ಹಾವೇರಿ: ಲೋಕಸಭಾ ಚುನಾವಣೆಯು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬವಾಗಿದೆ. ಪ್ರತಿಯೊಬ್ಬ ಮತದಾರರು ತಪ್ಪದೆ ಮತದಾನ ಮಾಡುವ ಮೂಲಕ ಚುನಾವಣಾ ಹಬ್ಬದಲ್ಲಿ ಭಾಗವಹಿಸಬೇಕು ಎಂದು ತಾಲೂಕು ಸ್ವೀಪ್ ಸಮಿತಿಯ ಅಧ್ಯಕ್ಷ ಹಾಗೂ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಹೆಗಡೆ ಹೇಳಿದರು.
ಕಾಲೇಜಿನ ವಿದ್ಯಾರ್ಥಿಗಳು ಮತ್ತು ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕು. ದೇಶದ ಅಭಿವೃದ್ಧಿ ಕುರಿತಾದ ಪರಿಕಲ್ಪನೆಗಳು ಸಾಕಾರಗೊಳ್ಳಲು ಮತದಾನದ ಹಕ್ಕು ಚಲಾಯಿಸುವುದು ಅವಶ್ಯವಾಗಿದೆ. ಮತದಾರರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗಬಾರದು ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಡಿ.ಟಿ. ಪಾಟೀಲ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸ್ಮಿತಾ, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಸ್ವೀಪ್ ಚಟುವಟಿಕೆ ಅನುಷ್ಠಾನಕ್ಕೆ ಸಮಿತಿ ರಚನೆ:
ತಾಲೂಕು ಮಟ್ಟದ ಸಮಿತಿ: ತಾಲೂಕು ಮಟ್ಟದ ಸಮಿತಿಗೆ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಗಳು ಅಧ್ಯಕ್ಷರಾಗಿದ್ದು, ತಹಸೀಲ್ದಾರ್ ಉಪಾಧ್ಯಕ್ಷರಾಗಿದ್ದಾರೆ. ಪಂ.ರಾ.ಇಂ.ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು, ಹಿಂದುಳಿದ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ, ಪಶು ಪಾಲನಾ ಮತ್ತು ಪಶುವೈದ್ಯ ಸೇವೆ ಸಹಾಯಕ ನಿರ್ದೇಶಕ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ತಾಲೂಕು ಆರೋಗ್ಯಾಧಿಕಾರಿ, ನಗರಸಭೆ ಮುಖ್ಯಾಧಿಕಾರಿಗಳು ಸದಸ್ಯರಾಗಿದ್ದು, ತಾಪಂ ಸಹಾಯಕ ನಿರ್ದೇಶಕರು ನೋಡಲ್ ಅಧಿಕಾರಿಗಳಾಗಿದ್ದಾರೆ.ಗ್ರಾಪಂ ಮಟ್ಟದಲ್ಲಿ ಪಿಡಿಒ ಅಧ್ಯಕ್ಷರಾಗಿದ್ದು, ಪಂಚಾಯಿತಿ ವ್ಯಾಪ್ತಿಯ ಶಾಲೆಗಳ ಮುಖ್ಯೋಪಾಧ್ಯಾಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆರೋಗ್ಯ ಕೇಂದ್ರಗಳ ಎ.ಎನ್.ಎಂ.ಗಳು ಸದಸ್ಯರಾಗಿದ್ದಾರೆ.