ಶ್ರೀರಂಗಪಟ್ಟಣ ತಾಲೂಕು ಕಚೇರಿಗೆ ಲೋಕಾಯುಕ್ತ ಪೊಲೀಸರ ದಿಢೀರ್ ಭೇಟಿ

KannadaprabhaNewsNetwork | Published : Apr 20, 2025 1:47 AM

ಸಾರಾಂಶ

ಶ್ರೀರಂಗಪಟ್ಟಣ ತಾಲೂಕು ಕಚೇರಿಗೆ ಲೋಕಾಯುಕ್ತ ಎಸ್‌ಪಿ ಸುರೇಶ್‌ಬಾಬು, ಇನ್ಸ್‌ಪೆಕ್ಟರ್ ಬ್ಯಾಟರಾಯಿಗೌಡ ಸೇರಿದಂತೆ 9 ಮಂದಿ ಸಿಬ್ಬಂದಿ ತಂಡ ಕಡತಗಳ ಪರಿಶೀಲನೆ ನಡೆಸಿತು. ಉಪ ತಹಶೀಲ್ದಾರ್ ಸೇರಿದಂತೆ ಹಲವು ಅಧಿಕಾರಿಗಳ ಬಳಿ ಇರುವ ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿದೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ತಾಲೂಕು ಕಚೇರಿಗೆ ಲೋಕಾಯುಕ್ತ ಪೊಲೀಸರು ಭೇಟಿ ನೀಡಿ ದಾಖಲೆಗಳ ಪರಿಶೀಲನೆ ನಡೆಸಿದರು.

ಪಟ್ಟಣದ ಮಿನಿ ವಿಧಾನಸೌಧದಲ್ಲಿ ಕಂದಾಯ, ಭೂಮಿ ಶಾಖೆ ಸೇರಿದಂತೆ ಇತರೆ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಕೆಲಸ ವಿಳಂಬ, ಅಕ್ರಮ ಹಾಗೂ ಲಂಚ ಕೊಟ್ಟರೆ ಮಾತ್ರ ಕೆಲಸ ಮಾಡಿಕೊಡುತ್ತಾರೆಂಬ ಆರೋಪಗಳು ಸಾರ್ವಜನಿಕರಿಂದ ಕೇಳಿ ಬಂಗದಿದ್ದವು.

ಈ ಹಿನ್ನೆಲೆಯಲ್ಲಿ ಜೊತೆಗೆ ಲೋಕಾಯುಕ್ತಾ ಅಧಿಕಾರಿಗಳು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ಶನಿವಾರ ದಿಢೀರ್ ಭೇಟಿ ನೀಡಿ ದಾಖಲೆಗಳ ಪರಶೀಲನೆ ನಡೆಸಿದರು.

ಲೋಕಾಯುಕ್ತ ಎಸ್‌ಪಿ ಸುರೇಶ್‌ಬಾಬು, ಇನ್ಸ್‌ಪೆಕ್ಟರ್ ಬ್ಯಾಟರಾಯಿಗೌಡ ಸೇರಿದಂತೆ 9 ಮಂದಿ ಸಿಬ್ಬಂದಿ ತಂಡ ಕಡತಗಳ ಪರಿಶೀಲನೆ ನಡೆಸಿತು. ಉಪ ತಹಶೀಲ್ದಾರ್ ಸೇರಿದಂತೆ ಹಲವು ಅಧಿಕಾರಿಗಳ ಬಳಿ ಇರುವ ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿದೆ ಎಂದರು.

ತಾಲೂಕು ಕಚೇರಿಯಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಸಕಾಲ ಬೋಡ್, ಆರ್‌ಟಿಐ ಅರ್ಜಿಗಳನ್ನು ಯಾರಿಗೆ ನೀಡಬೇಕು, ಮಾಹಿತಿ ಅಧಿಕಾರಿಗಳು ಯಾರು, ಮೇಲ್ಮನವಿ ಪ್ರಾಧಿಕಾರದ ಅಧಿಕಾರಿಗಳು ಯಾರು ಹಾಗೂ ಲೋಕಾಯುಕ್ತ ಕಚೇರಿಯ ನಂಬರ್ ಲಗತ್ತಿಸಬೇಕು. ಅಲ್ಲದೇ, ಪ್ರತಿ ಟೇಬಲ್‌ಗಲ್ಲೂ ಹುದ್ದೆ ಸಹಿತ ನಾಮ ಫಲಕ, ಐಡಿ ಕಾರ್ಡ್ ಧರಿಸಿರುವ ಬಗ್ಗೆ ಪರಿಶೀಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ವೃದ್ಧಾಪ್ಯ ವೇತನ, ವಿಧವಾ ವೇತನ, ಪಹಣಿ ಸಮಸ್ಯೆ ಸೇರಿದಂತೆ ಸಾರ್ವಜನಿಕರ ಅರ್ಜಿ ವಿಳಂಭವಾಗಿರುವ ದಾಖಲೆಗಳನ್ನು ಪರಿಶೀಲಿಸಿ ವಿಳಂಭ ಮಾಡಿರುವ ಅಧಿಕಾರಗಳ ವಿರುದ್ಧ ಮೇಲಾಧಿಕಾರಿಗಳಿಗೆ ದೂರು ನೀಡುವುದಾಗಿ ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಿದರು.

ದಿಶಾ ಸಮಿತಿ ಸಭೆ ಮುಂದೂಡಿಕೆ

ಮಂಡ್ಯ: ಏ.22 ರಂದು ಆಯೋಜಿಸಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ (ದಿಶಾ) ಸಭೆಯನ್ನು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವಹಾಗೂ ಸಂಸದರ ಮೌಖಿಕ ನಿರ್ದೇಶನದಂತೆ ಮುಂದೂಡಲಾಗಿದೆ. ಮುಂದಿನ ದಿಶಾ ಸಮಿತಿ ಸಭೆ ದಿನಾಂಕವನ್ನು ತಿಳಿಸಲಾಗುವುದು ಎಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.

Share this article