ಸಕಲೇಶಪುರ ಆರ್‌ಎಫ್‌ಓ ಮೇಲೆ ಲೋಕಾಯುಕ್ತ ದಾಳಿ

KannadaprabhaNewsNetwork |  
Published : Nov 19, 2026, 01:45 AM IST
18ಎಚ್ಎಸ್ಎನ್11ಎ: ಹಾಸನ ನಗರದ ಚಿಕ್ಕಹೊನ್ನೇನಹಳ್ಳಿಯಲ್ಲಿರುವ ಹೇಮಂತ್ ಅವರ ಸ್ವಂತ ನಿವಾಸ. | Kannada Prabha

ಸಾರಾಂಶ

ಸಕಲೇಶಪುರ ವಲಯದ ಪ್ರಾದೇಶಿಕ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್ ಅವರಿಗೆ ಸಂಬಂಧಿಸಿದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಆಲೂರು ತಾಲ್ಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿರುವ ಹೇಮಂತ್‌ಕುಮಾರ್ ಅವರ ಮಾವನ ಮನೆ ಹಾಗೂ ಹಾಸನ ನಗರದ ಕುವೆಂಪು ನಗರದಲ್ಲಿರುವ ಅವರ ಆಪ್ತ ಗುತ್ತಿಗೆದಾರ ಹರೀಶ್ ಅವರ ನಿವಾಸದ ಮೇಲೂ ದಾಳಿ ನಡೆಸಲಾಗಿದೆ. ಹೀಗೆ ಒಟ್ಟು ಐದು ಸ್ಥಳಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ನಂದಿನಿ, ಡಿವೈಎಸ್ಪಿ ಸುರೇಶ್ ಅವರ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್‌ಗಳಾದ ಶಿಲ್ಪ, ಗವಿರಾಜು ಹಾಗೂ ಚಂದ್ರಶೇಖರ್ ಸೇರಿದಂತೆ ಲೋಕಾಯುಕ್ತ ಅಧಿಕಾರಿಗಳ ತಂಡ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದೆ.

ಕನ್ನಡಪ್ರಭ ವಾರ್ತೆ ಹಾಸನ

ಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಸಕಲೇಶಪುರ ವಲಯದ ಪ್ರಾದೇಶಿಕ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್ ಅವರಿಗೆ ಸಂಬಂಧಿಸಿದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಹೇಮಂತ್‌ ಕುಮಾರ್‌ ಅವರ ಆಸ್ತಿ ಮತ್ತು ಹಣಕಾಸಿನ ವ್ಯವಹಾರಗಳ ಕುರಿತು ಬಂದಿರುವ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಹಾಸನ ನಗರದ ಚಿಕ್ಕಹೊನ್ನೇನಹಳ್ಳಿಯಲ್ಲಿರುವ ಅವರ ಸ್ವಂತ ನಿವಾಸ, ಸಕಲೇಶಪುರದಲ್ಲಿರುವ ಬಾಡಿಗೆ ಮನೆ ಹಾಗೂ ಸಕಲೇಶಪುರದ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ತಂಡ ದಾಖಲೆಗಳನ್ನು ಪರಿಶೀಲನೆ ನಡೆಸಿದೆ. ಇದರ ಜತೆಗೆ, ಆಲೂರು ತಾಲ್ಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿರುವ ಹೇಮಂತ್‌ಕುಮಾರ್ ಅವರ ಮಾವನ ಮನೆ ಹಾಗೂ ಹಾಸನ ನಗರದ ಕುವೆಂಪು ನಗರದಲ್ಲಿರುವ ಅವರ ಆಪ್ತ ಗುತ್ತಿಗೆದಾರ ಹರೀಶ್ ಅವರ ನಿವಾಸದ ಮೇಲೂ ದಾಳಿ ನಡೆಸಲಾಗಿದೆ. ಹೀಗೆ ಒಟ್ಟು ಐದು ಸ್ಥಳಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ನಂದಿನಿ, ಡಿವೈಎಸ್ಪಿ ಸುರೇಶ್ ಅವರ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್‌ಗಳಾದ ಶಿಲ್ಪ, ಗವಿರಾಜು ಹಾಗೂ ಚಂದ್ರಶೇಖರ್ ಸೇರಿದಂತೆ ಲೋಕಾಯುಕ್ತ ಅಧಿಕಾರಿಗಳ ತಂಡ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದೆ.ಒಂದೇ ಸಮಯದಲ್ಲಿ ಮನೆ, ಕಚೇರಿ ಹಾಗೂ ಸಂಬಂಧಿಕರು ಮತ್ತು ಆಪ್ತರ ನಿವಾಸಗಳ ಮೇಲೆ ದಾಳಿ ನಡೆಸಿರುವುದು ವಿಶೇಷ ಗಮನ ಸೆಳೆದಿದೆ. ಅಧಿಕಾರಿಗಳು ಆಸ್ತಿ ದಾಖಲೆಗಳು, ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳು ಹಾಗೂ ಇತರೆ ಮಾಹಿತಿಗಳನ್ನು ಪರಿಶೀಲಿಸುತ್ತಿದ್ದಾರೆ. ಪರಿಶೀಲನೆಯ ಬಳಿಕ ಒಟ್ಟು ಆಸ್ತಿಯ ಮೌಲ್ಯ, ಆದಾಯದ ಮೂಲ ಮತ್ತು ಆರೋಪಗಳಿಗೆ ಸಂಬಂಧಿಸಿದ ಮಹತ್ವದ ವಿವರಗಳು ಹೊರಬರಲಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಡುಪಿ: ಕಿಶೋರ ಯಕ್ಷಗಾನ ಸಂಭ್ರಮಕ್ಕೆ ಚಾಲನೆ
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಿ