ಕಡತ ವಿಲೇವಾರಿಯಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ಪಟ್ಟಣದ ಸರ್ವೇ ಇಲಾಖೆಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಬೆಳಗ್ಗಿನಿಂದ ಸಂಜೆಯವರೆಗೂ ದಾಖಲೆಗಳನ್ನು ಪರಿಶೀಲಿಸಿದರು.
ಸೋಮವಾರಪೇಟೆ: ಕಡತ ವಿಲೇವಾರಿಯಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ಪಟ್ಟಣದ ಸರ್ವೇ ಇಲಾಖೆಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಬೆಳಗ್ಗಿನಿಂದ ಸಂಜೆಯವರೆಗೂ ದಾಖಲೆಗಳನ್ನು ಪರಿಶೀಲಿಸಿದರು. ಕೊಡಗು ಲೋಕಾಯುಕ್ತ ಪೊಲೀಸರೊಂದಿಗೆ ಮೈಸೂರಿನ ಲೋಕಾಯುಕ್ತ ಅಧಿಕಾರಿಗಳೂ ಸಹ ಭಾಗಿಯಾಗಿದ್ದರು. ಸಾರ್ವಜನಿಕರ ಕೆಲಸ ಕಾರ್ಯಗಳು ವಿಳಂಬ ಹಾಗೂ ಸರ್ಕಾರಿ ಕೆಲಸ ಕಾರ್ಯಗಳಲ್ಲಿನ ನಿರ್ಲಕ್ಷತೆಯ ಹಿನ್ನೆಲೆಯಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದೆ.
ಸಾರ್ವಜನಿಕರ ಕಡತಗಳು ವಿಲೇವಾರಿಗೆ ಬಾಕಿ ಇರುವ ಬಗ್ಗೆ ಹಲವಷ್ಟು ಸಭೆಗಳಲ್ಲಿ ಮೌಖಿಕ ದೂರುಗಳು, ಕೆಲವೊಮ್ಮೆ ಲಿಖಿತ ದೂರುಗಳು ಸಲ್ಲಿಕೆಯಾಗಿದ್ದವು. ಹೀಗಾಗಿ ಸುಮೊಟೋ ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು ಇಂದು ಕಾರ್ಯಾಚರಣೆ ನಡೆಸಿ, ಕಡತಗಳನ್ನು ಸಂಜೆಯವರೆಗೂ ಪರಿಶೀಲಿಸಿದರು. ಲೋಕಾಯುಕ್ತ ಪೊಲೀಸ್ ನಿರೀಕ್ಷಕಿ ವೀಣಾ ನಾಯಕ್, ಮೈಸೂರು ಲೋಕಾಯುಕ್ತದ ಪೊಲೀಸ್ ನಿರೀಕ್ಷಕಿ ಸ್ವರ್ಣ ಅವರುಗಳ ನೇತೃತ್ವದಲ್ಲಿ ಜಿಲ್ಲೆಯ ನಾಲ್ವರು, ಮೈಸೂರಿನ ಮೂವರು ಸಿಬ್ಬಂದಿಗಳ ತಂಡದಿಂದ ಕಾರ್ಯಾಚರಣೆ ನಡೆಸಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.