ಮುಂಬರುವ ಲೋಕಸಭಾ ಚುನಾವಣೆಯ ವಿವಿಧ ಕರ್ತವ್ಯಗಳ ನಿರ್ವಹಣೆಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿ ಮತ್ತು ಜವಾಬ್ದಾರಿ ಅರಿತು ಯಾವುದೇ ಲೋಪಗಳಿಗೆ ಆಸ್ಪದ ನೀಡದೆ ಕರ್ತವ್ಯ ನಿರ್ವಹಿಸಬೇಕು.
ಕಾರವಾರ:
ಮುಂಬರುವ ಲೋಕಸಭಾ ಚುನಾವಣೆಯ ವಿವಿಧ ಕರ್ತವ್ಯಗಳ ನಿರ್ವಹಣೆಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿ ಮತ್ತು ಜವಾಬ್ದಾರಿ ಅರಿತು ಯಾವುದೇ ಲೋಪಗಳಿಗೆ ಆಸ್ಪದ ನೀಡದೆ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಕಟ್ಟುನಿಟ್ಟಿನ ಸೂಚನೆ ನೀಡಿದರು.ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಚುನಾವಣಾ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನೋಡೆಲ್ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಗಳ ಬಗ್ಗೆ ತಮ್ಮ ಅಧೀನ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಿ ಅವರನ್ನು ಚುನಾವಣಾ ಕರ್ತವ್ಯಗಳಿಗೆ ಸಜ್ಜುಗೊಳಿಸಬೇಕು. ತರಬೇತಿ ಸಮಯದಲ್ಲಿ ಸಿಬ್ಬಂದಿಗೆ ಕರ್ತವ್ಯ ನಿರ್ವಹಣೆ ಕುರಿತಂತೆ ಇರುವ ಸಂದೇಹ ಮತ್ತು ಗೊಂದಲ ಪರಿಹರಿಸಿ, ಅವರು ಪರಿಪೂರ್ಣವಾಗಿ ಕರ್ತವ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು. ಚುನಾವಣಾ ದಿನಾಂಕ ಘೋಷಣೆಯಾದ ಕೂಡಲೇ ತಮ್ಮ ವ್ಯಾಪ್ತಿಗಳಲ್ಲಿ ತಕ್ಷಣ ಕೈಗೊಳ್ಳಬೇಕಾದ ಕ್ರಮ ಮತ್ತು ಅದಕ್ಕೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಸಾಕಷ್ಟು ಮುಂಚಿತವಾಗಿ ಮಾಡಿಕೊಳ್ಳುವ ಮೂಲಕ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಸಿದ್ಧರಿರಬೇಕು ಎಂದು ತಿಳಿಸಿದರು.ಚುನಾವಣಾ ಪ್ರಕ್ರಿಯೆ ನಡೆಸಲು ಅಗತ್ಯವಿರುವ ಸಿಬ್ಬಂದಿ, ವಾಹನ, ಇವಿಎಂ, ಸಂಪರ್ಕ ವ್ಯವಸ್ಥೆ, ಮಾಧ್ಯಮ ನಿರ್ವಹಣೆ, ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಣೆ, ತಾಂತ್ರಿಕ ಸಿಬ್ಬಂದಿ, ಚುನಾವಣಾ ಸಾಮಗ್ರಿಗಳ ಹಂಚಿಕೆ, ಅಂಚೆ ಮತ ಪತ್ರಗಳ ನಿರ್ವಹಣೆ, ಚುನಾವಣಾ ಲೆಕ್ಕಪತ್ರಗಳ ನಿರ್ವಹಣೆ, ಚುನಾವಣಾ ವೀಕ್ಷಕರ ಕಾರ್ಯನಿರ್ವಹಣೆಗೆ ಅಗತ್ಯವಿರುವ ಮೂಲಭೂತ ವ್ಯವಸ್ಥೆ, ವಿಕಲಚೇತನ ಮತದಾರರು ಮತ್ತು ಹಿರಿಯ ನಾಗರಿಕ ಮತದಾರರಿಗೆ ಅಗತ್ಯ ಸೌಲಭ್ಯ ಒದಗಿಸುವುದು ಸೇರಿದಂತೆ ಇಡೀ ಚುನಾವಣಾ ಪ್ರಕ್ರಿಯೆಯನ್ನು ಸುಗಮ, ಶಾಂತಿಯುತ ಮತ್ತು ಪಾರದರ್ಶಕವಾಗಿ ನಡೆಸಲು ನೋಡೆಲ್ ಅಧಿಕಾರಿಗಳುಕರ್ತವ್ಯ ನಿರ್ವಹಿಸಬೇಕು ಎಮದರು.ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಹಾಗೂ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ನೋಡಲ್ ಅಧಿಕಾರಿಗಳು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.