ನರಸಿಂಹರಾಜಪುರ: ಕಕ್ಷಿದಾರರು ನ್ಯಾಯಾಲಯದಲ್ಲಿ ಬಾಕಿ ಇರುವ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಡಿ.13 ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಕೆ.ಟಿ.ರಘುನಾಥ್‌ಗೌಡ ಹೇಳಿದರು.
ನ್ಯಾಯಾಲಯದಲ್ಲಿ ಈಗಾಗಲೇ ಇತ್ಯರ್ಥವಾಗದೇ ಇರುವ ಪ್ರಕರಣಗಳನ್ನೂ ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿ ಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಿದ ಶುಲ್ಕ ಸಂಪೂರ್ಣವಾಗಿ ಹಿಂದಿರುಗಿಸಲಾಗುವುದು ಎಂದರು. ಕಿರಿಯ ಸಿವಿಲ್ ನ್ಯಾಯಾಧೀಶ ಆರ್.ಎಸ್.ಜೀತು ಮಾತನಾಡಿ,ಲೋಕ ಅದಾಲತ್‌ನಲ್ಲಿ ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆ ಆದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಅತ್ಯಂತ ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದು ಜನರಿಗೆ ಒಂದು ಸುವರ್ಣಾವಕಾಶ. ಹೆಚ್ಚಿನ ಮಾಹಿತಿಗೆ ತಾಲೂಕು ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸಬಹುದು. ಈ ಲೋಕ ಅದಾಲತ್‌ನ ಬಗ್ಗೆ ಕಕ್ಷಿದಾರರಿಗೆ ಹೆಚ್ಚಿನ ಮಾಹಿತಿ ನೀಡುವಂತೆ ಸಭೆಯಲ್ಲಿದ್ದ ಎಲ್ಲಾ ವಕೀಲರು ಹಾಗೂ ಪೊಲೀಸರಿಗೆ ಸೂಚಿಸಿದರು. ಸಭೆಯಲ್ಲಿ ಸರ್ಕಾರಿ ಅಭಿಯೋಜಕ ಗದಿಗೆಪ್ಪನೇಕಾರ್, ತಾಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ಜಯಪ್ರಕಾಶ್, ವಕೀಲರಾದ ಎನ್.ವಿ.ಸುಜಯ್,ಎಂ.ಆರ್.ಶಿವಪ್ರಸಾದ್, ವಿದ್ವತ್ ಗೌಡ, ಪೌಲ್ ಚೆರಿಯನ್, ತಾ.ಪಂ. ಸಹಾಯಕ ನಿರ್ದೇಶಕ ಎನ್.ಎಲ್.ಮನೀಶ, ಪೊಲೀಸ್ ಇಲಾಖೆ ಅಧಿಕಾರಿ ಇದ್ದರು.