ಕನ್ನಡಪ್ರಭ ವಾರ್ತೆ ತುಮಕೂರು
ತಮ್ಮ ಕಚೇರಿಯಲ್ಲಿಂದು ನಾಮಪತ್ರಗಳ ಪೂರ್ವ ಪರಿಶೀಲನೆ, ನಮೂನೆಗಳನ್ನು ಸಿದ್ಧಪಡಿಸುವುದು, ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡುವುದು ಸೇರಿದಂತೆ ಮತ್ತಿತರ ಪ್ರಕ್ರಿಯೆಗಳ ಬಗ್ಗೆ ಸಭೆ ನಡೆಸಿ ಮಾತನಾಡಿದ ಅವರು, ನಾಮಪತ್ರವನ್ನು ಮಾರ್ಚ್ 28ರಿಂದ ಏಪ್ರಿಲ್ 4ರವರೆಗೆ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಸ್ವೀಕರಿಸಲಾಗುವುದು ಎಂದು ತಿಳಿಸಿದರು.
ನಾಮಪತ್ರ ಸಲ್ಲಿಸುವ ಅಭ್ಯರ್ಥಿಯ ಹೆಸರು ಯಾವುದೇ ಲೋಕಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿತವಾಗಿರಬೇಕು. ಅಭ್ಯರ್ಥಿಯು 25 ವರ್ಷ ವಯೋಮಿತಿಯವರಾಗಿದ್ದು, ಭಾರತೀಯ ನಾಗರಿಕರಾಗಿರಬೇಕು. ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ ಓರ್ವ ಸೂಚಕರನ್ನು ಹೊಂದಲು ಅವಕಾಶವಿದ್ದು, ಈ ಸೂಚಕರು ಸಂಬಂಧಪಟ್ಟ ಲೋಕಸಭಾ ಕ್ಷೇತ್ರದ ಮತದಾರರಾಗಿರಬೇಕು. ನೋಂದಾಯಿತ ರಾಜಕೀಯ ಪಕ್ಷಗಳು ಹಾಗೂ ಸ್ವತಂತ್ರ ಅಭ್ಯರ್ಥಿಗಳಿಗೆ 10 ಜನ ಸೂಚಕರು ಕಡ್ಡಾಯವಾಗಿ ಇರಬೇಕು. ಎಲ್ಲಾ ಸೂಚಕರು ಸಂಬಂಧಪಟ್ಟ ಲೋಕಸಭಾ ಕ್ಷೇತ್ರದ ಮತದಾರರಾಗಿರಬೇಕು ಎಂದು ತಿಳಿಸಿದರು. ಓರ್ವ ಅಭ್ಯರ್ಥಿಯು ಗರಿಷ್ಠ 4 ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿದ್ದು, ಒಂದು ನಾಮಪತ್ರದ ಜೊತೆ ಪೂರ್ಣ ಪ್ರಮಾಣದ ದಾಖಲಾತಿ ನೀಡಿದಲ್ಲಿ ಉಳಿಕೆ ನಾಮಪತ್ರಗಳಿಗೆ ಕೇವಲ ನಾಮಪತ್ರ ಮಾತ್ರ ಸಲ್ಲಿಸಿದರೆ ಸಾಕು. ನಾಮಪತ್ರ ಸ್ವೀಕರಿಸುವ ಕೋಣೆಯಲ್ಲಿ ಒಂದು ಸಿ.ಸಿ.ಟಿ.ವಿ., ಒಂದು ಗೋಡೆ ಗಡಿಯಾರ(ಸರಿಯಾದ ವೇಳೆ ತೋರಿಸುವುದು)ವನ್ನು ಅಳವಡಿಸಲಾಗುವುದಲ್ಲದೆ ಹಾಗೂ ಓರ್ವ ವಿಡಿಯೋಗ್ರಾಫರ್ ಅನ್ನು ನಿಯೋಜಿಸಲಾಗುವುದು ಎಂದು ತಿಳಿಸಿದರು.ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಒಬ್ಬ ಅಭ್ಯರ್ಥಿಯ ಜೊತೆ 4 ಜನಕ್ಕೆ ಮಾತ್ರ ಚುನಾವಣಾಧಿಕಾರಿಗಳ ಕೊಠಡಿಯ ಒಳಗೆ ಪ್ರವೇಶಾವಕಾಶವಿದ್ದು, ನಾಮಪತ್ರವನ್ನು ಅಭ್ಯರ್ಥಿ ಅಥವಾ ಸೂಚಕ ಸಲ್ಲಿಸಲು ಅವಕಾಶವಿರುತ್ತದೆ ಎಂದು ತಿಳಿಸಿದರು.
ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳು ಅಭ್ಯರ್ಥಿಗಳು ಫಾರ್ಮ್-ಎ ಮತ್ತು ಫಾರ್ಮ್-ಬಿಗಳನ್ನು ನಾಮಪತ್ರ ಸಲ್ಲಿಕೆಯ ಕೊನೆಯ ದಿನ ಅಂದರೆ ಏಪ್ರಿಲ್ ೪ರಂದು ಮಧ್ಯಾಹ್ನ 3 ಗಂಟೆಯ ಒಳಗಾಗಿ ಸಲ್ಲಿಸಬೇಕು. ನಾಮಪತ್ರದ ಜೊತೆ ಇತ್ತೀಚಿನ ಅಂದರೆ ಮೂರು ತಿಂಗಳೊಳಗಿನ ಭಾವಚಿತ್ರವನ್ನು ಲಗತ್ತಿಸಬೇಕು. ಭಾವಚಿತ್ರದ ಹಿಂಭಾಗದಲ್ಲಿ ಬಿಳಿ ಬಣ್ಣದ್ದಾಗಿರಬೇಕು. ಕ್ಯಾಪ್, ಹ್ಯಾಟ್, ಡಾರ್ಕ್ ಸನ್ ಗ್ಲಾಸಸ್, ಯೂನಿಫಾರಂ ಇರುವ ಭಾವಚಿತ್ರಗಳಿಗೆ ಅವಕಾಶವಿರುವುದಿಲ್ಲ .
ಈ ಎರಡು ದಿನ ನಾಮಪತ್ರ ಸ್ವೀಕಾರ ಇಲ್ಲ:
---------------------------
------------------- ಠೇವಣಿ ಹಣ ಎಷ್ಟು?