ಬಸವಕಲ್ಯಾಣ: ಲೋಕಾಯುಕ್ತರಾದ ಕಲಬುರಗಿ ಡಿವೈಎಸ್ಪಿ ಆ್ಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿದರು.
ಆಸ್ಪತ್ರೆಯಲ್ಲಿ ಎಲ್ಲೆಡೆ ಸ್ವಚ್ಛತೆ ಕಾಪಾಡಬೇಕು. ರೋಗಿಗಳಿಗೆ ಸರ್ಕಾರದ ಎಲ್ಲಾ ಸೌಲಭ್ಯ ಒದಗಿಸಬೇಕು. ಯಾವುದೇ ಕಾರಣಕ್ಕೂ ತಾರತಮ್ಯ ಸಲ್ಲದು. ಸಿಬ್ಬಂದಿ ನಿಯಮಿತವಾಗಿ ಕರ್ತವ್ಯ ನಿರ್ವಹಿಸುವಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಆಸ್ಪತ್ರೆ ಮುಖ್ಯ ವೈದ್ಯೆ ಡಾ.ಅಪರ್ಣಾ ಮಹಾನಂದ ಹಾಗೂ ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ ಮೈಲಾರೆ ಅವರಿಗೆ ಸೂಚಿಸಿದರು. ಲೋಕಾಯುಕ್ತ ಬೀದರ್ ಡಿವೈಎಸ್ಪಿ ಎನ್.ಎಂ.ಓಲೇಕಾರ್, ಇತರೆ ಅಧಿಕಾರಿಗಳಾದ ಅನಿಲಕುಮಾರ, ಪ್ರದೀಪ ಕೊಳ್ಳಾ, ಬಾಬಾಸಾಹೇಬ್ ಪಾಟೀಲ, ಸಂತೋಷ ರಾಠೋಡ, ರಾಜೀವ ಮತ್ತಿತರರು ಇದ್ದರು.