ್ಲ ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡು ನೆಮ್ಮದಿಯ ಜೀವನ ರೂಪಿಸಿಕೊಳ್ಳಬೇಕು ಎಂದರು.

ಸೌಹಾರ್ದಯುತ ಇತ್ಯರ್ಥ

ವಿವಾದಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಒಂದು ಉತ್ತಮ ಅವಕಾಶವಾಗಿದ್ದು ತಾಲೂಕಿನ ಹಾಗೂ ನ್ಯಾಯಾಲಯ ವ್ಯಾಪ್ತಿಯ ಕಕ್ಷಿದಾರರು ಸದುಪಯೋಗ ಪಡೆದು ಶಾಶ್ವತವಾಗಿ ಪರಿಹಾರ ಕಂಡುಕೊಳ್ಳಬೇಕು. ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಜು. 12 ರಂದು ನಿಗದಿಯಾಗಿರುವ ಲೋಕ ಅದಾಲತ್ ಮೂಲಕ ತಕ್ಷಣ ಬಗೆಹರಿಸಿಕೊಳ್ಳಬಹುದು ಎಂದು ತಿಳಿಸಿದರು.

ಯಾವುದೇ ಶುಲ್ಕ ಇಲ್ಲ

ರಾಜಿಯಾಗುವ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವ ಸಲುವಾಗಿ ರಾಷ್ಟ್ರ ಮಟ್ಟದಿಂದ ತಾಲೂಕು ಮಟ್ಟದವರೆಗೂ ಅದಾಲತ್ ನಡೆಸಲಾಗುತ್ತಿದೆ. ಬ್ಯಾಂಕ್, ಅಪಘಾತ, ಸಣ್ಣಪುಟ್ಟ ಜಗಳ, ಜನನ ಪ್ರಮಾಣ ಪತ್ರ, ನಂತಹ ಪ್ರಕರಣಗಳು ಸೇರಿದಂತೆ ಕಕ್ಷಿದಾರರು ಇಚ್ಛಿಸಿದಲ್ಲಿ ಕಾನೂನು ವ್ಯಾಪ್ತಿಯಲ್ಲಿ ಅವಕಾಶ ಇರುವ ಎಲ್ಲಾ ರೀತಿಯ ಪ್ರಕರಣಗಳನ್ನು ಅದಾಲತ್ ನಲ್ಲಿ ವಿಲೇವಾರಿ ಮಾಡಲಾಗುವುದು. ಕಕ್ಷಿದಾರರು ರಾಜಿ ಅಥವಾ ಸಂಧಾನದ ಮೂಲಕ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೆ ಇತ್ಯರ್ಥ ಪಡಿಸಿಕೊಳ್ಳಬಹುದು ಎಂದರು.

ಈ ಪೂರ್ವಭಾವಿ ಸಭೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ಅಶ್ವತ್ಥರೆಡ್ಡಿ, ಆರಕ್ಷಕ ವೃತ್ತ ನಿರೀಕ್ಷಕ ನಯಾಜ್ ಬೇಗ್, ಸಬ್ ಇನ್ಸ್‌ಪೆಕ್ಟರ್ ಗಣೇಶ್, ಜಗದೀಶರೆಡ್ಡಿ, ಗೌರಿಬಿದನೂರು ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ರಮೇಶ್ ಗುಗ್ಗುರಿ, ಸಿಡಿಪಿಒ ರಫೀಕ್ ಸೇರಿದಂತೆ ನ್ಯಾಯಾಲಯದ ಸಿಬ್ಬಂದಿ ಹಾಜರಿದ್ದರು.

PREV

Recommended Stories

ಧರ್ಮಸ್ಥಳ ಕೇಸ್‌ : ಅರ್ಧ ಕೋಟಿ ವ್ಯಯ?
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ