ಲೋಕಸಭಾ ಚುನಾವಣೆ ಹಿನ್ನೆಲೆ: ಮದ್ಯ ಮಾರಾಟ ನಿಷೇಧ

KannadaprabhaNewsNetwork |  
Published : Mar 23, 2024, 01:02 AM IST
ಎಲೆಕ್ಷನ್‌ | Kannada Prabha

ಸಾರಾಂಶ

ಏ.24ರ ಸಂಜೆ 5 ಗಂಟೆಯಿಂದ ಏ.26ರ ಮಧ್ಯರಾತ್ರಿ 12ರ ವರೆಗೆ ಹಾಗೂ ಜೂ.3ರಂದು ಮಧ್ಯರಾತ್ರಿ 12 ಗಂಟೆಯಿಂದ ಜೂ.4ರ ಮಧ್ಯರಾತ್ರಿ 12 ರವರೆಗೆ ಜಿಲ್ಲಾದ್ಯಂತ ಎಲ್ಲ ಮದ್ಯದಂಗಡಿಗಳನ್ನು ಮುಚ್ಚಲು ಡಿಸಿ ಆದೇಶ.

ಕನ್ನಡಪ್ರಭ ವಾರ್ತೆ ಉಡುಪಿಲೋಕಸಭಾ ಚುನಾವಣೆಗೆ ಉಡುಪಿ ಜಿಲ್ಲೆಯಲ್ಲಿ ಏ.26ರಂದು ಮತದಾನ ಹಾಗೂ ಜೂ.4ರಂದು ಮತ ಎಣಿಕೆ ನಡೆಯಲಿದ್ದು, ಈ ಸಂದರ್ಭ ಶಾಂತಿ ಪಾಲನೆ, ಕಾನೂನು - ಸುವ್ಯವಸ್ಥೆ ರಕ್ಷಣೆ ಮತ್ತು ಸಾರ್ವಜನಿಕರ ಸುರಕ್ಷತೆಯ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಈ ದಿನಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(ಬಿ) ರಂತೆ ಹಾಗೂ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951ರ ಕಲಂ135 (ಸಿ)ರಂತೆ ಏ.24ರ ಸಂಜೆ 5 ಗಂಟೆಯಿಂದ ಏ.26ರ ಮಧ್ಯರಾತ್ರಿ 12ರ ವರೆಗೆ ಹಾಗೂ ಜೂ.3ರಂದು ಮಧ್ಯರಾತ್ರಿ 12 ಗಂಟೆಯಿಂದ ಜೂ.4ರ ಮಧ್ಯರಾತ್ರಿ 12 ರವರೆಗೆ ಜಿಲ್ಲಾದ್ಯಂತ ಎಲ್ಲ ಮದ್ಯದಂಗಡಿಗಳನ್ನು, ಮದ್ಯ ಮಾರಾಟ ಡಿಪ್ಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು, ಮದ್ಯ ಮಾರಾಟ ಮಾಡುವ ಎಲ್ಲ ಹೋಟೆಲ್‌ಗಳನ್ನು, ಶೇಂದಿ ಅಂಗಡಿಗಳನ್ನು ಹಾಗೂ ಕ್ಲಬ್‌ಗಳನ್ನು ಮುಚ್ಚಲು ಆದೇಶಿಸಿ, ಮದ್ಯ ಮಾರಾಟ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.* ನೀತಿಸಂಹಿತೆ ಸಹಾಯವಾಣಿಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಇದಕ್ಕೆ ಸಂಬಂಧಪಟ್ಟಂತೆ ಸಾರ್ವಜನಿಕರು ದೂರುಗಳನ್ನು ಸಲ್ಲಿಸಲು ಉಡುಪಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್ ರೂಮ್ ಸಂ.0820-2530100 ಅನ್ನು ತೆರೆಯಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಹಾಯಕ ಚುನಾವಣಾಧಿಕಾರಿ ಪ್ರಕಟಣೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!