ಸಬ್‌ ರಿಜಿಸ್ಟ್ರಾರ್‌ ಕಚೇರಿ ಮೇಲೆ ಲೋಕಾ ದಾಳಿ

KannadaprabhaNewsNetwork |  
Published : Jul 02, 2026, 03:00 AM IST
ಉಪನೋಂದಣಾಧಿಕಾರಿ ಕಚೇರಿಯಲ್ಲಿ ಕಡತ ಪರಿಶೀಲನೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು. | Kannada Prabha

ಸಾರಾಂಶ

ಲೋಕಾಯುಕ್ತ ಅಧಿಕಾರಿಗಳ ಭ್ರಷ್ಟಾಚಾರ ನಿಗ್ರಹ ದಳ ಇಂಡಿ ನಗರದ ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಬುಧವಾರ ದಿಢೀರ್ ದಾಳಿ ನಡೆಸಿದ್ದು, ₹೫೦ ಸಾವಿರಕ್ಕೂ ಅಧಿಕ ನಗದು ಜಪ್ತಿ ಮಾಡಿಕೊಂಡು ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ಇಂಡಿ

ಲೋಕಾಯುಕ್ತ ಅಧಿಕಾರಿಗಳ ಭ್ರಷ್ಟಾಚಾರ ನಿಗ್ರಹ ದಳ ಇಂಡಿ ನಗರದ ಉಪನೋಂದಣಾಧಿಕಾರಿ (ಸಬ್ ರಿಜಿಸ್ಟ್ರಾರ್) ಮತ್ತು ವಿವಾಹ ನೋಂದಣಾಧಿಕಾರಿಗಳ ಕಚೇರಿ ಮೇಲೆ ಬುಧವಾರ ದಿಢೀರ್ ದಾಳಿ ನಡೆಸಿದ್ದು, ಈ ವೇಳೆ ಅಕ್ರಮವಾಗಿ ಹಣ ಇಟ್ಟುಕೊಂಡಿದ್ದ ₹೫೦ ಸಾವಿರಕ್ಕೂ ಅಧಿಕ ನಗದು ಜಪ್ತಿ ಮಾಡಿಕೊಂಡಿದ್ದು, ಹೊಂದಿದ್ದ ಐವರು ಬಾಂಡ್‌ ರೈಟರ್ಸ್‌ ಹಾಗೂ ಏಜೆಂಟರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಚೇರಿಯಲ್ಲಿದ್ದ ಪ್ರಮುಖ ಕಡತಗಳು (ಫೈಲ್ಸ್) ಹಾಗೂ ಏಜೆಂಟ್‌ಗಳ ವ್ಯವಹಾರಗಳ ದಾಖಲೆಗಳನ್ನು ಅಧಿಕಾರಿಗಳು ತೀವ್ರ ಪರಿಶೀಲನೆಗೆ ಒಳಪಡಿಸಿದ್ದಾರೆ.

ಸಾರ್ವಜನಿಕರಿಂದ ಬಂದ ದೂರು ಹಾಗೂ ಕಚೇರಿಯಲ್ಲಿ ನಡೆಯುತ್ತಿದ್ದ ಲಂಚಾವತಾರದ ಖಚಿತ ಮಾಹಿತಿ ಆಧರಿಸಿ ಲೋಕಾಯುಕ್ತ ಎಸ್.ಪಿ ಟಿ. ಮಲ್ಲೇಶಿ, ಡಿವೈಎಸ್‌ಪಿ ಮಲ್ಲಿಕಾರ್ಜುನ ತುಳಸಿಗೇರಿ, ಸಿಪಿಐ ಆನಂದ ಠಕ್ಕಣ್ಣನವರ, ಆನಂದ ಡೋಣಿ ಒಳಗೊಂಡ ತಂಡ ದಾಳಿ ನಡೆಸಿದೆ. ಕಚೇರಿಯಲ್ಲಿ ತನಿಖೆ ಮುಂದುವರೆದಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೈಜ ದೇವರ ಕೆಲಸ ಮಾಡುತ್ತಿರುವ ಕ್ರೆಡಿಟ್‌ ಆಕ್ಸೆಸ್ ಇಂಡಿಯಾ ಫೌಂಡೇಶನ್‌
ಆ್ಯಂಬುಲೆನ್ಸ್ ಸೇವೆಗೆ ಎಸ್.ಆರ್.ಪಾಟೀಲ ಚಾಲನೆ